ಬೆಂಗಳೂರು, ಜು.03: ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್‌ನನ್ನೇ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಅಮೃತಹಳ್ಳಿಯ ಸಿಂಧಿ ಕಾಲೇಜಿನ(Sindhi College)ಲ್ಲಿ ಇಂದು(ಬುಧವಾರ) ಮಧ್ಯಾಹ್ನ 3.30 ರ ಸುಮಾರಿಗೆ ನಡೆದಿದೆ. ಕಾಲೇಜು ಸೆಕ್ಯೂರಿಟಿ ಗಾರ್ಡ್ ಆಗಿದ್ದ ಜೈಕಿಶೋರ್ ರಾಯ್ ಮೃತ ರ್ದುದೈವಿ. ಭಾರ್ಗವ್ ಎಂಬ ವಿದ್ಯಾರ್ಥಿ, ಬರೋಬ್ಬರಿ 5 ರಿಂದ 6 ಬಾರಿ ಚಾಕುವಿನಿಂದ ಇರಿದಿದ್ದ ಪರಿಣಾಮ ಸೆಕ್ಯೂರಿಟಿ ಗಾರ್ಡ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಕುರಿತು ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇಂದು ಸಿಂಧಿ ಕಾಲೇಜಿನಲ್ಲಿ ಕಾರ್ಯಕ್ರಮ ಇತ್ತು. ಈ ವೇಳೆ ಆರೋಪಿ ವಿದ್ಯಾರ್ಥಿ ಭಾರ್ಗವ್, ಕಾಲೇಜಿಗೆ ಕುಡಿದು ಬಂದಿದ್ದಾನೆ. ಈ ಹಿನ್ನಲೆ ಸೆಕ್ಯೂರಿಟಿಗಾರ್ಡ್, ಭಾರ್ಗವ್ನನ್ನು ಕಾಲೇಜಿನ ಒಳಗೆ ಬಿಡಲು ನಿರಾಕರಿಸಿದ್ದಾರೆ. ಇದರಿಂದ ಸೆಕ್ಯೂರಿಟಿ ಗಾರ್ಡ್ ಹಾಗೂ ವಿದ್ಯಾರ್ಥಿ ಮಧ್ಯೆ ಗಲಾಟೆ ಆಗಿದೆ. ಬಳಿಕ ಅಂಗಡಿಗೆ ಹೋಗಿ ಚಾಕು ಖರೀದಿಸಿದ್ದ ಭಾರ್ಗವ್, ನೇರವಾಗಿ ಬಂದು ಸೆಕ್ಯೂರಿಟಿ ಗಾರ್ಡ್ ಎದೆಗೆ ಐದಾರು ಬಾರಿ ಇರಿದಿದ್ದಾನೆ. ಅದು ಹೃದಯಕ್ಕೆ ಹೊಕ್ಕು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.
ಇದನ್ನೂ ಓದಿ:ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ದಂಪತಿ ಆತ್ಮಹತ್ಯೆ, ಸೊಸೆ ತವರು ಮನೆ ಸೇರಿದ್ದಕ್ಕೆ ಸಾವಿಗೆ ಶರಣಾದ್ರಾ?
ಹತ್ಯೆಯಾದ ಜೈ ಕಿಶೋರ್ ರಾಯ್ ಸಿಂಧಿ ಕಾಲೇಜಿನ ಕ್ಲೀನಿಂಗ್ ಇನ್ಚಾರ್ಜ್ ಆಗಿದ್ದರು. ಆದರೂ ಅವರನ್ನು ಸೆಕ್ಯೂರಿಟಿ ಕೆಲಸಕ್ಕೆ ನೇಮಿಸಿದ್ದು ಯಾಕೆ ಎಂದು ಕೊಲೆಗೀಡಾಗಿರುವ ಜೈಕಿಶೋರ್ ರಾಯ್ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿ, ರಾಯ್ ಕೊಲೆಗೆ ಸಿಂಧಿ ಕಾಲೇಜು ಆಡಳಿತ ಮಂಡಳಿಯೇ ಕಾರಣ, ಅವರು ಯಾವುದೇ ಸುರಕ್ಷತಾ ಕ್ರಮಕೈಗೊಂಡಿಲ್ಲವೆಂದು ಕಿಡಿಕಾರಿದ್ದಾರೆ. ಈ ವೇಳೆ ಸಿಂಧಿ ಕಾಲೇಜಿನ ಮುಂದೆ ಜೈಕಿಶೋರ್ ರಾಯ್ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ