ಬೆಂಗಳೂರು: ನಗರದಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ (Rape) ನಡೆದಿದೆ. ನಿನ್ನೆ ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ದುಷ್ಕೃತ್ಯ ನಡೆದಿದೆ. ಬಾಲಕಿ ತಾಯಿ (Mother) ಮಗಳನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಪಕ್ಕದ ಮನೆಯ ಯುವಕ ದುಷ್ಕೃತ್ಯ ಎಸಗಿದ್ದಾನೆ. ಸದ್ಯ ಆರೋಪಿಯನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಬಾಲಕಿ ಮತ್ತು ಆರೋಪಿಯ ವೈದ್ಯಕೀಯ ಪರೀಕ್ಷೆಯನ್ನ (Medical Test) ಪೊಲೀಸರು ನಡೆಸಲಿದ್ದಾರೆ.
ಬಾಲಕಿ ತಾಯಿ ಮಗಳನ್ನು ಬಿಟ್ಟು ಗಾಮೆಂಟ್ ಒಂದರಲ್ಲಿ ಕೆಲಸ ಮಾಡಲು ಹೋಗಿದ್ದರು. ಆಗ ಬಂಧಿತ ಆರೋಪಿ ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಕೃತ್ಯ ಎಸಗಿದ್ದಾನೆ. ಮನೆಗೆ ಬಂದ ತಾಯಿಗೆ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಬಾಲಕಿ ತಾಯಿ ಮನೆಗೆ ಬರುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದ. ಆದರೆ ದೂರಿನನ್ವಯ ಆರೋಪಿ ಯುವಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಿನ್ನೆ ರಾತ್ರಿ ತಡವಾಗಿದ್ದ ಕಾರಣ ವೈದ್ಯಕೀಯ ಪರೀಕ್ಷೆ ನಡೆಸಲು ಆಗಿರಲಿಲ್ಲ. ಇಂದು ಪರೀಕ್ಷೆ ನಡೆಸಲು ಪೊಲೀಸರು ತಯಾರಿ ಮಾಡಿಕೊಳ್ಳುತ್ತಿದ್ದಾರೆ.
ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ
ಅಂಬೇಡ್ಕರ್ ಭವನ ವಿಚಾರಕ್ಕೆ ಗಲಾಟೆ ನಡೆದು, ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಹೊರಟೂರು ಬಳಿ ಸಂಭವಿಸಿದೆ. ನಂದಣ್ಣಗೌಡ ಎಂಬುವವರು ಅಂಬೇಡ್ಕರ್ ಭವನವನ್ನು ಕಬ್ಜಾ ಮಾಡಿಕೊಂಡಿದ್ದರು. ಭವನ ಸಮುದಾಯಕ್ಕೆ ಬಿಟ್ಟು ಕೊಡುವಂತೆ ಹೇಳಿದ್ದಕ್ಕೆ ಬಸಪ್ಪ ಮೇಲೆ ಹಲ್ಲೆ ಮಾಡಿದ್ದಾರೆ. ಬಸಪ್ಪ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಲ್ಲದೇ, ಮನೆಯಲ್ಲಿದ್ದ ವಸ್ತುಗಳಿಗೆ ಬೆಂಕಿ ಹಾಕಿದ್ದಾರೆ ಅಂತ ನಂದಣ್ಣಗೌಡ, ಬೆಂಬಲಿಗರ ವಿರುದ್ಧ ಆರೋಪ ಕೇಳಿಬಂದಿದೆ. ಗಾಯಾಳು ಬಸಪ್ಪಗೆ ಕಲಬುರಗಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ವಡಗೇರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ
Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 42,470 ಜನರಿಗೆ ಕೊರೊನಾ ದೃಢ; 26 ಮಂದಿ ಸಾವು
Published On - 8:28 am, Sun, 23 January 22