ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಆತ್ಮಹತ್ಯೆಗೆ ಶರಣಾದ ಯುವಕ; ಕಾರಣವೇನು ಗೊತ್ತಾ?

ಪೇಸ್‍ಬುಕ್‍(Facebook)ನಲ್ಲಿ ಲೈವ್‍ಗೆ ಬಂದಿದ್ದ ವ್ಯಕ್ತಿಯೋರ್ವ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಹರಿಬಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಮೃತನ ತಾಯಿ ಮಂಜುಳ ಎಂಬುವವರು ಚಿಕ್ಕಬಳ್ಳಾಪುರ ನಗರಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ತನಿಖೆ ಶುರು ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಆತ್ಮಹತ್ಯೆಗೆ ಶರಣಾದ ಯುವಕ; ಕಾರಣವೇನು ಗೊತ್ತಾ?
ಮೃತ ವ್ಯಕ್ತಿ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 21, 2023 | 3:11 PM

ಚಿಕ್ಕಬಳ್ಳಾಪುರ, ಅ.21: ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಹರಿಬಿಟ್ಟು ವಿವಾಹಿತನೋರ್ವ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ(Chikkaballapura) ನಗರದ 17ನೇ ವಾರ್ಡ್‍ನಲ್ಲಿ ನಡೆದಿದೆ. ಕೆ.ವೆಂಕಟೇಶ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಪೇಸ್‍ಬುಕ್‍(Facebook)ನಲ್ಲಿ ಲೈವ್‍ಗೆ ಬಂದಿದ್ದ ಮೃತ ವ್ಯಕ್ತಿ. ‘ಪತ್ನಿ ಶಿಲ್ಪಾ, ಅತ್ತೆ ಅಶ್ವತ್ಥಮ್ಮ ಹಾಗೂ ಬಾಮೈದ ವೆಂಕಟೇಶ್ ಅವರು, ‘ನೀನು ಸಾಯೋವರೆಗೂ ನಮಗೆ ನೆಮ್ಮದಿ ಇಲ್ಲವೆಂದು ಹೀಯಾಳಿಸುತ್ತಿದ್ದರಂತೆ. ಜೊತೆಗೆ ಗಂಡ ವೆಂಕಟೇಶನನ್ನು ತೊರೆದು ಪತ್ನಿ ಶಿಲ್ಪಾ ತವರುಮನೆ ಸೇರಿದ್ದಳಂತೆ. ಈ ಹಿನ್ನಲೆ ಇವರ ಕಿರುಕುಳದಿಂದ ಸಾಯುತ್ತಿದ್ದೇನೆ ಎಂದು ಆರೋಪಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನು ಈ ಘಟನೆ ಕುರಿತು ಮೃತನ ತಾಯಿ ಮಂಜುಳ ಎಂಬುವವರು ಚಿಕ್ಕಬಳ್ಳಾಪುರ ನಗರಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ತನಿಖೆ ಶುರು ಮಾಡಿದ್ದಾರೆ.

ಕೂಲಿ ಹಣ ಕೇಳಿದ್ದಕ್ಕಾಗಿ ದಲಿತ ಯುವಕನ ಮೇಲೆ ಹಲ್ಲೆ; ಇಬ್ಬರು ಆರೋಪಿಗಳ ಬಂಧನ

ಕೋಲಾರ: ಕೂಲಿ ಹಣ ಕೇಳಿದ್ದಕ್ಕಾಗಿ ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಇಬ್ಬರು ಆರೋಪಿಗಳನ್ನ ಬಂಧಿಸಿದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ದೊಡ್ಡವಲಗಮಾದಿ ಗ್ರಾಮದಲ್ಲಿ ನಡೆದಿದೆ. ಇನ್ನುಳಿದಂತೆ ಓರ್ವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಗ್ರಾಮದ ಅಮರೇಶ್ ಎಂಬುವನ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ದರು. ಹಲ್ಲೆಗೊಳಗಾದ ಅಮರೇಶ್ ಗಾರೆ ಕೆಲಸ ಮಾಡಿಕೊಂಡಿದ್ದು, ಅದೇ ಗ್ರಾಮದ ಜಗದೀಶ್ ಸಿಂಗ್ ಎಂಬುವರ ಹೊಸ ಮನೆ ನಿರ್ಮಾಣದ ಕೆಲಸಕ್ಕೆ ಹೋಗುತ್ತಿದ್ದ.

ಇದನ್ನೂ ಓದಿ:ಸಾಮಾಜಿಕ ಬಹಿಷ್ಕಾರ; ಮನನೊಂದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಕೆಲಸ ಮಾಡಿದ್ದ ಕೂಲಿ ಕೇಳಿದ್ದಕ್ಕೆ ಜಗದೀಶ್ ಸಿಂಗ್ ಎಂಬಾತ ಅಮರೇಶ್ ಮೇಲೆ ಹಲ್ಲೆ ನಡೆಸಿದ್ದು, ಜಾತಿ ನಿಂದನೆ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಅಲ್ಲದೆ ಜಗದೀಶ್ ಸಿಂಗ್ ಜೊತೆಗೆ ರವೀಂದ್ರ ಸಿಂಗ್ ಹಾಗೂ ಸತೀಶ್ ಸಿಂಗ್ ಎಂಬುವರು ಸಹ ಹಲ್ಲೆ ನಡೆಸಿದ್ದಾರೆ. ಜೊತೆಗೆ ಮನೆಯ ಬಳಿ ಕರೆದುಕೊಂಡು ಹೋಗಿ ಹಗ್ಗದಿಂದ ಕಟ್ಟಿ ಹಾಕಿ ಮನಬಂದಂತೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಇದರಿಂದ ಗಾಯಗೊಂಡ ಅಮರೇಶನನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು, ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇನ್ನೂ ಪ್ರಕರಣ ಸಂಬಂಧ ಜಗದೀಶ್ ಸಿಂಗ್ ಹಾಗೂ ರವೀಂದ್ರ ಸಿಂಗ್ ಎಂಬುವರನ್ನ ಬಂಧಿಸಿದ್ದು, ಸತೀಶ್ ಸಿಂಗ್​ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:08 pm, Sat, 21 October 23

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್