AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ಯುವಕನಿಗೆ ಚಾಕು ಇರಿತ!

ಕನ್ನಡ ರಾಜ್ಯೋತ್ಸವ ಮೆರವಣಿಗೆಯಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿಯಾಗಿದ್ದು, ಈ ವೇಳೆ ಯುವಕನೊಬ್ಬನಿಗೆ ಚಾಕು ಇರಿದಿದ್ದಾರೆ.

ಬೆಳಗಾವಿ: ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ಯುವಕನಿಗೆ ಚಾಕು ಇರಿತ!
ಹುಕ್ಕೇರಿ ಪಟ್ಟಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಮೆರವಣಿಗೆ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Nov 23, 2022 | 11:58 PM

Share

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ (Kannada Rajyotsava) ಮೆರವಣಿಗೆಯಲ್ಲಿ ಗುಂಪು ಘರ್ಷಣೆಯಾಗಿದ್ದು, ಈ ವೇಳೆ ಓರ್ವ ಯುವಕನಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಇಂದು(ನ.23) ನಡೆದ ಕನ್ನಡ ರಾಜ್ಯೋತ್ಸವ ಮೆರವಣಿಯಲ್ಲಿ ಯುವಕರ ಗುಂಪುಗಳ ನಡುವೆ ಜಗಳದಲ್ಲಿ ಚೇತನ್​ಗೆ ಚಾಕು ಇರಿದಿದ್ದಾರೆ. ಇನ್ನು ಗಲಾಟೆಯಲ್ಲಿ ಅಶೋಕ ಸಿಂಧೂರೆ, ವಿಕಾಸ ಸುಣಗಾರ ಎನ್ನುವವರು ಗಾಯಗೊಂಡಿದ್ದಾರೆ.

ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುವಾಗ ತಳ್ಳಿದರು ಎಂಬ ಕಾರಣಕ್ಕೆ ಯುವಕರ ಗುಂಪುಗಳ ನಡುವೆ ಮಾತಿಗೆ ಮಾತು ಬೆಳೆದು ಅದು ವಿಕೋಪಕ್ಕೆ ತಿರಗುಗೆ ಒಬ್ಬರಿಗೊಬ್ಬರು ಬಡಿದಾಡಿಕೊಂಡಿದ್ದಾರೆ. ಈ ಗಲಾಟೆ ಮಧ್ಯೆ ದುಷ್ಕರ್ಮಿಗಳು ಚೇತನ ಹಡಪದ ಎಂಬ ಯುವಕನಿಗೆ ಚಾಕು ಇರಿದು ಪರಾರಿಯಾಗಿದ್ದಾರೆ.

ಮೋಶೀನ್​ ಗ್ಯಾಂಗ್​ನಿಂದ ಹಲ್ಲೆ ಹಾಗೂ ಚಾಕು ಇರಿದಿರುವ ಆರೋಪ ಕೇಳಿಬಂದಿದೆ. ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಈ ಘಟನೆ ನಡೆದಿದ್ದು, ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!