Crime News: ಕಾಡಿನಲ್ಲಿ ಯುವತಿಯ ಮೇಲೆ ಅತ್ಯಾಚಾರ, ಸ್ನೇಹಿತೆಯ ಸಹಾಯದಿಂದ ಬದುಕಿಳಿದ ಯುವತಿ

ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯ ಕಾಡಿನಲ್ಲಿ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 23 ವರ್ಷದ ಯುವಕನನ್ನು ಬಂಧಿಸಲಾಗಿದೆ.

Crime News: ಕಾಡಿನಲ್ಲಿ ಯುವತಿಯ ಮೇಲೆ ಅತ್ಯಾಚಾರ, ಸ್ನೇಹಿತೆಯ ಸಹಾಯದಿಂದ ಬದುಕಿಳಿದ ಯುವತಿ
ಸಾಂದರ್ಭಿಕ ಚಿತ್ರ
Edited By:

Updated on: Nov 18, 2022 | 3:01 PM

ಕಂಕೇರ್: ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯ ಕಾಡಿನಲ್ಲಿ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 23 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಬುಧವಾರ ಕಂಕೇರ್ ಪೊಲೀಸ್ ಠಾಣೆ ವ್ಯಾಪ್ತಿಯ ವ್ಯಾಸ್ಕೊಂಗೇರಾ ಅರಣ್ಯದಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಕಂಕೇರ್ ಪೊಲೀಸ್ ಠಾಣೆಯ ಠಾಣಾಧಿಕಾರಿ (ಎಸ್‌ಎಚ್‌ಒ) ಶರದ್ ದುಬೆ ತಿಳಿಸಿದ್ದಾರೆ.

ಸಂತ್ರಸ್ತೆ ಕಾಲೇಜು ವಿದ್ಯಾರ್ಥಿನಿಯಾಗಿದ್ದು, ಆಕೆ ಆರೋಪಿಯನ್ನು ಪತ್ತೆ ಮಾಡಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ಆರೋಪಿಯು ಸಂತ್ರಸ್ತೆಯನ್ನು ತನ್ನ ಕಾರಿನಲ್ಲಿ ಹೊರಹೋಗುವ ಎಂಬ ನೆಪದಲ್ಲಿ ಕಾಡಿಗೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೂರಿನ ಪ್ರಕಾರ, ಯುವತಿಯು ಮೇಲೆ ಆತ ಅತ್ಯಾಚಾರ ಮಾಡಲು ಪ್ರಯತ್ನಿಸಿದಾಗ ಇದನ್ನು ವಿರೋಧಿಸಿ ತನ್ನ ಸಹಪಾಠಿಗೆ ಫೋನ್ ಮಾಡಿದ್ದಾಳೆ. ಆದರೆ ಆತ ಆಕೆಯ ಫೋನ್ ಕಸಿದುಕೊಂಡು ಕಾರಿನ ಹಿಂದಿನ ಸೀಟಿನಲ್ಲಿ ಎಸೆದಿದ್ದಾನೆ ಎಂದು ಅವರು ಹೇಳಿದರು.

ಇದನ್ನು ಓದಿ:  17 ವರ್ಷದ ಬಾಲಕಿ ಮೇಲೆ ಆಕೆಯ ಅಪ್ಪ, ಚಿಕ್ಕಪ್ಪನಿಂದಲೇ ಅತ್ಯಾಚಾರ; ಅಜ್ಜನಿಂದಲೂ ಕಿರುಕುಳ

ಕರೆ ಸಂಪರ್ಕ ಕಡಿತಗೊಳ್ಳದ ಕಾರಣ, ಸಂತ್ರಸ್ತೆಯ ಸಹಪಾಠಿ ಫೋನ್‌ನಲ್ಲಿ ಆಕೆಯ ಕಿರುಚಾಟವನ್ನು ಕೇಳಿದ್ದು, ತಕ್ಷಣ ಪೊಲೀಸರನ್ನು ಸಂಪರ್ಕಿಸಿದ್ದಾರೆ. ಫೋನ್ ಇರುವ ಸ್ಥಳವನ್ನು ಪತ್ತೆಹಚ್ಚಿ ಆಕೆಯನ್ನು ರಕ್ಷಿಸಲಾಗಿದೆ ಎಂದು ಅವರು ಹೇಳಿದರು. ಆರೋಪಿಯನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ), 376 (2) (ಎನ್) (ಒಂದೇ ಮಹಿಳೆಯ ಮೇಲೆ ಪುನರಾವರ್ತಿತ ಅತ್ಯಾಚಾರ), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಬಂಧಿಸಲಾಗಿದೆ.

Loading...
Unable to load recommendations.
Follow Us