ಚಿಕ್ಕಬಳ್ಳಾಪುರ: ವಿದ್ಯಾರ್ಥಿನಿಯನ್ನು ಚುಡಾಯಿಸಿದ ವಿದ್ಯಾರ್ಥಿಗೆ ಧರ್ಮದೇಟು
ವಿದ್ಯಾರ್ಥಿನಿಯನ್ನು ಚುಡಾಯಿಸಿದ್ದಕ್ಕೆ ವಿದ್ಯಾರ್ಥಿಗೆ ಸಾರ್ವಜನಿಕರು ಥಳಿಸಿದ ಘಟನೆ ಚಿಕ್ಕಬಳ್ಳಾಪುರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಸರ್ಕಾರಿ ಬಾಲಕಿಯರ ಪ್ರೌಢಶಾಲೆ ವಿದ್ಯಾರ್ಥಿನಿ ಚುಡಾಯಿಸಿದ್ದ ಆರೋಪ ಕೇಳಿಬಂದಿದ್ದು, ಪಿಯು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗೆ ಸಾರ್ವಜನಿಕರು ಥಳಿಸಿದ್ದಾರೆ.
ಚಿಕ್ಕಬಳ್ಳಾಪುರ, ಫೆ.19: ವಿದ್ಯಾರ್ಥಿನಿಯನ್ನು ಚುಡಾಯಿಸಿದ ಆರೋಪ ಸಂಬಂಧ ವಿದ್ಯಾರ್ಥಿಗೆ ಸಾರ್ವಜನಿಕರು ಥಳಿಸಿದ (Assault) ಘಟನೆ ಚಿಕ್ಕಬಳ್ಳಾಪುರದ (Chikkaballapur) ಕೆಎಸ್ಆರ್ಟಿಸಿ (KSRTC) ಬಸ್ ನಿಲ್ದಾಣದಲ್ಲಿ ನಡೆದಿದೆ. ಸರ್ಕಾರಿ ಬಾಲಕಿಯರ ಪ್ರೌಢಶಾಲೆ ವಿದ್ಯಾರ್ಥಿನಿಯನ್ನು ಚುಡಾಯಿಸಿದ ಆರೋಪ ಕೇಳಿಬಂದಿದ್ದು, ಪಿಯು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗೆ ಸಾರ್ವಜನಿಕರು ಥಳಿಸಿದ್ದಾರೆ.
ಚಿಕ್ಕಬಳ್ಳಾಪುರ ನಗರದ ವಾಪಸಂದ್ರದಲ್ಲಿರುವ ಬಾಲಕಿಯರ ಪ್ರೌಢಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿನಿಯನ್ನು ಪಿಯು ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಚುಡಾಯಿಸಿದ್ದಾನೆ. ಇದರಿಂದ ಕೆರಳಿದ ಸಾರ್ವಜನಿಕರು ಆತನನ್ನು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿರುವ ಗೋಡೌನ್ನಲ್ಲಿ ಹಾಕಿ ಹಿಗ್ಗಾಮುಗ್ಗವಾಗಿ ಥಳಿಸಿದ್ದಾರೆ. ಸಾರ್ವಜನಿಕರೊಂದಿಗೆ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಶಿಕ್ಷಕ ಮಹಂತೇಶ್ ಕೂಡ ವಿದ್ಯಾರ್ಥಿಗೆ ಥಳಿಸಿದ್ದಾರೆ.
ಅಗ್ನಿ ಅವಘಡ, ಬೆಂಕಿ ತೀವ್ರತೆಗೆ ಸಿಲಿಂಡರ್ ಸ್ಫೋಟ
ರಾಯಚೂರು: ಶಾರ್ಟ್ ಸರ್ಕ್ಯೂಟ್ನಿಂದ ಅಗ್ನಿ ಅವಘಡ ಸಂಭವಿಸಿ ಬೆಂಕಿಯ ತೀವ್ರತೆಗೆ ಸಿಲಿಂಡರ್ ಸ್ಫೋಟಗೊಂಡ ಘಟನೆ ರಾಯಚೂರು ನಗರದ ಹರ್ಷಿತಾ ಗಾರ್ಡನ್ ಹೆಸರಿನ ಫಂಕ್ಷನ್ ಹಾಲ್ನಲ್ಲಿರುವ ಲೇಬರ್ ರೂಂನಲ್ಲಿ ನಡೆದಿದೆ. ಕೂದಲೆಳೆಯ ಅಂತರದಲ್ಲಿ ಭಾರೀ ಅನಾಹುತ ತಪ್ಪಿದ್ದು, ಘಟನೆಯಲ್ಲಿ ಒಂದು ಹಸು ಸುಟ್ಟು ಕರಕಲಾಗಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಹೆಚ್ಚಾಗ್ತಿದೆ ಪುಂಡರ ಅಟ್ಟಹಾಸ; ಯುವಕ-ಯುವತಿ ಇದ್ದ ಬೈಕ್ ಅಡ್ಡ ಹಾಕಿ ಹಲ್ಲೆ
ಶಾರ್ಟ್ ಸರ್ಕ್ಯೂಟ್ನಿಂದ ಲೇಬರ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಸ್ಟೋರ್ ರೂಂನಲ್ಲಿ ಮೂರು ಸಿಲಿಂಡರ್ ಪೈಕಿ ಒಂದು ಸಿಲಿಂಡರ್ ಬ್ಲಾಸ್ಟ್ ಆಗಿದೆ. ಬಳಿಕ ತೀವ್ರತೆ ಪಡೆದುಕೊಂಡು ಕೊಠಡಿ ಹೊತ್ತಿ ಉರಿದಿದೆ. ಘಟನೆಯಲ್ಲಿ ಲೇಬರ್ ರೂಂ ಬಳಿ ಸಾಕಲಾಗಿದ್ದ ಒಂದು ಹಸು ಸುಟ್ಟು ಕರಕಲಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಎರಡು ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ