ಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕೆ ವಿಘ್ನೇಶ್ ಎಂಬ ಯುವಕನಿಗೆ ಅನ್ಯಕೋಮಿನ ಗುಂಪು ಚಾಕು (Kinef) ಇರಿದು ಪರಾರಿಯಾಗಿರುವ ಘಟನೆ ಜಿಲ್ಲೆಯ ಕಡೂರಿನಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ವಿಘ್ನೇಶ್ನನ್ನು ಕಡೂರು (Kadur) ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ವಿಘ್ನೇಶ್ ಕಡೂರು ಪಟ್ಟಣದ ಸಿಪಿಸಿ ಕಾಲೋನಿ ನಿವಾಸಿ ಎಂದು ತಿಳಿದುಬಂದಿದೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಗಲಕೋಟೆ: ಕೌಟುಂಬಿಕ ಕಲಹ ಹಿನ್ನೆಲೆ ಕೊಡಲಿಯಿಂದ ಕುತ್ತಿಗೆಗೆ ಹೊಡೆದು ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಬೀಳಗಿ ತಾಲೂಕಿನ ಬಿಸ್ನಾಳ ಗ್ರಾಮದಲ್ಲಿ ಘಟನೆ. ರೇಖಾ ಬೀಳಗಿ (24)ಮೃತ ಮಹಿಳೆ. ಪರಸಪ್ಪ ಬೀಳಗಿ ಕೊಲೆಗೈದ ಆರೋಪಿ ಪತಿ. ದಂಪತಿ ಎರಡು ವರ್ಷದ ಹಿಂದೆ ಮದುವೆಯಾಗಿದ್ದು, ಒಂದು ವರ್ಷದ ಮಗು ಇದೆ. ಸ್ಥಳಕ್ಕೆ ಬೀಳಗಿ ಪೊಲೀಸರು ಭೇಟಿ ನೀಡಿದ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಜೀವನ ಭೀಮಾನಗರ ಮಹಿಳಾ ಟೆಕ್ಕಿ ಕೊಲೆ ಪ್ರಕರಣ: 3 ರಾಜ್ಯಗಳನ್ನ ಸುತ್ತಿದ್ದ ಪ್ರಿಯಕರ ಕೊನೆಗೆ ಬೆಂಗಳೂರಿನಲ್ಲಿ ಲಾಕ್
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದ ಕೆರೆ ಬಳಿ ಯುವಕನ ಶವ ಪತ್ತೆಯಾಗಿದೆ. ಕೊಲೆ ಮಾಡಿ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಕೊಳಗಟ್ಟ ಗ್ರಾಮದ ನಿವಾಸಿ ಅರುಣ್ ಕುಮಾರ್ 21 ಮೃತ ದುರ್ದೈವಿ.
ಖಾಸಗಿ ಫೈನಾನ್ಸ್ ಸಂಸ್ಥೆಯಲ್ಲಿ ಬಿಲ್ ಕಲೆಕ್ಟರ್ ಆಗಿದ್ದ ಅರುಣ್ ಕುಮಾರ್ ನಿನ್ನೆ (ಜು.04) ಮಧ್ಯಾಹ್ನ
ಮ್ಯಾನೇಜರ್ ಕರೆಯುತ್ತಿದ್ದಾರೆ ಎಂದು ಹೇಳಿ ಹೊರಗೆ ಹೋಗಿದ್ದರು. ಸಂಜೆಯಾದರೂ ಮನೆಗೆ ಹಿಂದಿರುಗಿಲ್ಲ. ಕುಟುಂಬದವರು ಹಾಗೂ ಸ್ನೇಹಿತರು ಹುಡುಕಾಡಿದಾಗ ಕೆರೆ ಬಳಿ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಬಿಳಿಕೆರೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ