Himachal Pradesh: ಸೇಬು ತುಂಬಿದ್ದ ಟ್ರಕ್ ಕಾರಿನ ಮೇಲೆ ಪಲ್ಟಿ, 3 ಜನ ಸಾವು
ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ಛರಾಬ್ರಾ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ಸೇಬು ತುಂಬಿದ್ದ ಟ್ರಕ್ ಕಾರಿನ ಮೇಲೆ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ.
ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ಛರಾಬ್ರಾ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ಸೇಬು ತುಂಬಿದ್ದ ಟ್ರಕ್ ಕಾರಿನ ಮೇಲೆ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ.
ಟ್ರಕ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಬಂಧಿಸಲಾಗಿದೆ. ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರು ಶಿಮ್ಲಾ ಅಪಘಾತದಲ್ಲಿ ಸಾವಿಗೆ ಸಂತಾಪ ಸೂಚಿಸಿದ್ದು, “ಥಿಯೋಗ್-ಶಿಮ್ಲಾ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರ ಸಾವಿನ ಸುದ್ದಿ ತುಂಬಾ ದುಃಖಕರವಾಗಿದೆ, ದೇವರು ಅಗಲಿದ ಆತ್ಮಗಳಿಗೆ ಶಾಂತಿ ಮತ್ತು ದುಃಖಿತ ಕುಟುಂಬಗಳಿಗೆ ಧೈರ್ಯ ನೀಡಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ, ಎಂದು ದೇವರಲ್ಲಿ ನಮ್ಮ ಪ್ರಾರ್ಥನೆ ಎಂದು ಟ್ವೀಟ್ ಮಾಡಿದ್ದಾರೆ.