Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಯುವಕನ ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತಿಸಿದ ಮಂಗಳಮುಖಿಯರು!

ಮಂಗಳಮುಖಿಯರಲ್ಲಿ ಸ್ವಾವಲಂಬಿಗಳಾಗಿ ಛಲದಿಂದ ಬದುಕುಕಟ್ಟಿಕೊಳ್ಳುವ ಮಾದರಿ ನಡೆಯ ಮಂಗಳಮುಖಿಯರು ನಮ್ಮ ನಡುವೆಯೇ ಇದ್ದಾರೆ. ಕಾನೂನು ಬಾಹಿರ ಚಟುವಟಿಕೆಗಳಲ್ಲೂ ತೊಡಗಿಕೊಂಡಿದ್ದಾರೆ. ಹೌದು...ಬೆಂಗಳೂರಿ‌ನ ಅದೊಂದು ಮಂಗಳಮುಖಿಯರ ಗ್ಯಾಂಗ್ ವಿರುದ್ದ ಯುವಕನಿಗೆ ಬಲವಂತವಾಗಿ ಲಿಂಗಪರಿವರ್ತನೆ ಮಾಡಿರುವ ಗಂಭೀರ ಆರೋಪ ಕೇಳಿಬಂದಿದೆ. ಏನದು ಆರೋಪ...? ಆ ಗ್ಯಾಂಗ್ ಯಾವುದು? ಎನ್ನುವ ಡಿಟೇಲ್ಸ್ ಇಲ್ಲಿದೆ.

ಬೆಂಗಳೂರಿನಲ್ಲಿ ಯುವಕನ ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತಿಸಿದ ಮಂಗಳಮುಖಿಯರು!
ಯುವಕನ ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತಿಸಿದ ಮಂಗಳಮುಖಿಯರು
Follow us
Shivaprasad
| Updated By: ರಮೇಶ್ ಬಿ. ಜವಳಗೇರಾ

Updated on:Aug 20, 2024 | 7:32 PM

ಬೆಂಗಳೂರು, (ಆಗಸ್ಟ್ 20): ಟೀ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕನನ್ನು ಹೆದರಿಸಿ, ಬೆದರಿಸಿ ಮನೆಯಲ್ಲಿ ಇರಿಸಿಕೊಂಡಿದ್ದ ಮಂಗಳಮುಖಿಯರು ಪ್ರಜ್ಞೆ ತಪ್ಪಿಸಿ ಆತನ ಮರ್ಮಾಂಗ ಕತ್ತರಿಸಿ, ಲಿಂಗ ಪರಿವರ್ತಿಸಿದ್ದಾರೆ. ಸುಲಭವಾಗಿ ಹಣ ಸಂಪಾದನೆ ಮಾಡುವ ದೃಷ್ಟಿಯಿಂದ ಇಂತಹ ಕೃತ್ಯ‌ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಬೆಂಗಳೂರಿನ ಪುಲಿಕೇಶಿನಗರ ಠಾಣಾ ವ್ಯಾಪ್ತಿಯ ಫ್ರೆಜರ್ ಟೌನ್ ನಲ್ಲಿ 18 ವರ್ಷದ ಯುವಕನನ್ನ ಐವರು ಮಂಗಳ ಮುಖಿಯರ ಅಟ್ಟಹಾಸ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ. ಬಲವಂತವಾಗಿ ಹುಡುಗನೊಬ್ಬನಿಗೆ ಲಿಂಗ ಪರಿವರ್ತನೆ ಮಾಡಿಸಿರುವ ಆರೋಪ ಕೇಳಿ ಬಂದಿದೆ.

ಮೂರು ವರ್ಷಗಳ ಹಿಂದೆ ಅಂಬೇಡ್ಕರ್‌ ಕಾಲೇಜ ಸಮೀಪದಲ್ಲಿದ್ದ ಟೀ ಅಂಗಡಿಯಲ್ಲಿ ಸಂತ್ರಸ್ತ ಕೆಲಸ ಮಾಡಿಕೊಂಡಿದ್ದ. ಚಿತ್ರ, ಅಶ್ವಿನಿ, ಕಾಜಲ್‌, ಪ್ರೀತಿ, ಮುಗಿಲ ಎಂಬುವವರು ಟೀ ಕುಡಿಯುವ ನೆಪದಲ್ಲಿ ಬಂದು ಯುವಕನನ್ನು ಪರಿಚಯ ಮಾಡಿಕೊಂಡಿದ್ದರು. ನಮ್ಮ ಜತೆಗೆ ಬಂದರೆ ನಿನ್ನನ್ನು ಒಳ್ಳೆಯ ಮನೆಯಲ್ಲಿರಿಸಿ, ಸಂಪಾದನೆಯ ದಾರಿಯನ್ನು ಮಾಡಿಕೊಡುವುದಾಗಿ ಯುವಕನನ್ನು ಪುಸಲಾಯಿಸಿದ್ದಾರೆ. ಆದರೆ ಯುವಕ ಇದಕ್ಕೆ ಒಪ್ಪದೆ ಇದ್ದಾಗ, ಬಲವಂತವಾಗಿ ಬೆದರಿಸಿ ಟ್ಯಾನರಿ ರಸ್ತೆಯಲ್ಲಿದ್ದ ಮನೆಯಲ್ಲಿ ಯುವಕನನ್ನು ಇರಿಸಿಕೊಂಡಿದ್ದಾರೆ. ಬಳಿಕ ಭಿಕ್ಷೆ ಬೇಡು ಇಲ್ಲದಿದ್ದರೆ ರೌಡಿಗಳಿಗೆ ಹೇಳಿ ನಿನ್ನ ತಂದೆ-ತಾಯಿಯನ್ನು ಕೊಲೆ ಮಾಡಿಸುತ್ತೇವೆ ಎಂದು ಹೆದರಿಸಿದ್ದಾರೆ. ಇವರ ಬ್ಲ್ಯಾಕ್‌ಮೇಲ್‌ಗೆ ಹೆದರಿದ ಯುವಕ ಸುಮಾರು ಮೂರು ವರ್ಷಗಳ ಕಾಲ ಭಿಕ್ಷಾಟನೆ ಮಾಡಿಸಿ ಹಣ ಸಂಪಾದಿಸಿದ್ದಾರೆ.

ಇದನ್ನೂ ಓದಿ: ಆಟೋಗೆ ಬೈಕ್ ಟಚ್; ಫುಡ್ ಡೆಲಿವರಿ ಬಾಯ್ ಮೇಲೆ ಮನಸೋ ಇಚ್ಛೆ ಹಲ್ಲೆ, ವಿಡಿಯೋ ವೈರಲ್​

ಇತ್ತೀಚೆಗೆ ಈ ಮಂಗಳಮುಖಿಯರು ಯುವಕನಾಗಿಯೇ ಇಷ್ಟು ದುಡಿಯುತ್ತಿದ್ದಯಾ, ಹೆಣ್ಣಾದರೆ ಇನ್ನೂ ಎಷ್ಟು ಹಣವನ್ನು ಸಂಪಾದನೆ ಮಾಡಬಹುದು ಎಂದಿದ್ದಾರೆ. ಲಿಂಗ ಪರಿವರ್ತಿಸಿಕೊಂಡು ಹೆಣ್ಣಾಗು ಎಂದು ಬಲವಂತ ಮಾಡಿದ್ದಾರೆ. ಒಪ್ಪದೆ ಇದ್ದಾಗ ಗಾಂಜಾ ಸೇವಿಸಿ, ಮದ್ಯಪಾನ ಮಾಡಿಕೊಂಡು ಬಂದು ಹಲ್ಲೆ ನಡೆಸಿದ್ದಾರೆ. ಬಳಿಕ ಬಲವಂತವಾಗಿ ಇಂಜೆಕ್ಷನ್ ಕೊಟ್ಟು ಪ್ರಜ್ಞೆ ತಪ್ಪಿಸಿ ಮರ್ಮಾಂಗವನ್ನು ಕತ್ತರಿಸಿದ್ದಾರೆ. ಯುವಕ ಎಚ್ಚರಗೊಂಡ ಲಿಂಗ ಪರಿವರ್ತನೆ ಮಾಡಿದ್ದಾರೆ. ಅಕ್ರಮವಾಗಿ ಲಿಂಗ ಪರಿವರ್ತನೆ, ಅಶ್ಲೀಲ ಫೋಟೊ ತೆಗೆದುಕೊಂಡು ಬ್ಲಾಕ್ ಮೇಲ್ ಮಾಡಿದ್ದಲ್ಲದೆ ಮನಬಂದಂತೆ ಥಳಿಸಿ ಚಿತ್ರ ಹಿಂಸೆ ಕೊಟ್ಟಿದ್ದಾರೆ.

ಭಿಕ್ಷಾಟನೆ ಮಾಡುವಂತೆ ದೈಹಿಕ ಹಲ್ಲೆ, ಮಾನಸಿಕ ಹಿಂಸೆ ನೀಡಿದ್ದಾರೆ. ಕಳೆದ ಆಗಸ್ಟ್ 3 ರವರೆಗೆ ಮನೆಯಲ್ಲಿಯೇ ಕೂಡಿ ಹಾಕಿ, ಮನೆ ಮೇಲೆ ಕರೆದುಕೊಂಡು ಹೋಗಿ ಯಾವುದೋ ಪೂಜೆ ಮಾಡಿಸಿದ್ದಾರೆ. ನಂತರ ಹೇಗೋ ಇವರಿಂದ ತಪ್ಪಿಸಿಕೊಂಡ ಸಂತ್ರಸ್ತ ಪೊಲೀಸರಿಗೆ ದೂರು ನೀಡಿದ್ದಾನೆ.

ಮಂಗಳಮುಖಿಯರಾದ ಚಿತ್ರಾ, ಪ್ರೀತಿ, ಕಾಜಲ್, ಅಶ್ವಿನಿ, ಮುಗಿಲಿ ಎಂಬ ಐವರ ವಿರುದ್ಧ ಸಂತ್ರಸ್ಥ ದೂರು ನೀಡಿದ್ದು, ಪುಲಕೇಶಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೇ ಅಶ್ಲೀಲ ಫೋಟೋಗಳನ್ನು ತೆಗೆದುಕೊಂಡು ಬ್ಲಾಕ್ ಮೇಲ್ ಕೂಡ ಮಾಡ್ತಿದ್ದಾರೆ ಎನ್ನುವ ಆರೋಪ ಸಹ ಮಾಡಿದ್ದಾನೆ. ಇನ್ನು ಇಷ್ಟೆಲ್ಲ ಮಾಡಿದ್ದಲ್ಲದೇ ಕಸೀಪಾ ಬರೋದಿಲ್ಲ ಎಂದಿದ್ದಕ್ಕೆ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರಂತೆ. ಮನೆಯಲ್ಲಿದ್ದ ವಸ್ತುಗಳನ್ನು ಎಸೆದು ಚೆಲ್ಲಾಪಿಲ್ಲಿ ಮಾಡಿ ದಾಂಧಲೆ ಮಾಡಿದ್ದಾರಂತೆ. ಇನ್ನು ಕಸೀಪಾಗೆ ಸಹಾಯಕ್ಕೆ ಧಾವಿಸಿ ಕೆಲ ಮಂಗಳಮುಖಿಯರ ಮೇಲೂ ಹಲ್ಲೆಗೆ ಮುಂದಾಗಿ ಜೀವ ಬೆದರಿಕೆ ಹಾಕಿದ್ದಾರೆ ಅನ್ನೋ ಆರೋಪ ಕೇಳಿ ಬಂದಿದೆ.

ಸದ್ಯ ಘಟನೆ ಸಂಬಂಧ ಪುಲಕೇಶಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಸ್ ದಾಖಲಿಸಿಕೊಂಡಿರೋ ಪೊಲೀಸರು ತನಿಖೆ ನಡೆಸ್ತಿದ್ದಾರೆ.. ಇಲ್ಲಿ ಎರಡೂ ತಂಡಗಳೂ ಮಂಗಳ ಮುಖಿಯರ ತಂಡ.. ಇವರ ಗಲಾಟೆಯ ಅಸಲಿ ಸತ್ಯ ಏನು ಅನ್ನೋದು ನಿಸ್ಪಕ್ಷಪಾತ ತನಿಖೆ ನಂತರವೇ ಅಸಲಿಯತ್ತು ಹೊರಬರಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:23 pm, Tue, 20 August 24