POCSO judge: ನ್ಯಾಯಾಲಯದ ನ್ಯಾಯಾಧೀಶ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಲೈಂಗಿಕ ಅಪರಾಧಗಳಿಂದ ಮಕ್ಕಳ ವಿಶೇಷ ರಕ್ಷಣೆ ಕಾಯ್ದೆ ನ್ಯಾಯಾಲಯದ ನ್ಯಾಯಾಧೀಶರು ಒಡಿಶಾದ ಕಟಕ್‌ನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಕಟಕ್: ವಿಶೇಷ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರು ಒಡಿಶಾದ ಕಟಕ್‌ನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಹಾಯಕ ಪೊಲೀಸ್ ಕಮಿಷನರ್ (ACP) ತಪಸ್ ಚಂದ್ರ ಪ್ರಧಾನ್, ಲೈಂಗಿಕ ಅಪರಾಧಗಳಿಂದ ಮಕ್ಕಳ ವಿಶೇಷ ರಕ್ಷಣೆ ಕಾಯಿದೆ (ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶರಾದ ಸುಭಾಷ್ ಕುಮಾರ್ ಬಿಹಾರಿ ಅವರು ಕಟಕ್ ನಗರದ ತಮ್ಮ ಅಧಿಕೃತ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ನ್ಯಾಯಾಧೀಶರ ಸ್ಟೆನೋಗ್ರಾಫರ್ ಆರ್‌ಎನ್ ಮಹಾಪಾತ್ರ ಅವರ ಪ್ರಕಾರ, ಸುಭಾಷ್ ಕುಮಾರ್ ಬಿಹಾರಿ ಎರಡು ದಿನಗಳ ರಜೆಯ ನಂತರ ಶುಕ್ರವಾರ ಕೆಲಸಕ್ಕೆ ಮರಳಬೇಕಿತ್ತು ಆದರೆ ಅವರು ಶುಕ್ರವಾರದಿಂದ ರಜೆಗಾಗಿ ಮತ್ತೆ ಅರ್ಜಿ ಸಲ್ಲಿಸಿದರು. ನ್ಯಾಯಾಧೀಶರು ಬೆಳಿಗ್ಗೆ 10:00 ಗಂಟೆಗೆ ಕರೆ ಮಾಡಿ (ಶುಕ್ರವಾರ) ರಜೆಯ ಅರ್ಜಿಯನ್ನು ಬರೆಯುವಂತೆ ಹೇಳಿದರು ಎಂದು ಮಹಾಪಾತ್ರ ಪೊಲೀಸರಿಗೆ ತಿಳಿಸಿದರು.
ನ್ಯಾಯಾಧೀಶರ ಪತ್ನಿ ಮತ್ತು ಮಗಳು ಮನೆಯಲ್ಲಿ ಇಲ್ಲದಿದ್ದಾಗ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಪೊಲೀಸರು ಆಗಮಿಸಿದಾಗ, ಬಿಹಾರಿಯನ್ನು ತಕ್ಷಣವೇ ಕಟಕ್‌ನ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ, ಅವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ನ್ಯಾಯಾಧೀಶರ ಸಹೋದರ ಸುಬೋಧ್ ಬಿಹಾರಿ ಅವರ ಪ್ರಕಾರ, ತಮ್ಮ ಕೆಲಸದಲ್ಲಿ ತೊಡಗಿಸಿಕೊಂಡಿದ್ದರಿಂದ ಅವರು ಹೆಚ್ಚು ಮಾತನಾಡಲಿಲ್ಲ. ಕಟಕ್‌ನಲ್ಲಿರುವ ನ್ಯಾಯಾಧೀಶರ ಕುಟುಂಬಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳ ಬಗ್ಗೆ ತನಗೆ ತಿಳಿದಿಲ್ಲ ಎಂದು ಅವರು ಹೇಳಿದ್ದಾರೆ.
Published On - 11:14 am, Sat, 3 September 22