AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಎರಡು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಅನುಮಾನಾಸ್ಪದ ಸಾವು

ಅನುಷಾ ಎಂಬಾಕೆ ಎರಡು ತಿಂಗಳ ಹಿಂದೆಯಷ್ಟೇ ಮಂಡ್ಯ ಮೂಲದ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಳು. ಆದರೀಗ ಆಕೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ವರದಕ್ಷಿಣೆಗಾಗಿ ಪತಿ ಕುಟುಂಬಸ್ಥರು ಕಿರುಕುಳ ನೀಡುತ್ತಿದ್ದು, ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರು: ಎರಡು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಅನುಮಾನಾಸ್ಪದ ಸಾವು
ಸಾಂದರ್ಭಿಕ ಚಿತ್ರ
Shivaprasad B
| Updated By: Rakesh Nayak Manchi|

Updated on: Dec 03, 2023 | 5:41 PM

Share

ಬೆಂಗಳೂರು, ಡಿ.3: ನವವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಗರದ (Bengaluru) ಮಹದೇವಪುರದ ಪೊಲೀಸ್ ಠಾಣಾ ವ್ಯಾಪ್ತಿಯ ಸಿಂಗಯ್ಯಪಾಳ್ಯದಲ್ಲಿ ನಡೆದಿದೆ. ಅನುಷಾ (23) ಮೃತ ನವವಿವಾಹಿತೆ. ಕಳೆದ ಎರಡು ತಿಂಗಳ ಹಿಂದೆಯಷ್ಟೇ ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ ಮೂಲದ ಪ್ರವೀಣ್ ಎಂಬಾತನನ್ನು ಅನುಷಾ ಪ್ರೀತಿಸಿ ಮದುವೆಯಾಗಿದ್ದಳು.

ಪ್ರವೀಣ್ ಮತ್ತು ಅನುಷಾ ಮಂಡ್ಯ ಮೂಲದವರಾಗಿದ್ದು, ಬೆಂಗಳೂರು ನಗರದ ಮಹದೇವಪುರದ ಪೊಲೀಸ್ ಠಾಣಾ ವ್ಯಾಪ್ತಿಯ ಸಿಂಗಯ್ಯಪಾಳ್ಯದಲ್ಲಿ ವಾಸವಿದ್ದರು. ಆದರೆ, ವರದಕ್ಷಿಣೆ ತರುವಂತೆ ಅತ್ತೆ ನಾಗಮ್ಮ ಮತ್ತು ಸೋದರ ಮಾವ ರಾಜೇಶ್ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ನೆಲಮಂಗಲ: ಮಕ್ಕಳಾಗಿಲ್ಲ ಎಂದು ಮನನೊಂದು ನೀರಿನ ಸಂಪ್‌ಗೆ ಬಿದ್ದು ಗೃಹಿಣಿ ಆತ್ಮಹತ್ಯೆ

ಪ್ರವೀಣ್ ಕುಟುಂಬದವರು ಅನುಷಾಳಿಗೆ ವರದಕ್ಷಿಣೆ ಕಿರುಕುಳ ಮತ್ತು ಹಲ್ಲೆ ನಡೆಸಿದ್ದಾರೆ ಎಂದು ಅನುಷಾಳ ಪೋಷಕರು ಆರೋಪಿಸಿದ್ದಾರೆ. ಮೃತಳ ಪೋಷಕರು ನೀಡಿದ ದೂರಿನ ಅನ್ವಯ ಮಹದೇವಪುರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆತ್ಮಹತ್ಯೆ ಸಹಾಯವಾಣಿ

ಕಾರಣ ಯಾವುದೇ ಇರಲಿ, ಆತ್ಮಹತ್ಯೆಯ ನಿರ್ಧಾರ ಬೇಡ. ಆತ್ಮಹತ್ಯೆಯ ಭಾವನೆಗಳು ಮನಸ್ಸಿನಲ್ಲಿ ಸುಳಿಯುತ್ತಿದ್ದರೆ ನಿಮ್ಮ ಆಪ್ತರೊಂದಿಗೆ ಮಾತನಾಡಿ. ಸಾಧ್ಯವಾಗದಿದ್ದರೆ ಆತ್ಮಹತ್ಯೆ ಸಹಾಯವಾಣಿಗೆ ಕರೆ ಮಾಡಿ. ಸಹಾಯವಾಣಿ ಸಂಖ್ಯೆ – 9152987821, ಆರೋಗ್ಯ ವಾಣಿ: 104, ಸಹಾಯ್ ಸಹಾಯವಾಣಿ: 080-25497777

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ