ಆನೇಕಲ್: ಪ್ರೀತಿಸಿದ ವಿಚ್ಚೇದಿತ ಯುವತಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ; ಮನನೊಂದ ಯುವಕ ಆತ್ಮಹತ್ಯೆ

ಈಕೆ ಯುವಕನೊಬ್ಬನನ್ನು ಮದುವೆಯಾಗಿ ವಿಚ್ಚೇದನ ಪಡೆದಿದ್ದಳು. ಬಳಿಕ ಅನ್ಬರಾಸನ್ ಎಂಬ ಯುವಕನನ್ನು ಪ್ರೀತಿಸಲಾರಂಭಿಸಿದಳು. ಗಂಡ ಹೆಂಡತಿ ಎಂದು ಹೇಳಿ ಬಾಡಿಗೆ ರೂಮ್ ಪಡೆದಿದ್ದರು. ಈ ನಡುವೆ ಆಕೆ ಮತ್ತೊಬ್ಬ ಯುವಕನೊಂದಿಗೆ ಅಕ್ರಮ ಸಂಬಂಧ ಹೊಂದಿರುವುದು ಪ್ರಿಯಕರನಿಗೆ ತಿಳಿದುಬಂದಿದೆ. ಇದರಿಂದ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆನೇಕಲ್: ಪ್ರೀತಿಸಿದ ವಿಚ್ಚೇದಿತ ಯುವತಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ; ಮನನೊಂದ ಯುವಕ ಆತ್ಮಹತ್ಯೆ
ಅನ್ಬರಾಸನ್ ಜೊತೆ ವಿದ್ಯಾ (ಎಡಚಿತ್ರ) ಮತ್ತು ಸಂತೋಷ್ ಜೊತೆ ವಿದ್ಯಾ (ಬಲ ಚಿತ್ರ)
Follow us
TV9 Web
| Updated By: Rakesh Nayak Manchi

Updated on: Feb 08, 2024 | 2:18 PM

ಆನೇಕಲ್, ಫೆ.8: ಪ್ರೀತಿಸಿದ ಹುಡುಗಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ ಇರುವುದನ್ನು ಕಣ್ಣಾರೆ ನೋಡಿದ ಯುವಕ ಮನನೊಂದು ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಮೃತನ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮಗನ ಅತ್ಮಹತ್ಯೆಗೆ ಯುವತಿಯೇ ಪ್ರಚೋದನೆ ನೀಡಿದ್ದಾಳೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

ದಿವ್ಯಾ ಎಂಬಾಕೆಗೆ ಬೇರೊಬ್ಬ ಯುವಕನೊಂದಿಗೆ ಮದುವೆಯಾಗಿತ್ತು. ಬಳಿಕ ಆಕೆ ವಿಚ್ಚೇದನ ಪಡೆದಿದ್ದಳು. ವಿಚ್ಚೇದನ ಪಡೆದ ಸ್ವಲ್ಪ ದಿನದಲ್ಲೇ ಅನ್ಬರಾಸನ್ ಎಂಬ ಯುವಕನನ್ನು ಪ್ರೀತಿಸಲು ಆರಂಭಿಸಿದ್ದಳು. ಗಂಡ ಹೆಂಡತಿ ಎಂದು ಹೇಳಿ ಚಿಕ್ಕನಾಗಮಂಗಲದ ಬಾಡಿಗೆ ಮನೆ ಪಡೆದು ಕಳೆದ ಆರು ತಿಂಗಳಿನಿಂದ ಲೀವ್​ ಇನ್ ರಿಲೇಷನ್​ನಲ್ಲಿದ್ದರು.

ಇದನ್ನೂ ಓದಿ: ಹಸಿವು ಮತ್ತು ತಾಯಿ ಕಷ್ಟ ನೋಡಲಾಗದೇ ಮಗ ಆತ್ಮಹತ್ಯೆ: ಕೇಸ್​​​​ಗೆ ಬಿಗ್ ಟ್ವಿಸ್ಟ್ ಕೊಟ್ಟ ನಿಜವಾದ ತಾಯಿ

ವಿದ್ಯಾ ಐಟಿ ಕಂಪನಿ ಉದ್ಯೋಗಿಯಾಗಿದ್ದರೆ, ಅನ್ಬರಾಸನ್ ಫ್ಲಿಪ್ ಕಾರ್ಟ್​ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ. ಆದರೆ, ಅನ್ಬರಾಸನ್ ಜೊತೆ ಪ್ರೀತಿಯಲ್ಲಿ ಇರುವಾಗಲೇ ವಿದ್ಯಾಗೆ ಸಂತೋಷ್ ಎಂಬ ಯುವಕನ ಜೊತೆ ಲವ್ವಿಡವ್ವಿ ಶುರು ಮಾಡಿದ್ದಾಳೆ. ಈ ವಿಚಾರ ಅನ್ವರಸನ್​ಗೆ ತಿಳಿದಿದೆ. ಅಲ್ಲದೆ, ಮನೆಯಲ್ಲಿ ಸಂತೋಷ್ ಹಾಗೂ ವಿದ್ಯಾ ಜೊತೆಯಲ್ಲಿದ್ದಾಗ ಅನ್ಬರಾಸನ್ ಕಣ್ಣಾರೆ ಕಂಡಿದ್ದನು.

ಈ ವಿಚಾರ ತಿಳಿದು ವಿದ್ಯಾಗೆ ಬುದ್ಧಿ ಹೇಳಿದರೂ ಅಕೆ ಕೆಳಿರಲಿಲ್ಲ. ಇದರಿಂದ ಮನನೊಂದು ಅನ್ಬರಾಸನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಪ್ರಕರಣ ಸಂಬಂಧ ಪೋಷಕರು ಮೊದಲು ಯುಡಿಆರ್ ಪ್ರಕರಣ ದಾಖಲಿಸಿದ್ದರು. ನಂತರ ಸ್ನೇಹಿತನ ಜೊತೆ ಅನ್ಬರಸನ್ ಹಾಗೂ ವಿದ್ಯಾ ಮಾತನಾಡಿರುವ ಕಾಲ್ ರೇಕಾರ್ಡ್ ಲಭ್ಯವಾಗಿದೆ. ಅದರ ಅಧಾರದ ಮೇಲೆ ಅತ್ಮಹತ್ಯೆಗೆ ಪ್ರಚೋದನೆ ಎಂದು ಪೋಷಕರು ಪ್ರಕರಣ ದಾಖಲಿಸಿದ್ದಾರೆ. ಅದರಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಸಂತೋಷ್ ಹಾಗೂ ವಿದ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್