Tumakur News: ಅಯ್ಯೋ ವಿಧಿಯೇ! ಮೊಬೈಲ್ ಚಾರ್ಜರ್​ ಕೊಡಲಿಲ್ಲವೆಂದು ಯುವಕ ಆತ್ಮಹತ್ಯೆ ಮಾಡಿಕೊಳ್ಳುವುದಾ…!

ಮೊಬೈಲ್ ಚಾರ್ಜರ್ ಕೊಡಲಿಲ್ಲವೆಂದು ಯುವಕನೊಬ್ಬ ನೇಣಿಗೆ ಶರಣಾದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಸಿಂಗರೆಡ್ಡಿಹಳ್ಳಿಯಲ್ಲಿ ನಡೆದಿದೆ. ನಿಖಿಲ್ ಗೌಡ (18) ನೇಣಿಗೆ ಶರಣಾಗಿರುವ ಯುವಕ.

Tumakur News: ಅಯ್ಯೋ ವಿಧಿಯೇ! ಮೊಬೈಲ್ ಚಾರ್ಜರ್​ ಕೊಡಲಿಲ್ಲವೆಂದು ಯುವಕ ಆತ್ಮಹತ್ಯೆ ಮಾಡಿಕೊಳ್ಳುವುದಾ...!
ಮೃತ ವಿದ್ಯಾರ್ಥಿ
Follow us
ಮಹೇಶ್ ಇ, ಭೂಮನಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 01, 2023 | 10:49 AM

ತುಮಕೂರು, ಆ.1: ಮೊಬೈಲ್ ಚಾರ್ಜರ್ ಕೊಡಲಿಲ್ಲವೆಂದು ಯುವಕನೊಬ್ಬ ನೇಣಿಗೆ ಶರಣಾದ ಘಟನೆ ತುಮಕೂರು(Tumakuru)ಜಿಲ್ಲೆಯ ಪಾವಗಡ (Pavagada) ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಸಿಂಗರೆಡ್ಡಿಹಳ್ಳಿಯಲ್ಲಿ ನಡೆದಿದೆ. ನಿಖಿಲ್ ಗೌಡ (18) ನೇಣಿಗೆ ಶರಣಾಗಿರುವ ಯುವಕ. ಇತ ಪಾವಗಡ ಪಟ್ಟಣದ ಶಾಂತಿ ಎಸ್ಎಸ್​ಕೆ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ. ಭಾನುವಾರ ರಜೆ ಇದ್ದ ಕಾರಣ ಮನೆಯಲ್ಲಿಯೇ ಇದ್ದ ನಿಖಿಲ್. ಈ ವೇಳೆ ತಾಯಿಯೊಂದಿಗೆ ನನಗೆ ಅದು ಕೊಡಿಸಿಲ್ಲ, ಇದು ಕೊಡಿಸಿಲ್ಲವೆಂದು ಗಲಾಟೆ ಮಾಡುತ್ತಿದ್ದನಂತೆ.

ಗಲಾಟೆ ಬಳಿಕ ತಾಯಿಯ ಬಳಿ ನನಗೆ ಮೊಬೈಲ್ ಚಾರ್ಜರ್ ಕೊಡು ಎಂದಿದ್ದಾನೆ. ಆಗ ತಾಯಿ ನನ್ನ ಹತ್ತಿರ ಮೊಬೈಲ್ ಚಾರ್ಜರ್ ಇಲ್ಲವೆಂದು ಹೇಳಿ, ತಾಯಿ ಲಕ್ಷ್ಮಮ್ಮ ಅಲ್ಲೇ ಹತ್ತಿರದ ಮನೆಯೊಂದರಲ್ಲಿ ಹೂ ಕಟ್ಟಲು ಹೋಗಿದ್ದಾರೆ. ವಾಪಾಸ್ ಮನೆಗೆ ಬಂದು ಬಾಗಿಲು ಬಡಿದಾಗ ಒಳಗಿದ್ದ ನಿಖಿಲ್ ಗೌಡ ಬಾಗಿಲು ತೆಗೆದಿಲ್ಲ. ಅನುಮಾನಗೊಂಡು ಸ್ಥಳೀಯರ ಸಹಾಯದಿಂದ ಬಾಗಿಲು ಒಡೆದು ನೋಡಿದಾಗ ಘಟನೆ ಬಯಲಿಗೆ ಬಂದಿದೆ.

ಎಂಟು ವರ್ಷದ ಹಿಂದೆಯೇ ಸಾವನ್ನಪ್ಪಿದ್ದ ಮೃತ ನಿಖಿಲ್ ಗೌಡ ತಂದೆ

ಇನ್ನು ಕಳೆದ ಎಂಟು ವರ್ಷದ ಹಿಂದೆ ಮೃತ ನಿಖಿಲ್​ ಗೌಡನ ತಂದೆಯವರು ಸಾವನ್ನಪ್ಪಿದ್ದರು. ಸದ್ಯ ತಾಯಿ ವರಲಕ್ಷ್ಮಮ್ಮ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಾ, ತನ್ನ ಮಗನ ವಿದ್ಯಾಭ್ಯಾಸದ ಜೊತೆಗೆ ಕುಟುಂಬ ನಿರ್ವಹಿಸುತ್ತಿದ್ದರು. ಇನ್ನು ಇವರಿಗೆ ಮತ್ತೋರ್ವ ಪುತ್ರಿಯಿದ್ದು, ತುಮಕೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇದೀಗ ಸ್ಥಳಕ್ಕೆ ವೈ.ಎನ್.ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಶಿವಮೊಗ್ಗ: ಮದುವೆಯಾಗಿ ಎರಡು ವರ್ಷವಾದರೂ ಮಗುವಿಲ್ಲವೆಂಬ ನೋವು; ನವವಿವಾಹಿತೆ ನೇಣಿಗೆ ಶರಣು

ಬೈಕ್ ಅಡ್ಡಗಟ್ಟಿ 24 ವರ್ಷದ ಯುವಕನಿಗೆ ಚಾಕು ಇರಿದು ಪರಾರಿಯಾದ ದುಷ್ಕರ್ಮಿಗಳು

ಬೆಂಗಳೂರು ನಗರ: ಜಿಲ್ಲೆಯ ಆನೇಕಲ್​ ತಾಲೂಕಿನ ಮೆಣಸಿಗನಹಳ್ಳಿ ಸಮೀಪ ಯುವಕನೊರ್ವನಿಗೆ ಅಡ್ಡಗಟ್ಟಿ ಚಾಕು ಇರಿದ ಘಟನೆ ನಡೆದಿದೆ. ಹೇಮಂತ್(24) ಮೃತ ರ್ದುದೈವಿ. ಅತ್ತಿಬೆಲೆಯ ಹಾರ್ಡ್‌ವೇರ್ ಶಾಪ್​​ನಲ್ಲಿ ಕೆಲಸ ಮಾಡುತ್ತಿದ್ದ ಹೇಮಂತ್ ಬೈಕ್​ನಲ್ಲಿ ಹೋಗುವಾಗ ಈ ದುರ್ಘಟನೆ ನಡೆದಿದೆ. ಇನ್ನು ಚಾಕು ಇರಿತಕ್ಕೊಳಗಾದ ಯುವಕ ರಕ್ತದ ಮಡುವಿನಲ್ಲಿದ್ದ. ಕೂಡಲೇ ಆತನನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಹೇಮಂತ್​ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಆನೇಕಲ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಸ್ವಿಫ್ಟ್ ಕಾರಿನಲ್ಲಿ ಹಿಂಬಾಲಿಸಿ ಹತ್ಯೆಗೈದ ಹಂತಕರು

ಕಳೆದ ರಾತ್ರಿ 9 ಗಂಟೆಯ ಸುಮಾರಿಗೆ ಕನಮನಹಳ್ಳಿಯಿಂದ ಮೆಣಸಿಗನಹಳ್ಳಿ ಮಾರ್ಗವಾಗಿ ಬರುವಾಗ ದುಷ್ಕರ್ಮಿಗಳು ಸ್ವಿಫ್ಟ್​ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು ಅಟ್ಯಾಕ್ ಮಾಡಿದ್ದರು. ಆತನ ದೇಹದ ಹತ್ತಕ್ಕೂ ಹೆಚ್ಚು ಕಡೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಅಡಿಷನಲ್ ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ಯುವಕನ ಕುಟುಂಬಸ್ಥರು ಹಾಗೂ ಗ್ರಾಮಸ್ಥರ ಬಳಿ ಮಾಹಿತಿ ಕಲೆಹಾಕುತ್ತಿದ್ದು, ಸಿಸಿಟಿವಿ ಕ್ಯಾಮರಾಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:32 am, Tue, 1 August 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್