ಕೋಲಾರ: ಜಿಲ್ಲೆಯ ಶ್ರೀನಿವಾಸಪುರ(Srinivaspur) ತಾಲೂಕಿನ ನೀಲಟೂರು ಗ್ರಾಮದಲ್ಲಿ ಜಮೀನು ವಿವಾದ ಹಿನ್ನೆಲೆ ಚಾಕುವಿನಿಂದ ಇರಿದು ಯುವಕನನ್ನ ಹತ್ಯೆ ಮಾಡಿದ ಧಾರುಣ ಘಟನೆ ನಡೆದಿದೆ. ಪ್ರಸಾದ್ ರೆಡ್ಡಿ(22) ಮೃತ ಯುವಕ. ಪಕ್ಕದ ಜಮೀನಿನ ಕಿರಣ್ ರೆಡ್ಡಿ ಎಂಬಾತನು ಕೊಲೆ ಮಾಡಿದ ಆರೋಪ ಕೇಳಿಬಂದಿದೆ. ಹಲವು ವರ್ಷಗಳಿಂದ 2 ಕುಟುಂಬಗಳ ಮಧ್ಯೆ ಜಮೀನು ವಿವಾದ ನಡೆಯುತ್ತಲಿದ್ದು, ಇದೇ ವಿಚಾರಕ್ಕೆ ಎರಡು ಕುಟುಂಬಗಳು ಕೋರ್ಟ್ ಮೆಟ್ಟಿಲೇರಿದ್ದವು. ಇಂದು(ಜೂ.24) ಮುಂಜಾನೆ ಮಾವಿನಕಾಯಿ ವಿಚಾರವಾಗಿ ಗಲಾಟೆ ನಡೆದಿದ್ದು, ಈ ವೇಳೆ ಕಿರಣ್ಪ್ರಸಾದ್ನಿಗೆ ಜಮೀನಿನ ಬಳಿ ಚಾಕುವಿನಿಂದ ಇರಿದಿದ್ದಾನೆ. ಬಳಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಪ್ರಸಾದ್ ರೆಡ್ಡಿ ಕೊನೆಯುಸಿರೆಳದಿದ್ದಾನೆ. ಈ ಕುರಿತು ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದಾವಣಗೆರೆ: ಪತಿಯಿಂದ ನಿರಂತರ ಕಿರುಕುಳಕ್ಕೆ ಬೇಸತ್ತು ಪತ್ನಿ ಶಾಂತಮ್ಮ(30) ಎಂಬುವವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಗಳೂರು ತಾಲೂಕಿನ ಗೌರಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪತಿ ಸೋಮಶೇಖರ್ ನಿತ್ಯ ಮದ್ಯಸೇವಿಸಿ ಬಂದು ಪತ್ನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಿಂಸಿಸುತ್ತಿದ್ದ. ಇದರಿಂದ ಪತ್ನಿ ಮನನೊಂದು ನೇಣಿಗೆ ಶರಣಾಗಿದ್ದು, ತೀವ್ರ ಅಸ್ವಸ್ಥಗೊಂಡ ಮಹಿಳೆಯನ್ನ ಆಸ್ಪತ್ರೆಗೆ ರವಾನೆ ಮಾಡುವ ಮಾರ್ಗ ಮಧ್ಯೆದಲ್ಲಿಯೇ ಶಾಂತಮ್ಮ ಸಾವನ್ನಪ್ಪಿದ್ದಾಳೆ. ಈ ಕುರಿತು ಆರೋಪಿ ಸೋಮಶೇಖರ್ ವಿರುದ್ಧ ಜಗಳೂರು ಠಾಣೆಗೆ ಮೃತ ಶಾಂತಮ್ಮ ತಂದೆ ರಾಮಪ್ಪ ಎಂಬುವವರು ದೂರು ನೀಡಿದ್ದಾರೆ.
ಇದನ್ನೂ ಓದಿ:ಅನ್ಯಕೋಮಿನ ಯುವತಿ ಪ್ರೀತಿಸಿದ್ದ ಯುವಕನ ಹತ್ಯೆ ಪ್ರಕರಣ; ರೈಲ್ವೆ ಪೊಲೀಸರಿಂದ ಬೆಳಗಾವಿ ಪೊಲೀಸರಿಗೆ ಕೇಸ್ ವರ್ಗಾವಣೆ
ಮೈಸೂರು: ಜಿಲ್ಲೆಯ ಸರ್ದಾರ್ ವಲ್ಲಭಾಯಿ ಪಟೇಲ್ ನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಟೈರು ಕಳ್ಳತನ ಮಾಡಿದ ಘಟನೆ ನಡೆದಿದೆ. ಖದೀಮರು ಸ್ವಾಮಿ ಎಂಬುವವರಿಗೆ ಸೇರಿದ ಕಿಯಾ ಕಾರಿನ ಟೈರ್ ಕಳ್ಳತನ ಮಾಡಿ, ಕೆಳಗೆ ಕಲ್ಲು ಇಟ್ಟು ಪರಾರಿಯಾಗಿದ್ದಾರೆ. ಈ ಕುರಿತು ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ