ಬೆಂಗಳೂರು: ಡೆತ್​ನೋಟ್​ ಬರೆದಿಟ್ಟು 7ನೇ ಮಹಡಿದಿಂದ ಜಿಗಿದ ವಿದ್ಯಾರ್ಥಿನಿ

ವಿದ್ಯಾರ್ಥಿನಿಯೊಬ್ಬಳು ಡೆತ್​ನೋಟ್​ ಬರೆದಿಟ್ಟು ಏಳನೇ ಮಹಡಿ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿನ್ನಿ ಮಿಲ್​ ಬಳಿಯ ಪೊಲೀಸ್ ಕ್ವಾರ್ಟರ್ಸ್​ನಲ್ಲಿ ನಡೆದಿದೆ. ಬಿಎಸ್ ಸಿ ಕಂಪ್ಯೂಟರ್ ಸೈನ್ಸ್ ಓದುತ್ತಿದ್ದ ಆಯಿಶಾ ಬಿ.ಆರ್ ಮೃತ ವಿದ್ಯಾರ್ಥಿನಿ.

ಬೆಂಗಳೂರು: ಡೆತ್​ನೋಟ್​ ಬರೆದಿಟ್ಟು 7ನೇ ಮಹಡಿದಿಂದ ಜಿಗಿದ ವಿದ್ಯಾರ್ಥಿನಿ
ಡೆತ್​ನೋಟ್​ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Apr 30, 2023 | 1:33 PM

ಬೆಂಗಳೂರು: ವಿದ್ಯಾರ್ಥಿನಿಯೊಬ್ಬಳು ಡೆತ್​ನೋಟ್(Death Note)​ ಬರೆದಿಟ್ಟು ಏಳನೇ ಮಹಡಿ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿನ್ನಿ ಮಿಲ್​ ಬಳಿಯ ಪೊಲೀಸ್ ಕ್ವಾರ್ಟರ್ಸ್​ನಲ್ಲಿ ನಡೆದಿದೆ. ಬಿ.ಎಸ್ ಸಿ ಕಂಪ್ಯೂಟರ್ ಸೈನ್ಸ್ ಓದುತ್ತಿದ್ದ ಆಯಿಶಾ ಬಿ.ಆರ್ ಮೃತ ವಿದ್ಯಾರ್ಥಿನಿ. ಇಂದು(ಏ.30) ಬೆಳಗ್ಗೆ ಬಿನ್ನಿ ಮಿಲ್ ಸಮೀಪದ ಪೊಲೀಸ್ ಕ್ವಾರ್ಟರ್ಸ್​ನ ಏಳನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಲ್ಲದೇ ಕೈ ಮೇಲೆ ಭೀಮೇಶ್ ಎನ್ನುವ ಹೆಸರಿನ ಜೊತೆಗೆ ಆತನ ಮೊಬೈಲ್ ನಂಬರ್ ಕೂಡ ಬರೆದುಕೊಂಡಿದ್ದಾಳೆ. ಕಾಟನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕೆಲಸದ ಒತ್ತಡ ತಾಳಲಾರದೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ

ಕಲಬುರಗಿ: ಕೆಲಸದ ಒತ್ತಡ ತಾಳಲಾರದೇ ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ವಿಶ್ವವಿದ್ಯಾಲಯ ಆವರಣದ ಪಾಳು ಬಿದ್ದ ಗೋಡಾನ್‌ನಲ್ಲಿ ನಡೆದಿದೆ. ಜ್ಯೋತಿಬಾ ಪುಲೆ ಬಡಾವಣೆಯ ನಿವಾಸಿ ಶಶಾಂಕ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ. ಆನ್‌ಲೈನ್ ಎನಿಮೇಶನ್ ಕೆಲಸ ಮಾಡುತ್ತಿದ್ದ ಮೃತ ಶಶಾಂಕ್, ಕೆಲಸದಲ್ಲಿ ಬಹಳಷ್ಟು ಒತ್ತಡ ಹಾಕಿಕೊಂಡಿದ್ದ. ಇದೀಗ ಕೆಲಸದ ಒತ್ತಡ ತಾಳಲಾರದೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಶಿವಮೊಗ್ಗ: ಸೆಂಟ್ರಲ್ ಜೈಲಿನಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆ; ಒಂದೇ ವಾರದಲ್ಲಿ ಎರಡು ಖೈದಿಗಳ ಸಾವು

ಮಾನಸಿಕ ಖಿನ್ನತೆಯಿಂದ ಹೆಡ್​ ಕಾನ್ಸ್​​ಟೇಬಲ್​​​ ಆತ್ಮಹತ್ಯೆ

ಬೆಂಗಳೂರು: ಮಾನಸಿಕ ಖಿನ್ನತೆಯಿಂದ ಹೆಡ್​ ಕಾನ್ಸ್​​ಟೇಬಲ್​​​ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲ ತಾಲೂಕಿನ ಅಗಳಕುಪ್ಪೆಯಲ್ಲಿ ನಡೆದಿದೆ. ಕದೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಉಮೇಶ್​ ಮೃತ ರ್ದುದೈವಿ. ಕಳೆದ ಐದು ತಿಂಗಳ ಹಿಂದೆ ಉಮೇಶ್ ಮಗು ಅನಾರೋಗ್ಯದಿಂದ ಸಾವನ್ನಪ್ಪಿತ್ತು. ಈ ಘಟನೆಯಿಂದ ಮನನೊಂದಿದ್ದ ಉಮೇಶ್. ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಾಕುವಿನಿಂದ ಇರಿದು ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆ

ಬೆಂಗಳೂರು: ಕಾಲೇಜಿನಲ್ಲಿಯೇ ಚಾಕುವಿನಿಂದ ಇರಿದು ವಿದ್ಯಾರ್ಥಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ರೇವಾ ಕಾಲೇಜಿನಲ್ಲಿ ನಡೆದಿದೆ. ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (22) ಮೃತ ವಿದ್ಯಾರ್ಥಿ ರೇವಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದು, ಕಾಲೇಜು ಪೆಸ್ಟ್ ವೇಳೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಸುಮಾರು ಏ.28ರ ರಾತ್ರಿ 9.30 ಕ್ಕೆ ಈ ವೇಳೆ ಭಾಸ್ಕರ್​ಗೆ ಇನ್ನೊಂದು ಗುಂಪು ಚಾಕುವಿನಿಂದ ಇರಿದಿದ್ದು, ವಿದ್ಯಾರ್ಥಿ ಭಾಸ್ಕರ್ ಜೆಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದ್ದು, ಈ ಕುರಿತು ಪೊಲೀಸರು ಕಾಲೇಜು ಸಿಸಿಟಿವಿ ಪರಿಶೀಲಿಸುತ್ತಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:05 pm, Sun, 30 April 23

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ