AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸೆಕ್ಯೂರಿಟಿ ಗಾರ್ಡ್​​ನನ್ನೇ ಬರ್ಬರವಾಗಿ ಹತ್ಯೆಗೈದ ಕಾಲೇಜು ವಿದ್ಯಾರ್ಥಿ

ಇತ್ತೀಚೆಗೆ ಕ್ಷುಲ್ಲಕ ಕಾರಣಗಳಿಗೆ ಕೊಲೆಗಳು ನಡೆಯುತ್ತಿರುವುದು ನಿಜಕ್ಕೂ ದುರಂತ. ಅದರಂತೆ ಇಂದು(ಜು.03) ಮಧ್ಯಾಹ್ನ ಬೆಂಗಳೂರಿನ ಅಮೃತಹಳ್ಳಿಯ ಸಿಂಧಿ ಕಾಲೇಜಿನ(Sindhi College) ವಿದ್ಯಾರ್ಥಿಯೊಬ್ಬ, ಅದೇ ಕಾಲೇಜಿನ ಸೆಕ್ಯೂರಿಟಿ ಗಾರ್ಡ್‌ನನ್ನೇ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ನಡೆದಿದೆ.

ಬೆಂಗಳೂರು: ಸೆಕ್ಯೂರಿಟಿ ಗಾರ್ಡ್​​ನನ್ನೇ ಬರ್ಬರವಾಗಿ ಹತ್ಯೆಗೈದ ಕಾಲೇಜು ವಿದ್ಯಾರ್ಥಿ
ಆರೋಪಿ ವಿದ್ಯಾರ್ಥಿ, ಮೃತ ಸೆಕ್ಯೂರಿಟಿ ಗಾರ್ಡ್
ರಾಚಪ್ಪಾಜಿ ನಾಯ್ಕ್
| Edited By: |

Updated on: Jul 03, 2024 | 6:04 PM

Share

ಬೆಂಗಳೂರು, ಜು.03: ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್‌ನನ್ನೇ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಅಮೃತಹಳ್ಳಿಯ ಸಿಂಧಿ ಕಾಲೇಜಿನ(Sindhi College)ಲ್ಲಿ ಇಂದು(ಬುಧವಾರ) ಮಧ್ಯಾಹ್ನ 3.30 ರ ಸುಮಾರಿಗೆ ನಡೆದಿದೆ. ಕಾಲೇಜು ಸೆಕ್ಯೂರಿಟಿ ಗಾರ್ಡ್ ಆಗಿದ್ದ ಜೈಕಿಶೋರ್ ರಾಯ್ ಮೃತ ರ್ದುದೈವಿ. ಭಾರ್ಗವ್ ಎಂಬ ವಿದ್ಯಾರ್ಥಿ, ಬರೋಬ್ಬರಿ 5 ರಿಂದ 6 ಬಾರಿ ಚಾಕುವಿನಿಂದ ಇರಿದಿದ್ದ ಪರಿಣಾಮ ಸೆಕ್ಯೂರಿಟಿ ಗಾರ್ಡ್‌ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಕುರಿತು ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲೆಗೆ ಕಾರಣವೇನು?

ಇಂದು ಸಿಂಧಿ ಕಾಲೇಜಿನಲ್ಲಿ ಕಾರ್ಯಕ್ರಮ ಇತ್ತು. ಈ ವೇಳೆ ಆರೋಪಿ ವಿದ್ಯಾರ್ಥಿ ಭಾರ್ಗವ್, ಕಾಲೇಜಿಗೆ ಕುಡಿದು ಬಂದಿದ್ದಾನೆ. ಈ ಹಿನ್ನಲೆ ಸೆಕ್ಯೂರಿಟಿಗಾರ್ಡ್, ಭಾರ್ಗವ್​​​ನನ್ನು ಕಾಲೇಜಿನ ಒಳಗೆ ಬಿಡಲು ನಿರಾಕರಿಸಿದ್ದಾರೆ. ಇದರಿಂದ ಸೆಕ್ಯೂರಿಟಿ ಗಾರ್ಡ್​ ಹಾಗೂ ವಿದ್ಯಾರ್ಥಿ ಮಧ್ಯೆ ಗಲಾಟೆ ಆಗಿದೆ. ಬಳಿಕ ಅಂಗಡಿಗೆ ಹೋಗಿ ಚಾಕು ಖರೀದಿಸಿದ್ದ ಭಾರ್ಗವ್, ನೇರವಾಗಿ ಬಂದು ಸೆಕ್ಯೂರಿಟಿ ಗಾರ್ಡ್ ಎದೆಗೆ ಐದಾರು ಬಾರಿ ಇರಿದಿದ್ದಾನೆ. ಅದು ಹೃದಯಕ್ಕೆ ಹೊಕ್ಕು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ದಂಪತಿ ಆತ್ಮಹತ್ಯೆ, ಸೊಸೆ ತವರು ಮನೆ ಸೇರಿದ್ದಕ್ಕೆ ಸಾವಿಗೆ ಶರಣಾದ್ರಾ?

ಕಿಶೋರ್ ರಾಯ್ ಕೊಲೆಗೆ ಕುಟುಂಬಸ್ಥರ ಆಕ್ರೋಶ

ಹತ್ಯೆಯಾದ ಜೈ ಕಿಶೋರ್ ರಾಯ್ ಸಿಂಧಿ ಕಾಲೇಜಿನ ಕ್ಲೀನಿಂಗ್ ಇನ್​ಚಾರ್ಜ್ ಆಗಿದ್ದರು. ಆದರೂ ಅವರನ್ನು ಸೆಕ್ಯೂರಿಟಿ ಕೆಲಸಕ್ಕೆ ನೇಮಿಸಿದ್ದು ಯಾಕೆ ಎಂದು ಕೊಲೆಗೀಡಾಗಿರುವ ಜೈಕಿಶೋರ್ ರಾಯ್ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿ, ರಾಯ್ ಕೊಲೆಗೆ ಸಿಂಧಿ ಕಾಲೇಜು ಆಡಳಿತ ಮಂಡಳಿಯೇ ಕಾರಣ, ಅವರು ಯಾವುದೇ ಸುರಕ್ಷತಾ ಕ್ರಮಕೈಗೊಂಡಿಲ್ಲವೆಂದು ಕಿಡಿಕಾರಿದ್ದಾರೆ. ಈ ವೇಳೆ ಸಿಂಧಿ ಕಾಲೇಜಿನ ಮುಂದೆ ಜೈಕಿಶೋರ್ ರಾಯ್ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ