ಮರ ಕತ್ತರಿಸುವ ಯಂತ್ರದಿಂದ ವ್ಯಕ್ತಿಯ ಬರ್ಬರ ಹತ್ಯೆ: ಬೆಚ್ಚಿಬಿದ್ದ ಮಂಡ್ಯ!

ಅದೊಂದು ಗ್ರಾಮದ ಹೊರವಲಯದಲ್ಲಿರುವ ಒಂಟಿ‌ ಮನೆ. ಗಂಡ ಹೆಂಡತಿ ಒಬ್ಬ ಮಗ ವಾಸವಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡು ಮರ ಕತ್ತರಿಸುವ ಯಂತ್ರ ಮಾರಾಟ ಮಾಡುವ ನೆಪದಲ್ಲಿ ಮನೆನುಗ್ಗಿ ರಕ್ತದ ಕೋಡಿ ಹರಿಸಿದ್ದಾನೆ. ಹೌದು...ತೋಟದ ಮನೆಗೆ ಬಂದ ಅಪರಿಚಿತ ವ್ಯಕ್ತಿಯೊಬ್ಬ ಮರ ಕತ್ತರಿಸುವ ಯಂತ್ರದಲ್ಲಿ ಮನೆಯ ಮಾಲೀಕನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಮರ ಕತ್ತರಿಸುವ ಯಂತ್ರದಿಂದ ವ್ಯಕ್ತಿಯ ಬರ್ಬರ ಹತ್ಯೆ: ಬೆಚ್ಚಿಬಿದ್ದ ಮಂಡ್ಯ!
ಮೃತ ರಮೇಶ್ , ಮರ ಕತ್ತರಿಸುವ ಯಂತ್ರ
Edited By:

Updated on: Dec 22, 2024 | 3:35 PM

ಮಂಡ್ಯ, (ಡಿಸೆಂಬರ್ 22): ತೋಟದ ಮನೆಗೆ ಬಂದ ಅಪರಿಚಿತ ವ್ಯಕ್ತಿಯೊಬ್ಬ ಮರ ಕತ್ತರಿಸುವ ಯಂತ್ರದಲ್ಲಿ ಮನೆಯ ಮಾಲೀಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ‌ ಗ್ರಾಮದಲ್ಲಿ ನಡೆದಿದೆ. 60 ವರ್ಷದ ರಮೇಶ್ ಕೊಲೆಯಾದ ದುರ್ದೈವಿ. ಮರ ಕತ್ತರಿಸುವ ಯಂತ್ರದಿಂದಲೇ ಭೀಕರವಾಗಿ ಹತ್ಯೆ ಮಾಡಿದ್ದಾನೆ. ಇನ್ನೂ ಪಾಪಿಯ ಕೈಯಲ್ಲಿ ಸಿಲುಕಿ ಮೃತ ರಮೇಶ್ ಪತ್ನಿ ಯಶೋಧಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ (ಡಿಸೆಂಬರ್ 21) ಸಂಜೆ ಏಳು ಗಂಟೆ ಸುಮಾರಿಗೆ ಅಪರಿಚಿತ ವ್ಯಕ್ತಿ, ರಮೇಶ್ ಮನೆಗೆ ಬಂದು ಮರ ಕತ್ತರಿಸುವ ಯಂತ್ರ ಬುಕ್ ಮಾಡಿದ್ದಾರೆ ಎಂದು ಬಾಗಿಲು ತಟ್ಟಿದ್ದಾನೆ. ಈ ವೇಳೆ ಯಶೋಧಮ್ಮ ನಾವು ಯಾವುದನ್ನು ಬುಕ್ ಮಾಡಿಲ್ಲ ಎಂದು ಹೇಳುತ್ತಿದ್ದಂತೆ ಯಶೋಧಮ್ಮ ‌ಮೇಲೆ ಅಟ್ಯಾಕ್ ಮಾಡಿದ್ದಾನೆ. ಮರ ಕತ್ತರಿಸುವ ಯಂತ್ರವನ್ನು ಆನ್ ಮಾಡಿ ಯಶೋಧಮ್ಮ ಮುಖದ ಭಾಗಕ್ಕೆ ಹಿಡಿದಿದ್ದಾನೆ. ಈ ಹಿನ್ನೆಲೆಯಲ್ಲಿ ಯಶೋಧಮ್ಮ ಪ್ರಜ್ಞೆ ತಪ್ಪಿದ್ದಾಳೆ. ನಂತರ ಮನೆಯೊಳಗೆ ನುಗ್ಗಿದ ಆರೋಪಿ ಮನೆಯೊಳಗೆ ಇದ್ದ ರಮೇಶ್ ಮೇಲೆ ಅಟ್ಟಹಾಸ ಮೆರೆದಿದ್ದಾನೆ.

ಇದನ್ನೂ ಓದಿ: ಆಶ್ರಯ ಕೊಟ್ಟವನನ್ನೇ ಕೊಂದ ದುರುಳ: ಸಲಿಂಗಕಾಮಕ್ಕೆ ವಿರೋಧಿಸಿದ್ದಕ್ಕೆ ಸ್ನೇಹಿತನ ಕತೆ ಮುಗಿಸಿದ!

ಮಲಗಿದ್ದ ರಮೇಶ್ ಅವರ ಕುತ್ತಿಗೆಗೆ ಮರ ಕತ್ತರಿಸುವ ಯಂತ್ರವನ್ನು ಹಿಡಿದಿದ್ದಾನೆ. ನಂತರ ರಮೇಶ್ ಕೈ ಭಾಗಕ್ಕೆ ಎಲ್ಲಾ ಹಿಡಿದು ಬರ್ಬರವಾಗಿ ಹತ್ಯೆ ಮಾಡುತ್ತಾನೆ. ಈ‌ ವೇಳೆ ಪ್ರಜ್ಞೆ ತಪ್ಪಿದ್ದ ಯಶೋಧಮ್ಮ ಎಚ್ಚರಗೊಂಡು ಮನೆಯ ಬಾಗಿಲನ್ನು ಹೊರಗಡೆಯಿಂದ ಲಾಕ್ ಮಾಡಿ, ನಂತರ ಸ್ಥಳೀಯರನ್ನು ಕರೆದಿದ್ದಾರೆ. ಈ ವೇಳೆ ಮರ ಕತ್ತರಿಸುವ ಯಂತ್ರದ ಮೂಲಕ ಬಾಗಿಲನ್ನು ಕೊಯ್ಯಲು ಸಹ ಆತ ಯತ್ನಿಸಿದ್ದಾನೆ. ಆದ್ರೆ, ಅದು ಸಾಧ್ಯವಾಗಿಲ್ಲ.

ಇನ್ನು ಅಕ್ಕಪಕ್ಕದ ಜನರು ಸೇರಿಕೊಂಡು ತಕ್ಷಣ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮನೆಯ ಒಳಗೆ ಬಂಧಿಯಾಗಿದ್ದ ಆರೋಪಿಯನ್ನ ಆಚೆ ಕರೆದುಕೊಂಡು ಬರುತ್ತಿದ್ದಂತೆಯೇ ಸ್ಥಳೀಯರು ಧರ್ಮದೇಟು ನೀಡಿದ್ದಾರೆ. ಇದರಿಂದ ಅಸ್ವಸ್ಥಗೊಂಡಿರುವ ಆರೋಪಿಯನ್ನ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನು ಕೊಲೆ ಆರೋಪಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಯಶೋಧಮ್ಮರನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನು ಇದೇ ವೇಳೆ ಮತ್ತೊಬ್ಬ ಶಂಕಿತ ಆರೋಪಿಯನ್ನ ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಕೊಲೆ ಪ್ರಕರಣ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಒಟ್ಟಾರೆ ಒಂಟಿ ಮನೆಯಲ್ಲಿ ನಡೆದ ಭೀಕರ ಹತ್ಯೆಗೆ ಇಡೀ ಮಂಡ್ಯ ಜನ ಬೆಚ್ಚಿ ಬಿದ್ದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
Loading...
Unable to load recommendations.
Follow Us