ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: BMTC ಕಂಡಕ್ಟರ್​ಗೆ ಚಾಕುವಿನಿಂದ ಇರಿದ ಪ್ರಯಾಣಿಕ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೊಂದು ಬೆಚ್ಚಿ ಬೀಳಿಸುವಂತ ಘಟನೆಯೊಂದು ನಡೆದಿದೆ. ಬಿಎಂಟಿಸಿ ಬಸ್​ ಕಂಡಕ್ಟರ್ ಗೆ ಪ್ರಯಾಣಿಕನೋರ್ವ ಚಾಕುವಿನಿಂದ ಇರಿದು ಹಲ್ಲೆಗೊಳಿಸಿರುವ ಘಟನೆ ನಡೆದಿದೆ. ಕೆಲಸ ಸಿಕ್ಕಿಲ್ಲವೆಂದು ಜೈಲಿಗೆ ಹೋಗಲು ಈ ದುಷ್ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ: BMTC ಕಂಡಕ್ಟರ್​ಗೆ ಚಾಕುವಿನಿಂದ ಇರಿದ ಪ್ರಯಾಣಿಕ
ಕಂಡಕ್ಟರ್​ಗೆ ಪ್ರಯಾಣಿಕನಿಂದ ಚಾಕು ಇರಿತ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Oct 01, 2024 | 11:05 PM

ಬೆಂಗಳೂರು, (ಅಕ್ಟೋಬರ್ 01): ಪ್ರಯಾಣಿಕನೋರ್ವ ಬಿಎಂಟಿಸಿ ಬಸ್​ ಕಂಡಕ್ಟರ್​ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ವೈಟ್​ಫೀಲ್ಡ್ ಬಳಿಯ ITPL ಬಸ್ ಸ್ಟಾಪ್ ಬಳಿ ನಡೆದಿದೆ. ಇಂದು(ಅಕ್ಟೋಬರ್ 01) ಸಂಜೆ ವೈಟ್ ಫೀಲ್ಡ್ ಬಳಿಯ ಐಟಿಪಿಎಲ್ ಬಸ್ ಸ್ಟಾಪ್ ನಲ್ಲಿ KA- 57-F0015 ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್​ಗೆ ಅಪರಿಚಿತ ವ್ಯಕ್ತಿ ಎರಡ್ಮೂರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಪ್ರಯಾಣಿಕರು ತುಂಬಿದ್ದ ಬಸ್ ‌ನಲ್ಲಿ ಈ ದುಷ್ಕೃತ್ಯ ನಡೆದಿದೆ.

ಕಂಡಕ್ಟರ್ ಯೋಗೇಶ್​ಗೆ ಎರಡ್ಮೂರು ಬಾರಿ ಚಾಕುವಿನಿಂದ ಇರಿದ ಬಳಿಕ ಬಸ್​ನಲ್ಲಿದ್ದ ಸುತ್ತಿಗೆ ತೆಗೆದುಕೊಂಡು ಗಾಜು ಪುಡಿಗಟ್ಟಿ ಹುಚ್ಚನಂತೆ ವರ್ತಿಸಿದ್ದಾನೆ. ಇದನ್ನು ನೋಡಿ ಸಹ ಪ್ರಯಾಣಿಕರು ಕಿರುಚಾಡಿಕೊಂಡು ಬಸ್ ನಿಂದ ಕೆಳಗೆ ಇಳಿದು ಓಡಿ ಹೋಗಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವೈಟ್​ಫೀಲ್ಡ್ ಠಾಣೆ ಪೊಲೀಸರು, ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ಇನ್ನು ಚಾಕು ಇರಿತಕ್ಕೆ ಒಳಗಾಗಿರುವ ಕಂಡಕ್ಟರ್​ ಯೋಗೇಶ್​ ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಚಾಕು ಇರಿದ ಪ್ರಯಾಣಿಕ ಇಂದು ಬೆಳಿಗ್ಗೆ ಖಾಸಗಿ ಕಂಪನಿಗೆ ಇಂಟರ್ವಿವ್ ಗೆ ಹೋಗಿದ್ದನಂತೆ. ಈ ವೇಳೆ ಆತನಿಗೆ ಕೆಲಸ ಸಿಕ್ಕಿಲ್ಲವಂತೆ. ಅದಕ್ಕಾಗಿ ನಾನು ಹೊರಗೆ ಇರುವುದಿಲ್ಲ. ಜೈಲಿಗೆ ಹೋಗ್ತಿನಿ ಎಂದು ಈ ರೀತಿ ಮಾಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದ್ರೆ, ಆ ವ್ಯಕ್ತಿ ಯಾರು? ಎಲ್ಲಿಯವರು ಎನ್ನುವ ಮಾಹಿತಿ ಸಿಕ್ಕಿಲ್ಲ.

ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?
ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?
ಅಪ್ರಸ್ತುತವಾಗಿದ್ದರೂ ಬಸನಗೌಡ ಯತ್ನಾಳ್ ಹೆಸರು ಉಲ್ಲೇಖಿಸಿದ ಜಮೀರ್
ಅಪ್ರಸ್ತುತವಾಗಿದ್ದರೂ ಬಸನಗೌಡ ಯತ್ನಾಳ್ ಹೆಸರು ಉಲ್ಲೇಖಿಸಿದ ಜಮೀರ್
ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿರೋದು ಶಿವಕುಮಾರ್​​ಗೆ ಗೊತ್ತಿಲ್ಲ
ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿರೋದು ಶಿವಕುಮಾರ್​​ಗೆ ಗೊತ್ತಿಲ್ಲ
ಮೈಸೂರು ಕಾರ್ಯಕರ್ತನ ಮನೆಯಲ್ಲಿ ಸ್ಪೆಷಲ್ ದೋಸೆ ಸವಿದ ಸತೀಶ್ ಜಾರಕಿಹೊಳಿ!
ಮೈಸೂರು ಕಾರ್ಯಕರ್ತನ ಮನೆಯಲ್ಲಿ ಸ್ಪೆಷಲ್ ದೋಸೆ ಸವಿದ ಸತೀಶ್ ಜಾರಕಿಹೊಳಿ!