AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಪೋಷಕರು ಬುದ್ಧಿವಾದ ಹೇಳಿದಕ್ಕೆ ಆತ್ಮಹತ್ಯೆ ಮಾಡಿಕೊಂಡ ಪ್ಯಾರಾಮೇಡಿಕಲ್​ ಯುವತಿ

ಹಬ್ಬುವಾಡದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಯುವತಿ ಕುಟುಂಬ, ಪ್ಯಾರಾಮೇಡಿಕ್ ಕೋರ್ಸ್ ಮುಗಿಸಿಕೊಂಡಿದ್ದಳು. ಕಾರವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. 

Crime News: ಪೋಷಕರು ಬುದ್ಧಿವಾದ ಹೇಳಿದಕ್ಕೆ ಆತ್ಮಹತ್ಯೆ ಮಾಡಿಕೊಂಡ ಪ್ಯಾರಾಮೇಡಿಕಲ್​ ಯುವತಿ
ಮೇಘ (20) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ.
TV9 Web
| Edited By: |

Updated on:May 03, 2022 | 2:43 PM

Share

ಕಾರವಾರ: ಪೋಷಕರು ಬುದ್ದಿವಾದ ಹೇಳಿದಕ್ಕೆ ಪ್ಯಾರಾಮೇಡಿಕಲ್​ (Paramedical) ಯುವತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ಹಬ್ಬುವಾಡದಲ್ಲಿ ನಡೆದಿದೆ. ಮೇಘ (20) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಮೂಲತಃ ಸಿದ್ದಾಪುರ ತಾಲೂಕಿನವಳಾಗಿದ್ದು, ಹಬ್ಬುವಾಡದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಯುವತಿ ಕುಟುಂಬ, ಪ್ಯಾರಾಮೇಡಿಕ್ ಕೋರ್ಸ್ ಮುಗಿಸಿಕೊಂಡಿದ್ದಳು. ಕಾರವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಬಾರ್​ನಲ್ಲಿ ವ್ಯಕ್ತಿ ಮೇಲೆ ಹಲ್ಲೆ

ಹಳೇ ದ್ವೇಷದ ಹಿನ್ನೆಲೆಯಲ್ಲಿ ಬಾರ್​ನಲ್ಲಿ ವ್ಯಕ್ತಿ ಮೇಲೆ ಹಲ್ಲೆ ನಡೆದಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕು ಬನ್ನೂರಿನಲ್ಲಿ ನಡೆದಿದೆ. ದಯಾನಂದ್ ಹಲ್ಲೆಗೆ ಒಳಗಾದವರು. ಗುರು, ಚಂದ್ರು ಸೇರಿದಂತೆ ಹಲವರು ಲಾಂಗ್, ಬಿಯರ್ ಬಾಟಲಿಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಹಲ್ಲೆಯ ದೃಶ್ಯವು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಾಯಗೊಂಡಿರುವ ದಯಾನಂದ್ ಅವರಿಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಂಜಾ ಮಾರಾಟ: ಆರೋಪಿಗಳ ಬಂಧನ

ಮೈಸೂರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಉದಯಗಿರಿ ಠಾಣೆ ಪೊಲೀಸರು ಬಂಧಿಸಿದರು. ಅಜ್ಮಲ್ ಖಾನ್, ಸೈಯದ್ ಆಸಿಫ್, ವಾಹಿದ್ ಪಾಷಾ ಬಂಧಿತರು. ಬಂಧಿತರಿಂದ 1 ಕೆಜಿ 750 ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಅನುಮಾನಸ್ಪದ ಸಾವು:

ಮೈಸೂರು: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಓರ್ವ ಅನುಮಾನಸ್ಪದ ಸಾವನ್ನಪ್ಪಿರುವಂತಹ ಘಟನೆ ನಂಜನಗೂಡು ತಾಲ್ಲೂಕು ಹಿಮ್ಮಾವು ಗ್ರಾಮದಲ್ಲಿ ನಡೆದಿದೆ. ಬೇಬಿ (28) ಮೃತ ದುರ್ದೈವಿ. ಬೇಬಿ ಮೂಲತಃ ನಂಜನಗೂಡು ಲಲಿತಾಪುರ ಗ್ರಾಮದವರಾಗಿದ್ದು, 8 ವರ್ಷದ ಹಿಂದೆ ಹಿಮ್ಮಾವು ಗ್ರಾಮದ ಉಮೇಶ್‌ ಜೊತೆ ಮದುವೆಯಾಗಿದ್ದರು. ಹಣಕ್ಕಾಗಿ ಪೀಡಿಸುತ್ತಿದ್ದ ಉಮೇಶ್ ಜಗಳ ಮಾಡಿ ಕೊಲೆ ಮಾಡಿರುವುದಾಗಿ ಮೃತ ಬೇಬಿ ಪೋಷಕರು ಆರೋಪಿಸಿದ್ದಾರೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳೆಯರ ಭಯ ಮುಕ್ತ ಕರ್ನಾಟಕ ಹೆಸರಿನಲ್ಲಿ ಬೈಕ್ ರ್ಯಾಲಿ: ರಾಯಚೂರು: ಯುವತಿಯರು ಮಹಿಳೆಯರ ಭಯ ಮುಕ್ತ ಕರ್ನಾಟಕ ಹೆಸರಿನಲ್ಲಿ ರಾಜ್ಯಾದ್ಯಂತ ಬೈಕ್ ರ್ಯಾಲಿ ಮಾಡುತ್ತಿದ್ದಾರೆ. ಸದ್ಯ ಬೈಕ್ ರ್ಯಾಲಿ ರಾಯಚೂರು ತಲುಪಿದೆ. ಆಸಿಡ್ ದಾಳಿಗೆ ಒಳಗಾಗಿರುವವರಿಗೆ ಸ್ಕಿನ್ ಡೊನೇಶನ್ ಇತರೆ ಮಹಿಳಾ ಸಮಸ್ಯೆಗಳ ಕುರಿತು ಸಂದೇಶ ಸಾರುತ್ತಿದ್ದಾರೆ. ಇದೇ ವೇಳೆ ಬೆಂಗಳೂರಿನಲ್ಲಿ ಆಸಿಡ್ ದಾಳಿ ಕೇಸ್‌ ವಿರುದ್ಧ ಕಿಡಿಕಾರಿದ್ದಾರೆ. ಟಿವಿ9ಗೆ ಹೇಳಿಕೆ ನೀಡಿದ ಕೀರ್ತಿನಿ, ಮುಂಬೈನಲ್ಲಿ ಆಸಿಡ್ ಕೇಸ್ ನೋಡುತ್ತಿದ್ದೆವು. ಈಗ ಕರ್ನಾಟಕದಲ್ಲಿ ಮತ್ತೆ ಆಗುತ್ತಿವೆ. ಆರೋಪಿಯನ್ನು ಕರೆತಂದು ನಡು ರಸ್ತೆಯಲ್ಲಿ ನಿಲ್ಲಿಸಬೇಕು. ಅವನಿಗೆ ಸೀಮೆ ಎಣ್ಣೆ ಸುರಿದು, ಬೊಬ್ಬೆಗಳು ಬರೋ ಹಾಗೆ ಮಾಡಬೇಕು. ಅವನನ್ನು ಸಾಯಿಸೋದು ಬೇಡ, ಆತನನ್ನು ಬದುಕಿಸಿ. ಆದರೆ ಆರೋಪಿಗೆ ಆ ನರಳಾಟ ಏನು ಅನ್ನೋದು ಗೊತ್ತಾಗಬೇಕು ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ, ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:41 pm, Tue, 3 May 22

Follow Us
TV9 Web
TV9 Web

TV9 Kannada

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ