ಹಾವೇರಿ: ಹೋರಿ (Bull) ಬೆದರಿಸುವ ಸ್ಪರ್ಧೆ ನೋಡುತ್ತಾ ನಿಂತಿದ್ದ ವೇಳೆ ಓಡಿ ಬಂದ ಹೋರಿ ಹೊಟ್ಟೆಗೆ ತಿವಿದು ಯುವಕ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹಿರೇಕೆರೂರು ತಾಲೂಕಿನ ಬೆಟಕೆರೂರು ಗ್ರಾಮದಲ್ಲಿ ನಡೆದಿದೆ. ರಾಣೆಬೆನ್ನೂರು ತಾಲೂಕಿನ ಗುಡ್ಡದಹೊಸಳ್ಳಿ ಗ್ರಾಮದ ನಿವಾಸಿ ಷಣ್ಮುಖ ಹುಡೇದ (22) ಮೃತ ಯುವಕ. ಬೆಟಕೆರೂರು ಗ್ರಾಮದ ಭೂತಪ್ಪನ ಗುಡ್ಡದ ಇಳಿಜಾರಿನಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆಯ ವೇಳೆ ದುರ್ಘಟನೆ ಸಂಭವಿಸಿದೆ. ಹಿರೇಕೆರೂರು ತಾಲೂಕು ಸರಕಾರಿ ಆಸ್ಪತ್ರೆಗೆ ಕರೆದೊಯ್ದ ವೇಳೆ ಯುವಕ ಮೃತಪಟ್ಟಿದ್ದಾನೆ. ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ದರೋಡೆಗೆ ಸ್ಕೆಚ್ ಹಾಕಿದ್ದ ಇಬ್ಬರ ಬಂಧನ; ಮೂವರು ಪರಾರಿ
ನೆಲಮಂಗಲ: ಮಾರಕಾಸ್ತ್ರ ಹಿಡಿದು ದರೋಡೆಗೆ ಹೊಂಚು ಹಾಕುತ್ತಿದ್ದ ಇಬ್ಬರ ಬಂಧನ ಮಾಡಿದ್ದು ಮೂವರು ಪರಾರಿಯಾಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಬೈಂಡಹಳ್ಳಿ ಬಳಿ ಪಿಎಸ್ಐ ದಾಳೇಗೌಡ ನೇತೃತ್ವದಲ್ಲಿ ನಡೆದ ಕಾರ್ಯಚರಣೆ ವೇಳೆ ಪೊಲೀಸರ ಬಲೆಗೆ ಬಿದಿದ್ದಾರೆ. ಮಾಚೋಹಳ್ಳಿ ಶಂಕರ್@ವಾಲೆ(27), ಚಿಕ್ಕಗೊಲ್ಲರಹಟ್ಟಿ ನವೀನ್(20),ಬಂಧಿತರು. ಕಬ್ಬಿಣದ ರಾಡ್, ಚಾಕು, ದೊಣ್ಣೆ, ಖಾರದಪುಡಿ ಜಪ್ತಿ ಮಾಡಲಾಗಿದೆ. ಕಾರ್ಯಚರಣೆ ವೇಳೆ ಮನೋಜ್ ಜೋತೆ ಇನ್ನಿಬ್ಬರು ಪರಾರಿಯಾಗಿದ್ದು, ಹಣದ ಸಮಸ್ಯೆ ಎದುರಾದಾಗ ದರೋಡೆ ಮಾಡುವುದಾಗಿ ಪೊಲೀಸರ ಮುಂದೆ ಅರೋಪಿಗಳ ಹೇಳಿಕೆ ನೀಡಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ವಾಯುವಿಹಾರಕ್ಕೆ ಹೋದ ವೃದ್ದನಿಗೆ ಲಾರಿ ಡಿಕ್ಕಿ, ಸ್ಥಳದಲ್ಲಿಯೇ ಸಾವು
ದಾವಣಗೆರೆ: ಜಗಳೂರು ಪಟ್ಟಣದ ಕೊಟ್ಟೂರು ರಸ್ತೆಯ ಕೆರೆ ಏರಿ ಮೇಲೆ ವಾಯುವಿಹಾರಕ್ಕೆ ತೆರಳಿದ್ದ ವೃದ್ಧನಿಗೆ ಲಾರಿ ಡಿಕ್ಕಿ ಹೊಡೆದಿದ್ದು ವೃದ್ಧ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಸಕೆರೆ ಬಡಾವಣೆ ನಿವಾಸಿ ಹನುಮಂತಪ್ಪ(80) ಮೃತರು. ಘಟನೆ ಬಳಿಕ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಸ್ ಮತ್ತು ಒಮ್ನಿ ಮುಖಾಮುಖಿ, ಇಬ್ಬರ ಸಾವು
ದ.ಕನ್ನಡ: ಮುಲ್ಕಿ ಸಮೀಪದ ಪಾವಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಮತ್ತು ಒಮ್ನಿ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಚಾಲಕ ಭುಜಂಗ(58), ವಸಂತ ಕುಂದರ್ ಮೃತರು. ಭೀಕರ ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಒಮ್ನಿ ಕಾರ್ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ;