ಮಂಗಳೂರು: ತಾಯಿಯ ಮೇಲೆಯೇ ಅತ್ಯಾಚಾರಕ್ಕೆ ಯತ್ನ; ವಿರೋಧಿಸಿದಕ್ಕೆ ಕತ್ತು ಹಿಸುಕಿ ಕೊಂದ ಮಗ

ತಾಯಿಯನ್ನು ಕೊಂದು ಮನೆಗೆ ಬೀಗ ಜಡಿದು ಪರಾರಿಯಾಗಿದ್ದ. ಮೂರು ದಿನಗಳ ಬಳಿಕ ನೊಣಗಳು ಮುತ್ತಿಕೊಂಡಾಗ ಘಟನೆ ಬೆಳಕಿಗೆ ಬಂದಿತ್ತು. ಕೂಡಲೇ ಬಜಪೆ ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಿದಾಗ ಸತ್ಯಾಂಶ ಬಾಯ್ಬಿಟ್ಟಿದ್ದಾನೆ.

ಮಂಗಳೂರು: ತಾಯಿಯ ಮೇಲೆಯೇ ಅತ್ಯಾಚಾರಕ್ಕೆ ಯತ್ನ; ವಿರೋಧಿಸಿದಕ್ಕೆ ಕತ್ತು ಹಿಸುಕಿ ಕೊಂದ ಮಗ
ಮೃತ ತಾಯಿ
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 31, 2023 | 6:40 PM

ದಕ್ಷಿಣ ಕನ್ನಡ, ಅ.31: ಅತ್ಯಾಚಾರಕ್ಕೆ ವಿರೋಧಿಸಿದ ತಾಯಿಯನ್ನೇ ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಮುಲ್ಕಿ ತಾಲೂಕಿನ ಕೊಂಡೇಲಾ ಗ್ರಾಮದಲ್ಲಿ ನಡೆದಿದ್ದು, ಅಕ್ಟೋಬರ್​ 26ರ ರಾತ್ರಿ ಈ ಘಟನೆ ನಡೆದಿದ್ದು, ಮೂರು ದಿನಗಳ ಬಳಿಕ ಬೆಳಕಿಗೆ ಬಂದಿದೆ. ತಾಯಿ ರತ್ನ ಶೆಟ್ಟಿ(62) ಮೃತ ರ್ದುದೈವಿ. ಇನ್ನು ತಾಯಿ ಕತ್ತು ಹಿಸುಕಿ ಕೊಂದ ಮಗ ರವಿರಾಜ್ ಶೆಟ್ಟಿ ಪರಾರಿಯಾಗಿದ್ದ. ನಿನ್ನೆ(ಅ.30) ಸಂಜೆ ಆರೋಪಿಯನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರಕ್ಕೆ ಒಪ್ಪದ ಕಾರಣ ಕೊಂದಿದ್ದಾಗಿ ಮಗನೇ ತಪ್ಪೊಪ್ಪಿಕೊಂಡಿದ್ದಾನೆ.

ಮೂರು ದಿನಗಳ ಬಳಿಕ ನೊಣಗಳು ಮುತ್ತಿಕೊಂಡು ಘಟನೆ ಬೆಳಕಿಗೆ

ಇನ್ನು ಆರೋಪಿ ರವಿರಾಜ್ ಶೆಟ್ಟಿ, ತಾಯಿಯನ್ನು ಕೊಂದು ಮನೆಗೆ ಬೀಗ ಜಡಿದು ಪರಾರಿಯಾಗಿದ್ದ. ಮೂರು ದಿನಗಳ ಬಳಿಕ ನೊಣಗಳು ಮುತ್ತಿಕೊಂಡಾಗ ಘಟನೆ ಬೆಳಕಿಗೆ ಬಂದಿತ್ತು. ಕೂಡಲೇ ಬಜಪೆ ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಿದಾಗ ಸತ್ಯಾಂಶ ಬಾಯ್ಬಿಟ್ಟಿದ್ದಾನೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಬಜಪೆ ಪೊಲೀಸರು, ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ:ಇವನೆಂಥಾ ಮಗ: ಮದುವೆಗೆ ಸೂಕ್ತ ಹುಡುಗಿ ಹುಡಕಲು ಸಾಧ್ಯವಾಗಿಲ್ಲ ಎಂದು ತಾಯಿಯನ್ನೇ ಕೊಂದು ಕೈಕಾಲು ಕತ್ತರಿಸಿದ ಮಗ

ಕ್ಷುಲ್ಲಕ ಕಾರಣಕ್ಕೆ ಗಲಾಟೆ, ಕಲ್ಲು ಎತ್ತಿಹಾಕಿ ವ್ಯಕ್ತಿಯ‌ ಬರ್ಬರ ಕೊಲೆ

ರಾಮನಗರ: ಜಿಲ್ಲೆಯ ಕನಕಪುರದ ಸಂತೋಷ್ ಬಾರ್ ಬಳಿ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿ ವ್ಯಕ್ತಿಯೋರ್ವನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಘಟನೆ ನಡೆದಿದೆ. ಕುಮಾರ್(26) ಮೃತ ವ್ಯಕ್ತಿ. ಮದ್ಯ ಸೇವಿಸುವಾಗ ಮಾತಿಗೆ ಮಾತು ಬೆಳೆದು ಈ ಘಟನೆ ನಡೆದಿದೆ. ಪ್ರಮೋದ್, ಸಂತೋಷ್, ಅಭಿಷೇಕ್, ಪ್ರಜ್ವಲ್ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಈ ಕುರಿತು ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಇನ್ನು ಆರೋಪಿಗಳು ಪರಾರಿಯಾಗಿದ್ದು, ಹುಡುಕಾಟ ಆರಂಭಿಸಿದ್ದಾರೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:31 pm, Tue, 31 October 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್