ಚಾಮರಾಜನಗರ: ಯುವತಿಗೆ ಚುಡಾಯಿಸಿದಕ್ಕೆ ಯುವಕನಿಗೆ ಆರು ಬಾರಿ ಚಾಕು ಇರಿತ

ಯುವತಿಗೆ ಚುಡಾಯಿಸಿದ ಎನ್ನುವ ಕಾರಣಕ್ಕೆ ದುಷ್ಕರ್ಮಿಗಳು ಯುವಕನಿಗೆ ಆರು ಬಾರಿ ಚಾಕು ಇರಿದ ಘಟನೆ ಚಾಮರಾಜನಗರದ ಸೇಂಟ್ ಜೋಸೆಫ್ ಕಾನ್ವೆಂಟ್ ರಸ್ತೆಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಯುವಕ ಸಂಜಯ್‌ಕುಮಾರ್ (22)ನನ್ನು ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚಾಮರಾಜನಗರ: ಯುವತಿಗೆ ಚುಡಾಯಿಸಿದಕ್ಕೆ ಯುವಕನಿಗೆ ಆರು ಬಾರಿ ಚಾಕು ಇರಿತ
ಆರೋಪಿಗಳು
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಕಿರಣ್ ಹನುಮಂತ್​ ಮಾದಾರ್

Updated on:Dec 20, 2023 | 10:00 PM

ಚಾಮರಾಜನಗರ, ಡಿ.20: ಯುವತಿಗೆ ಚುಡಾಯಿಸಿದ ಎನ್ನುವ ಕಾರಣಕ್ಕೆ ದುಷ್ಕರ್ಮಿಗಳು ಯುವಕನಿಗೆ ಆರು ಬಾರಿ ಚಾಕು ಇರಿದ ಘಟನೆ ಚಾಮರಾಜನಗರ(Chamarajanagar) ದ ಸೇಂಟ್ ಜೋಸೆಫ್ ಕಾನ್ವೆಂಟ್ ರಸ್ತೆಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಯುವಕ ಸಂಜಯ್‌ಕುಮಾರ್ (22)ನನ್ನು ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಲ್ಲೆ ನಡೆಸಿ ಚಾಕುವಿನಿಂದ ಇರಿಯುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಯುವತಿಯನ್ನು ರೇಗಿಸುತ್ತಿದ್ದಾನೆಂದು ತಿಳಿದ ಆಕೆಯ ಸ್ನೇಹಿತರಾದ ಅರುಣ್, ಶ್ಯಾಮ್ ಈ ಕೃತ್ಯ ಎಸಗಿದ್ದಾರೆ.

ಇಬ್ಬರು ಆರೋಪಿಗಳ ಬಂಧನ ಮತ್ತೊಬ್ಬ ಪರಾರಿ

ಇಬ್ಬರು ಆರೋಪಿಗಳಾದ ಅರುಣ್, ಶ್ಯಾಮ್ ಅವರನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಪರಾರಿಯಾಗಿದ್ದಾನೆ. ರಸ್ತೆಯಲ್ಲಿ ವಾಕ್ ಮಾಡುತ್ತಿದ್ದ ಸಂಜಯ್‌ ಕುಮಾರ್‌ನನ್ನು ನೋಡಿದ ಕೂಡಲೇ ಯುವತಿ ಕರೆ ಮಾಡಿ ತನ್ನ ಮೂವರು ಸ್ನೇಹಿತರನ್ನು ಕರೆಯಿಸಿದ್ದಾಳೆ. ಬೈಕ್‌ನಲ್ಲಿ ಬಂದ ಮೂವರು ಏಕಾಎಕಿ ಸಂಜಯ್‌ ಕುಮಾರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಕುರಿತು ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮತ್ತೋರ್ವನಿಗಾಗಿ ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ:ಪೃಥ್ವಿಸಿಂಗ್ ಚಾಕು ಇರಿತ ಪ್ರಕರಣ; ಪೊಲೀಸರು ತನಿಖೆ ಮಾಡುತ್ತಿದ್ದಾರೆ, ನಾನು ಬ್ಯೂಸಿಯಾಗಿರುವೆ: ಲಕ್ಷ್ಮಿ ಹೆಬ್ಬಾಳ್ಕರ್, ಸಚಿವೆ

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಹೊತ್ತಿ ಉರಿದ ಸ್ವಿಪ್ಟ್ ಕಾರು

ಬೆಂಗಳೂರು: ಚಲಿಸುತ್ತಿದ್ದ ಸ್ವಿಪ್ಟ್​ ಕಾರಿನಲ್ಲಿ ಆಕಸ್ಮಿಕ ಬೆಂಕಿ ತಗುಲಿ ನೋಡ ನೋಡುತ್ತಿದ್ದಂತೆ  ಹೊತ್ತಿ ಉರಿದಿದೆ. ದೊಡ್ಡಬಳ್ಳಾಪುರ – ಯಲಹಂಕ ರಸ್ತೆಯ ಮಾರಸಂದ್ರ ಬಳಿ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೌರಿಬಿದನೂರು ಕಡೆಯಿಂದ ಬೆಂಗಳೂರಿನ ಕಡೆ ಬರುತ್ತಿದ್ದ ಕಾರು ಇದಾಗಿದ್ದು, ಇದ್ದಕ್ಕಿದಂತೆ ಕಾಣಿಸಿಕೊಂಡ ಬೆಂಕಿಯಿಂದ ಹೊತ್ತಿ ಉರಿದಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ‌ಗಳು ಬೆಂಕಿ ನಂದಿಸಿದ್ದಾರೆ. ಇನ್ನು ಈ ಘಟನೆ ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:57 pm, Wed, 20 December 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ