ಬೆಂಗಳೂರು: ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ; ಅಳಿಯನ ವಿರುದ್ಧ ದೂರು ದಾಖಲು

| Updated By: sandhya thejappa

Updated on: Dec 22, 2021 | 12:11 PM

ಮಂಜುನಾಥನ ವಿರುದ್ಧ ರಂಜಿತಾ ಪೋಷಕರು ಹತ್ಯೆ ಆರೋಪ ಮಾಡುತ್ತಿದ್ದಾರೆ. ವರದಕ್ಷಿಣೆ ಕಿರುಕುಳ, ಕೊಲೆ ಆರೋಪದಡಿ ಪೋಷಕರು ದೂರು ನೀಡಿದ್ದಾರೆ. ಈ ಬಗ್ಗೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೆಂಗಳೂರು: ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ; ಅಳಿಯನ ವಿರುದ್ಧ ದೂರು ದಾಖಲು
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ಉಲ್ಲಾಳು ಉಪನಗರದ ಬಸ್ತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಫ್ಯಾನ್ಗೆ ನೇಣುಬಿಗಿದ ಸ್ಥಿತಿಯಲ್ಲಿ 26 ವರ್ಷದ ರಂಜಿತಾ ಎಂಬ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಆಕೆಯ ಪೋಷಕರು ಜ್ಞಾನಭಾರತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 2017ರಲ್ಲಿ ರಂಜಿತಾ ಮಂಜುನಾಥನನ್ನು ಪ್ರೀತಿಸಿ ಮದುವೆಯಾಗಿದ್ದರು. 2ನೇ ಮಗುವಿನ ಬಾಣಂತನಕ್ಕೆ ತವರಿಗೆ ಹೋಗಿ ಬಂದಿದ್ದರು. ಪತಿಯ ಅಕ್ರಮ ಸಂಬಂಧ ಪ್ರಶ್ನಿಸಿ ರಂಜಿತಾ ಆಗಾಗ ಜಗಳವಾಡುತ್ತಿದ್ದರಂತೆ. ಹೀಗಾಗಿ ಪತಿಯೇ ಹತ್ಯೆ ಮಾಡಿದ್ದಾನೆ ಅಂತ ಪೋಷಕರು ಆರೋಪಿಸುತ್ತಿದ್ದಾರೆ.

ಮಂಜುನಾಥನ ವಿರುದ್ಧ ರಂಜಿತಾ ಪೋಷಕರು ಹತ್ಯೆ ಆರೋಪ ಮಾಡುತ್ತಿದ್ದಾರೆ. ವರದಕ್ಷಿಣೆ ಕಿರುಕುಳ, ಕೊಲೆ ಆರೋಪದಡಿ ಪೋಷಕರು ದೂರು ನೀಡಿದ್ದಾರೆ. ಈ ಬಗ್ಗೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ
ರಾಮನಗರ: ಕೆರೆಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ದಮ್ಮನಕಟ್ಟೆಯಲ್ಲಿ ನಡೆದಿದೆ. ಮೂವರು ಸಾವನ್ನಪ್ಪಿದ್ದು, ಬಾಲಕಿ ಮಾತ್ರ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಸಿದ್ದಮ್ಮ(55), ಸುಮಿತ್ರಾ(30), ಹನುಮಂತ ರಾಜು(35) ಮೃತಟ್ಟಿದ್ದಾರೆ. ಕೀರ್ತನಾಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ಮೂವರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಪರಿಚಿತ ವಾಹನ ಡಿಕ್ಕಿ; ಕರಡಿ ಸಾವು
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮ್ಯಾದಿನೇರಿ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಕರಡಿ ಸಾವನ್ನಪ್ಪಿದೆ. ಬೆಳಗಿನ ಜಾವ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಕರಡಿ ಮೃತಪಟ್ಟಿದೆ. ರಸ್ತೆ ದಾಟುವಾಗ ವಾಹನ ಡಿಕ್ಕಿಯಾಗಿದೆ. ವಾಹನ ಡಿಕ್ಕಿ ಹೊಡೆದಿದ್ದರಿಂದ ಕರಡಿಗೆ ಗಾಯವಾಗಿತ್ತು. ಸ್ಥಳೀಯರು ನೀರು ಕುಡಿಸಿ ಆರೈಕೆ ಮಾಡಿದರು ಕರಡಿ ಬದುಕುಳಿಯಲಿಲ್ಲ.

ಇದನ್ನೂ ಓದಿ

ಕಾನೂನುಬದ್ದವಾಗಿ ಮತಾಂತರ ಮಾಡಬಹುದು ಕದ್ದುಮುಚ್ಚಿ ಮತಾಂತರ ಮಾಡುವಂತಿಲ್ಲ -ಸಚಿವ ಕೆ.ಎಸ್.ಈಶ್ವರಪ್ಪ

ಹಿರಿಯ ವಿದ್ವಾನ್, ಆಧ್ಯಾತ್ಮಿಕ ಚಿಂತಕ ಹಾಗೂ ಪ್ರವಚನಕಾರ ಲಕ್ಷ್ಮಣದಾಸ್ ವೇಲಣಕರ್ ನಿಧನ