ದೆಹಲಿ: ಟ್ರಾಫಿಕ್ ಪೊಲೀಸ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ ಯುವತಿ; ಪೊಲೀಸ್​​ಗೆ ಜನರಿಂದ ಥಳಿತ

ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷ ಪೊಲೀಸರ ಮೇಲೆ ಹಲ್ಲೆ ಮಾಡುವುದನ್ನು ಕಾಣಬಹುದು. ಪೊಲೀಸ್ ಅಲ್ಲಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಅವರು ಬೆನ್ನಟ್ಟಿ ಪೊಲೀಸ್ ಗೆ ಹೊಡೆಯುತ್ತಲೇ ಇರುವುದು ವಿಡಿಯೊದಲ್ಲಿ ಕಾಣಬಹುದು. ಟ್ರಾಫಿಕ್ ಇನ್ಸ್‌ಪೆಕ್ಟರ್ ನ್ನು ರಾಜೇಂದ್ರ ಪ್ರಸಾದ್ ಎಂದು ಗುರುತಿಸಲಾಗಿದೆ

ದೆಹಲಿ: ಟ್ರಾಫಿಕ್ ಪೊಲೀಸ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ ಯುವತಿ; ಪೊಲೀಸ್​​ಗೆ ಜನರಿಂದ ಥಳಿತ
ಪೊಲೀಸರ ಮೇಲೆ ಹಲ್ಲೆ(ವಿಡಿಯೊ ದೃಶ್ಯ)
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jun 08, 2022 | 10:08 PM

ದೆಹಲಿ: ರಸ್ತೆಯ ರಾಂಗ್ ಸೈಡಲ್ಲಿ ಸ್ಕೂಟರ್ ಓಡಿಸಿದ್ದಕ್ಕಾಗಿ ತನ್ನ ಮೇಲೆ ಟ್ರಾಫಿಕ್ ಪೊಲೀಸ್ (Traffic Police) ಹಲ್ಲೆ ಮಾಡಿದ್ದಾರೆ ಎಂದು ದೆಹಲಿಯ (Delhi) ಯುವತಿಯೊಬ್ಬಳು ಆರೋಪಿಸಿದ್ದು, ಪೊಲೀಸರ  ಮೇಲೆ ಜನರ ಗುಂಪು ಹಲ್ಲೆ ಮಾಡಿದ ಘಟನೆ ನಡೆದಿದೆ. ಪೊಲೀಸ್ ಮೇಲೆ ಹಲ್ಲೆ ಮಾಡಿದ ಪ್ರಕರಣದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 6 ಮಂದಿಯನ್ನು ಬಂಧಿಸಲಾಗಿದೆ. ಬುಧವಾರ ಬೆಳಗ್ಗೆ 10 ಗಂಟೆಗೆ ಸಂಚಾರ ದಟ್ಟಣೆ ನಿಯಂತ್ರಿಸುವುದಕ್ಕಾಗಿ ಟ್ರಾಫಿಕ್ ಇನ್​​ಸ್ಪೆಕ್ಟರ್ (Traffic inspector) ದಿಯೊಲಿ ರೋಡ್ ಪ್ರದೇಶಕ್ಕೆ ಹೋಗಿದ್ದರು. ಆಗ ಮೂರು ಜನರು ಸವಾರಿ ಮಾಡುತ್ತಿದ್ದ ಸ್ಕೂಟರ್​​ನ್ನು ಪೊಲೀಸ್ ನಿಲ್ಲಿಸಿದ್ದಾರೆ. ಸ್ಕೂಟರ್ ಚಲಾಯಿಸುತ್ತಿದ್ದ ಮಹಿಳೆ ಸಿಟ್ಟಿಗೆದ್ದು ಜಗಳವಾಡಿದ್ದಾರೆ. ನಂತರ ಆಕೆ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದು ಆಮೇಲೆ ನಾಟಕವಾಡಿದ್ದಾರೆ ಎಂದು ಪೊಲೀಸ್ ಹೇಳಿದ್ದಾರೆ. ರಸ್ತೆಯಿಂದ ಸ್ಕೂಟರ್ ಕೆಳಗಿಳಿಸಿ ಎಂದು ಹೇಳಿದಾಗ ಕೋಪಗೊಂಡ ಮಹಿಳೆ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ . ಈ ವೇಳೆ ಆಕೆಯೇ ನೆಲದ ಮೇಲೆ ಬಿದ್ದಿದ್ದು, ಅಲ್ಲಿದ್ದ ಜನರು ಪೊಲೀಸನ್ನು ಸುತ್ತುವರಿದು ಹಿಗ್ಗಾಮುಗ್ಗ ಥಳಿಸಿದ್ದಾರೆ.ಆ ನಿರ್ದಿಷ್ಟ ಪ್ರದೇಶದ ಜನರಿಗೆ ದಂಡ ವಿಧಿಸಲು ಗುರುತಿನ ಮತ್ತು ಪರವಾನಗಿಯನ್ನು ತೋರಿಸಲು ನಾನು ಕೇಳಿದಾಗ ಟ್ರಾಫಿಕ್ ಇನ್​​ಸ್ಪೆಕ್ಟರ್ ನನ್ನ ಸ್ಕೂಟರ್​​ನ ಕೀ ಕಸಿದು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ.

ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷ ಪೊಲೀಸರ ಮೇಲೆ ಹಲ್ಲೆ ಮಾಡುವುದನ್ನು ಕಾಣಬಹುದು. ಪೊಲೀಸ್ ಅಲ್ಲಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಅವರು ಬೆನ್ನಟ್ಟಿ ಪೊಲೀಸ್ ಗೆ ಹೊಡೆಯುತ್ತಲೇ ಇರುವುದು ವಿಡಿಯೊದಲ್ಲಿ ಕಾಣಬಹುದು. ಟ್ರಾಫಿಕ್ ಇನ್ಸ್‌ಪೆಕ್ಟರ್ ನ್ನು ರಾಜೇಂದ್ರ ಪ್ರಸಾದ್ ಎಂದು ಗುರುತಿಸಲಾಗಿದೆ.

ಪೊಲೀಸರಿಗೆ ದೊರೆತ ಮಾಹಿತಿಯ ಪ್ರಕಾರ, ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷ ರಸ್ತೆಯ ರಾಂಗ್ ಸೈಡ್‌ನಲ್ಲಿ ಮತ್ತು ಹೆಲ್ಮೆಟ್ ಕಡ್ಡಾಯವಾಗಿರುವ ದೆಹಲಿಯಲ್ಲಿ ಹೆಲ್ಮೆಟ್ ಇಲ್ಲದೆ ಸವಾರಿ ಮಾಡುತ್ತಿದ್ದಾಗ, ಸ್ಥಳದಲ್ಲಿದ್ದ ಹೆಡ್ ಕಾನ್ಸ್‌ಟೇಬಲ್ ಅವರನ್ನು ತಡೆದಿದ್ದಾರೆ. ಟ್ರಾಫಿಕ್ ಇನ್ಸ್‌ಪೆಕ್ಟರ್ ರಾಜೇಂದ್ರ ಪ್ರಸಾದ್, ಸ್ಕೂಟರ್ ಅನ್ನು ಎಳೆದು ತರಲು ಕ್ರೇನ್‌ಗೆ ಕರೆ ಮಾಡಿದಾಗ ಅವರು ಅನುಚಿತವಾಗಿ ವರ್ತಿಸಲು ಪ್ರಾರಂಭಿಸಿದರು. ಇದರಿಂದ ಕೋಪಗೊಂಡ ಮಹಿಳೆ, ಅಲ್ಲಿದ್ದ ಸಿಬ್ಬಂದಿ ಮೇಲೆ ದೈಹಿಕವಾಗಿ ಹಲ್ಲೆ ನಡೆಸಲು ಆರಂಭಿಸಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ಪೊಲೀಸರು ವಿಷಯ ತಿಳಿದು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 10:06 pm, Wed, 8 June 22

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?