AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಪೆಂಟಾ ಲಸಿಕೆ ಚುಚ್ಚುಮದ್ದು ಪಡೆದ ಕೆಲವೇ ಹೊತ್ತಲ್ಲಿ ಒಂದೂವರೆ ತಿಂಗಳ ಮಗು ಸಾವು

ಚುಚ್ಚುಮದ್ದು ಪಡೆದ ಕೆಲವೇ ಹೊತ್ತಿನಲ್ಲಿ ಮಗು ಮೃತಪಟ್ಟ ಘಟನೆ ರಾಮನಗರ ಜಿಲ್ಲೆಯ ಚನ್ನಟ್ಟಣ ತಾಲೂಕಿನ ಭೈರಾಪಟ್ಟಣ ಗ್ರಾಮದಲ್ಲಿ ನಡೆದಿದೆ. ದೊಡ್ಡಮಳೂರು ಗ್ರಾಮದಲ್ಲಿ ಪೆಂಟಾ ವ್ಯಾಕ್ಸಿನ್ ಹಾಕಿಸಿದ ಒಂದು ಗಂಟೆ ಬಳಿಕ ಮಗುವಿನ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಸಾವನ್ನಪ್ಪಿದೆ.

ರಾಮನಗರ: ಪೆಂಟಾ ಲಸಿಕೆ ಚುಚ್ಚುಮದ್ದು ಪಡೆದ ಕೆಲವೇ ಹೊತ್ತಲ್ಲಿ ಒಂದೂವರೆ ತಿಂಗಳ ಮಗು ಸಾವು
ರಾಮನಗರದ ಚನ್ನಪಟ್ಟಣದಲ್ಲಿ ಚುಚ್ಚುಮದ್ದು ಪಡೆದ ಕೆಲವೇ ಹೊತ್ತಿನಲ್ಲಿ ಒಂದೂವರೆ ತಿಂಗಳ ಮಗು ಸಾವು
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: Rakesh Nayak Manchi|

Updated on: Feb 13, 2024 | 4:53 PM

Share

ರಾಮನಗರ, ಫೆ.13: ಚುಚ್ಚುಮದ್ದು ಪಡೆದ ಕೆಲವೇ ಹೊತ್ತಿನಲ್ಲಿ ಒಂದೂವರೆ ತಿಂಗಳ ಗಂಡು ಮಗು ಮೃತಪಟ್ಟ ಘಟನೆ ರಾಮನಗರ (Ramanagara) ಜಿಲ್ಲೆಯ ಚನ್ನಟ್ಟಣ ತಾಲೂಕಿನ ಭೈರಾಪಟ್ಟಣ ಗ್ರಾಮದಲ್ಲಿ ನಡೆದಿದೆ. ಸ್ಪೂರ್ತಿ ಮತ್ತು ಮೋಹನ್ ದಂಪತಿಯ ಜಸ್ವಿಕ್ ಮೃತ ಮಗು.

ಇಂದು ದೊಡ್ಡಮಳೂರು ಗ್ರಾಮದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ 18 ಮಕ್ಕಳಿಗೆ ಪೆಂಟಾ ಲಸಿಕೆ ನೀಡಿದ್ದಾರೆ. ಈ ಮಕ್ಕಳ ಪೈಕಿ ಸ್ಪೂರ್ತಿ ಮತ್ತು ಮೋಹನ್ ದಂಪತಿಯ ಮಗು ಕೂಡ ಒಂದಾಗಿತ್ತು. ಆದರೆ, ಜಸ್ವಿಕ್​ಗೆ ಚುಚ್ಚುಮದ್ದು ನೀಡಿದ ಒಂದು ಗಂಟೆ ಬಳಿಕ ಆರೋಗ್ಯದಲ್ಲಿ ಏರುಪೇರಾಗಿದೆ. ಪೋಷಕರು ಮಗುವನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಕೊನೆಯುಸಿರೆಳೆದಿದೆ.

ಇದನ್ನೂ ಓದಿ: Crime News: ಒಂದು ತಿಂಗಳ ಮಗುವನ್ನು ಓವನ್​​​ನಲ್ಲಿ ಸುಟ್ಟು ಕೊಂದ ತಾಯಿ!

ಸೂಕ್ತ ರೀತಿಯಲ್ಲಿ ಮಗು ತಪಾಸಣೆ ಮಾಡದೇ ವ್ಯಾಕ್ಸಿನ್ ಹಾಕಿರುವ ಆರೋಪ ಕೇಳಿಬಂದಿದ್ದು, ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಇಂದು ಅದೇ ಗ್ರಾಮದಲ್ಲಿ 18 ಮಕ್ಕಳಿಗೆ ಲಸಿಕೆ ನೀಡಲಾಗಿತ್ತು. 18 ಮಕ್ಕಳ ಪೈಕಿ 17 ಮಕ್ಕಳ ಆರೋಗ್ಯ ಸ್ಥಿರವಾಗಿದ್ದು, ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ.

ಮನೆಯ ನೀರಿನ ಸಂಪ್‌ನಲ್ಲಿ ಮಹಿಳೆ ಶವ ಪತ್ತೆ

ಬೆಂಗಳೂರು: ಉತ್ತರ ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಮನೆಯ ನೀರಿನ ಸಂಪ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಭಾಗ್ಯಮ್ಮ ಎಂಬುವವರಿಗೆ ಸೇರಿದ ಮನೆಯ ನೀರಿನ ಸಂಪ್‌ನಲ್ಲಿ ಸುಮಾರು 40 ವರ್ಷದ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೂರು ದಿನಗಳ ಹಿಂದೆಯೇ ಕೊಲೆಗೈದು ಬಳಿಕ ಸಂಪ್‌ಗೆ ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಆಗಮಿಸಿದ ಮಾದನಾಯಕನಹಳ್ಳಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಂಭೀರವಾಗಿ ಗಾಯಗೊಂಡು ಅರ್ಧಕ್ಕೆ ಬ್ಯಾಟಿಂಗ್‌ ನಿಲ್ಲಿಸಿದ ರಿಷಭ್ ಪಂತ್
ಗಂಭೀರವಾಗಿ ಗಾಯಗೊಂಡು ಅರ್ಧಕ್ಕೆ ಬ್ಯಾಟಿಂಗ್‌ ನಿಲ್ಲಿಸಿದ ರಿಷಭ್ ಪಂತ್
ಸೇನೆಯಿಂದ ಜಮ್ಮು ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿದ್ದ ಬಾಲಕನ ರಕ್ಷಣೆ
ಸೇನೆಯಿಂದ ಜಮ್ಮು ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿದ್ದ ಬಾಲಕನ ರಕ್ಷಣೆ
8 ವರ್ಷಗಳ ನಂತರ ವಿಕೆಟ್ ಪಡೆದ ಇಂಗ್ಲೆಂಡ್ ಬೌಲರ್
8 ವರ್ಷಗಳ ನಂತರ ವಿಕೆಟ್ ಪಡೆದ ಇಂಗ್ಲೆಂಡ್ ಬೌಲರ್
ಮೊದಲು ನನಗೆ ಬಾಸ್ ಅಂತಿದ್ರು, ಈಗ ಯಶ್​ಗೆ ಬಾಸ್ ಅಂತಾರೆ: ಪುಷ್ಪ
ಮೊದಲು ನನಗೆ ಬಾಸ್ ಅಂತಿದ್ರು, ಈಗ ಯಶ್​ಗೆ ಬಾಸ್ ಅಂತಾರೆ: ಪುಷ್ಪ
ಇಂದು ಅರಂಭಿಸಿದ್ದ ಪ್ರತಿಭಟನೆಯನ್ನು ವಾಪಸ್ಸು ಪಡೆದ ಸಣ್ಣ ವ್ಯಾಪಾರಿಗಳು
ಇಂದು ಅರಂಭಿಸಿದ್ದ ಪ್ರತಿಭಟನೆಯನ್ನು ವಾಪಸ್ಸು ಪಡೆದ ಸಣ್ಣ ವ್ಯಾಪಾರಿಗಳು
ಶೌಚಾಲಯದ ಸಿಬ್ಬಂದಿ ನೀಡುವ ಮಾಹಿತಿ ನಿಖರವಾಗಿಲ್ಲ, ಅಸ್ಪಷ್ಟ
ಶೌಚಾಲಯದ ಸಿಬ್ಬಂದಿ ನೀಡುವ ಮಾಹಿತಿ ನಿಖರವಾಗಿಲ್ಲ, ಅಸ್ಪಷ್ಟ
ಆಂಧ್ರದ ಅಮಲಾಪುರಂನಲ್ಲಿ 4 ಕೋಳಿಗಳನ್ನು ನುಂಗಿದ 6 ಅಡಿ ಉದ್ದದ ನಾಗರಹಾವು
ಆಂಧ್ರದ ಅಮಲಾಪುರಂನಲ್ಲಿ 4 ಕೋಳಿಗಳನ್ನು ನುಂಗಿದ 6 ಅಡಿ ಉದ್ದದ ನಾಗರಹಾವು
ಯಡಿಯೂರಪ್ಪ, ವಿಜಯೇಂದ್ರ ರೈತನ ಮಕ್ಕಳಾದ್ರೆ ನಾವು ಎಮ್ಮೆಯ ಮಕ್ಕಳೇ? ಯತ್ನಾಳ್
ಯಡಿಯೂರಪ್ಪ, ವಿಜಯೇಂದ್ರ ರೈತನ ಮಕ್ಕಳಾದ್ರೆ ನಾವು ಎಮ್ಮೆಯ ಮಕ್ಕಳೇ? ಯತ್ನಾಳ್
ಸಣ್ಣ ವ್ಯಾಪಾರಿಗಳಿಂದ ತೆರಿಗೆ ವಸೂಲಿ ಮಾಡಲ್ಲ: ಸಿಎಂ ಸ್ಪಷ್ಟನೆ
ಸಣ್ಣ ವ್ಯಾಪಾರಿಗಳಿಂದ ತೆರಿಗೆ ವಸೂಲಿ ಮಾಡಲ್ಲ: ಸಿಎಂ ಸ್ಪಷ್ಟನೆ
‘ಕೊತ್ತಲವಾಡಿ’ ಬಜೆಟ್ ಎಷ್ಟು? ಕಾಟನ್ ಸೀರೆ ಉದಾಹರಣೆ ಕೊಟ್ಟ ಯಶ್ ತಾಯಿ
‘ಕೊತ್ತಲವಾಡಿ’ ಬಜೆಟ್ ಎಷ್ಟು? ಕಾಟನ್ ಸೀರೆ ಉದಾಹರಣೆ ಕೊಟ್ಟ ಯಶ್ ತಾಯಿ