ಅತ್ಯಾಚಾರ ಪ್ರಕರಣ ದಾಖಲಿಸಿದ್ದಕ್ಕೆ ಶಿಕ್ಷಕಿಯ ಅಪಹರಣ

ಶಾಲಾ ಮ್ಯಾನೇಜರ್‌ನ ಪತಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿದ ಶಿಕ್ಷಕಿಯನ್ನು ಅಪಹರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅತ್ಯಾಚಾರ ಪ್ರಕರಣ ದಾಖಲಿಸಿದ್ದಕ್ಕೆ ಶಿಕ್ಷಕಿಯ ಅಪಹರಣ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jul 28, 2022 | 6:12 PM

ಶಹಜಹಾನ್‌ಪುರ: ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಶಾಲಾ ಮ್ಯಾನೇಜರ್‌ನ ಪತಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿದ ಶಿಕ್ಷಕಿಯನ್ನು ಅಪಹರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ ನಾಪತ್ತೆಯಾಗಿದ್ದು, ಆರೋಪಿಯನ್ನು ಇನ್ನೂ ಬಂಧಿಸಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಿಲ್ಹಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯ ನಿವಾಸಿಯಾಗಿರುವ ವ್ಯಕ್ತಿ, ಶಿಕ್ಷಕಿಯನ್ನು ಯಾವುದೋ ಕೆಲಸದ ನಿಮಿತ್ತ ಶಹಜಹಾನ್‌ಪುರಕ್ಕೆ ಕರೆದೊಯ್ದು ಹೋಟೆಲ್​ಯೊಂದರಲ್ಲಿ ಅತ್ಯಾಚಾರ ಎಸಗಿ ವೀಡಿಯೊ ಮಾಡಿದ್ದಾನೆ ಎಂದು ಎಫ್‌ಐಆರ್​ನಲ್ಲಿ ದಾಖಲಿಸಿದ್ದಾರೆ ಈ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಸಂಜೀವ್ ಬಾಜ್‌ಪೈ ತಿಳಿಸಿದ್ದಾರೆ.

ಈ ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ಆಕೆಯ ಕುಟುಂಬ ಸದಸ್ಯರನ್ನು ಕೊಲ್ಲುವುದಾಗಿ ಮತ್ತು ವೀಡಿಯೊವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕುವ ಮೂಲಕ ಆರೋಪಿಗಳು ಪದೇ ಪದೇ ಹಿಂಸೆ ನೀಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ
Image
ಬೆಂಗಳೂರು ಮೈಸೂರು ರಸ್ತೆಯಲ್ಲಿ ಸರಣಿ ಅಪಘಾತ! ಟೆಂಪೋ, ಬಿಎಂಟಿಸಿ ಬಸ್ ನಡುವೆ ಸಿಲುಕಿ ಆಟೋ ಜಖಂ
Image
36 ವರ್ಷದ ಬಳಿಕ ಮರುಕಳಿಸಿತು ಇತಿಹಾಸ; ಕಮಲ್​ ಹಾಸನ್​-ಚಿರಂಜೀವಿ ಸ್ನೇಹದ ರೆಟ್ರೋ ಫೋಟೋ ವೈರಲ್
Image
ಶಿಕ್ಷಕರ ಮತ್ತು ಪದವಿಧರ ಕ್ಷೇತ್ರಗಳ ಚುನಾವಣೆ: ಇಂದು ಮೂರು ಪಕ್ಷಗಳ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
Image
Chicago Shootings: ಅಮೆರಿಕದಲ್ಲಿ ಮತ್ತೆ ಗುಂಡಿನ ಸದ್ದು, ಚಿಕಾಗೊದಲ್ಲಿ ಐವರು ಸಾವು, 16 ಮಂದಿಗೆ ಗಾಯ

ಎರಡು ದಿನಗಳ ಹಿಂದೆ ನಡೆದ ಘಟನೆಯನ್ನು ಮಹಿಳೆ ತನ್ನ ಮನೆಯವರಿಗೆ ತಿಳಿಸಿದಾಗ, ಅವರು ಪುರುಷನ ಮನೆಗೆ ಹೋಗಿದ್ದರು. ಆದರೆ, ಬೆದರಿಸಿ ವಾಪಸ್ ಕಳುಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಪೊಲೀಸ್ ದೂರಿನ ಬಗ್ಗೆ ತಿಳಿದ ಆರೋಪಿ ಮಹಿಳೆಯನ್ನು ಆಕೆಯ ಮನೆಯಿಂದ ಅಪಹರಿಸಿದ್ದಾನೆ ಎಂದು ಎಸ್ಪಿ ತಿಳಿಸಿದ್ದಾರೆ.

Published On - 6:10 pm, Thu, 28 July 22