ಪುಣೆ: ಹೋಟೆಲ್‌ನಿಂದ ಮೊಟ್ಟೆ ಕದ್ದಿದ್ದಾರೆ ಎಂದು ಶಂಕಿಸಿ ಮಹಿಳೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ

ಪ್ರೀತಿಸುತ್ತಿದ್ದ ಜೋಡಿಯೊಂದು ಓಡಿ ಹೋಗಿದ್ದಕ್ಕೆ ಯುವತಿಯ ಕುಟುಂಬಸ್ಥರು ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ಘಟನೆ ಮಾಸುವ ಮುನ್ನವೇ ಪುಣೆಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ದೌರ್ಜನ್ಯವೆಸಗಿದ ಪ್ರಕರಣ ವರದಿ ಆಗಿದೆ.

ಪುಣೆ: ಹೋಟೆಲ್‌ನಿಂದ ಮೊಟ್ಟೆ ಕದ್ದಿದ್ದಾರೆ ಎಂದು ಶಂಕಿಸಿ ಮಹಿಳೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ
ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on: Dec 18, 2023 | 2:14 PM

ಪುಣೆ, ಡಿಸೆಂಬರ್ 18: ಪುಣೆ (Pune) ನಗರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಹೊಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಮೊಟ್ಟೆ ಕದ್ದಿದ್ದಾರೆ ಎಂದು ಆರೋಪಿಸಿ ಆಕೆಯನ್ನು ವಿವಸ್ತ್ರಗೊಳಿಸಿದ ಘಟನೆ ವರದಿ ಆಗಿದೆ.  ಪುಣೆ ನಗರದ ಹೋಟೆಲ್ ಪಾರ್ಕ್ ಆರ್ನೇಟ್‌ನ ಅಡುಗೆಯವರು ಇದನ್ನು ಮಾಡಿದ್ದಾರೆ. ಆರೋಪಿಯ ಹೆಸರು ಮುಖೇಶ್ ಸಿಂಗ್ ಪುಂಡಿಲ್. ಆತನ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಪುಣೆಯಂತಹ ಸಾಂಸ್ಕೃತಿಕ ನಗರಿಯಲ್ಲಿ ಮಹಿಳಾ ಉದ್ಯೋಗಿಯೊಂದಿಗೆ ನಡೆದ ಈ ಆಘಾತಕಾರಿ ಘಟನೆಯಿಂದ ಎಲ್ಲರೂ ಬೆಚ್ಚಿಬಿದ್ದಿದ್ದಾರೆ.

ಆ ಉದ್ಯೋಗಿಯ ವಿರುದ್ಧ ಹೋಟೆಲ್ ಆಡಳಿತ ಏನು ಕ್ರಮ ಕೈಗೊಂಡಿದೆ? ಈ ಬಗ್ಗೆ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ ಎಂದು ಟಿವಿ9 ಮರಾಠಿ ವರದಿ ಮಾಡಿದೆ. ಪ್ರೀತಿಸುತ್ತಿದ್ದ ಜೋಡಿಯೊಂದು ಓಡಿ ಹೋಗಿದ್ದಕ್ಕೆ ಯುವತಿಯ ಕುಟುಂಬಸ್ಥರು ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ಘಟನೆಯ ಬೆನ್ನಲ್ಲೇ ಪುಣೆಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ ವರದಿ ಆಗಿದೆ.

ಆರೋಪಿ ವಿರುದ್ಧ ಪ್ರಕರಣ ದಾಖಲು

ಆರೋಪಿ ಮುಖೇಶ್ ಸಿಂಗ್ ಪುಂಡಿಲ್ ಪುಣೆಯ ಹೋಟೆಲ್ ಪಾರ್ಕ್ ಆರ್ನೇಟ್ ನಲ್ಲಿ ಬಾಣಸಿಗನಾಗಿ ಕೆಲಸ ಮಾಡುತ್ತಿದ್ದಾನೆ. ಸಂತ್ರಸ್ತೆ 50 ವರ್ಷದ ಮಹಿಳೆ ಈ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ನೀವು ಮೊಟ್ಟೆ ಕದ್ದಿದ್ದೀರಿ ಎಂದು ಅಲ್ಲಿ ಕೆಲಸ ಮಾಡುತ್ತಿರುವ ಮಹಿಳೆ ಮೇಲೆ ಮುಖೇಶ್ ಸಿಂಗ್ ಆರೋಪಿಸಿದ್ದಾರೆ. ನೀವು ಮೊಟ್ಟೆ ಅಡಗಿಸಿಟ್ಟಿದ್ದೀರಿ ಇದರಿಂದ ಹುಡುಕಾಟ ನಡೆಸಬೇಕಾಗುತ್ತದೆ ಎಂದು ಸಿಂಗ್ ಮಹಿಳೆಯ ಬಟ್ಟೆ ಬಿಚ್ಚುವಂತೆ ಒತ್ತಾಯಿಸಿದ್ದಾನೆ.

ಇದನ್ನೂ ಓದಿ: ಹಲ್ಲೆ ನಡೆಸುವಾಗ ಮೂಕಪ್ರೇಕ್ಷಕರಾಗಿದ್ದ ಜನರಿಂದ ದಂಡ ಸಂಗ್ರಹಿಸಿ ಸಂತ್ರಸ್ತೆಗೆ ನೀಡಿ: ಹೈಕೋರ್ಟ್ ಸಲಹೆ

ಆರೋಪಿ ಮುಖೇಶ್ ಸಿಂಗ್ ಅಲ್ಲಿಗೆ ನಿಲ್ಲದೆ ಮಹಿಳೆಯ ರಸ್ತೆ ತಡೆದು ಆಕೆಯನ್ನು ಬೈದಿದ್ದಾನೆ. ಮಹಿಳೆಗೆ ಕಿರುಕುಳ ನೀಡಲಾಯಿತು. ಪುಣೆ ನಗರದ ಹೋಟೆಲ್ ಪಾರ್ಕ್ ಆರ್ನೇಟ್‌ನ ಅಡುಗೆಯವರು ಮಾಡಿದ ಈ ಕೃತ್ಯಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ.. ಈ ಪ್ರಕರಣದ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು ಯರವಾಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ