ನೀಟ್ ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವತಿ

| Updated By: ಅಕ್ಷಯ್​ ಪಲ್ಲಮಜಲು​​

Updated on: Sep 02, 2022 | 11:57 AM

ನೀಟ್ ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಲ್ಲಿ ತಮಿಳುನಾಡಿನಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡದ್ದಾಳೆ. ಎನ್‌ಸಿಆರ್‌ಬಿ ಅಂಕಿಅಂಶಗಳ ಪ್ರಕಾರ ಕಳೆದ ವರ್ಷ ದೇಶಾದ್ಯಂತ ದಾಖಲಾದ ಒಟ್ಟು ಆತ್ಮಹತ್ಯೆಗಳ ಸಂಖ್ಯೆಗೆ ತಮಿಳುನಾಡು ಶೇಕಡಾ 11.5 ರಷ್ಟು ಹೆಚ್ಚು ಆತ್ಮಹತ್ಯೆ ಪ್ರಕರಣಗಳು ದಾಖಲಾಗಿದೆ

ನೀಟ್ ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವತಿ
ಸಾಂದರ್ಭಿಕ ಚಿತ್ರ
Follow us on

ತಮಿಳುನಾಡು: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯಲ್ಲಿ (ನೀಟ್) ಫೇಲ್ ಆಗುವ ಭೀತಿಯಿಂದ ತಮಿಳುನಾಡಿನ ತೆಂಕಶಿಯ ವೈದ್ಯಕೀಯ ಆಕಾಂಕ್ಷಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿದ ಯುವತಿಯನ್ನು ರಾಜಲಕ್ಷ್ಮಿ ಎಂದು ಗುರುತಿಸಲಾಗಿದೆ.

ನೀಟ್ ಪರೀಕ್ಷೆಯ ಫಲಿತಾಂಶದ ಭಯದಿಂದ ಯುವತಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದೀಗ ಆಕೆಯ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತೆಂಕಶಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಎನ್‌ಸಿಆರ್‌ಬಿ ಅಂಕಿಅಂಶಗಳ ಪ್ರಕಾರ ಕಳೆದ ವರ್ಷ ದೇಶಾದ್ಯಂತ ದಾಖಲಾದ ಒಟ್ಟು ಆತ್ಮಹತ್ಯೆಗಳ ಸಂಖ್ಯೆಗೆ ತಮಿಳುನಾಡು ಶೇಕಡಾ 11.5 ರಷ್ಟು ಆತ್ಮಹತ್ಯೆ ದರವನ್ನು ಹೊಂದಿದೆ ಎಂದು ಹೇಳಲಾಗಿದೆ. ಇದೀಗ ಈ ಬಗ್ಗೆ ರಾಜ್ಯ ಸರ್ಕಾರವು ಅನೇಕ ಕ್ರಮಗಳನ್ನು ತೆಗೆದುಕೊಳ್ಳಲು ಪ್ರಯತ್ನ ಮಾಡುತ್ತಿದೆ. ಈ ಬಗ್ಗೆ ಸಮೀಕ್ಷೆಯನ್ನು ನಡೆಸಲಾಗುತ್ತಿದೆ.

ನಿಟ್ ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ಆತ್ಮ ಮಾಡಿಕೊಂಡ ಯುವತಿಗೆ ಬಗ್ಗೆ ಪ್ರಾಥಮಿಕ ತನಿಖೆಯನ್ನು ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ತಮಿಳುನಾಡಿನಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿದೆ ಎಂದು ಸರ್ಕಾರದ ಅಧಿಕೃತ ವರದಿಗಳು ಹೇಳಿದೆ. ಇದಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರವು ಮುಂದಾಗಿದೆ ಎಂದು ಹೇಳಿದ್ದಾರೆ.