ಹೊಸಕೋಟೆ: ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನ ಕೊಲೆ

| Updated By: ವಿವೇಕ ಬಿರಾದಾರ

Updated on: Jun 16, 2024 | 9:57 AM

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಡಾಬಾ ಬಳಿ ಓರ್ವನ ಯುವಕನ ಕೊಲೆಯಾಗಿದೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೊಸಕೋಟೆ ತಾಲೂಕಿನ ಗಂಗಾಪುರ ನಿವಾಸಿ ನವೀನ್ ನಾಯಕ್ (27) ಕೊಲೆಯಾದ ಯುವಕ.

ಹೊಸಕೋಟೆ: ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನ ಕೊಲೆ
ಸಾಂದರ್ಭಿಕ ಚಿತ್ರ
Follow us on

ಹೊಸಕೋಟೆ, ಜೂನ್​ 16: ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ಹೊಸಕೋಟೆ (Hoskote) ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಡಾಬಾ ಬಳಿ ನಡೆದಿದೆ. ಹೊಸಕೋಟೆ ತಾಲೂಕಿನ ಗಂಗಾಪುರ ನಿವಾಸಿ ನವೀನ್ ನಾಯಕ್ (27) ಕೊಲೆಯಾದ ಯುವಕ. ನವೀನ್​ ತರಕಾರಿ ವ್ಯಾಪಾರಕ್ಕೆಂದು ಹೊಸಕೋಟೆ ಕಡೆ ಬರುತ್ತಿದ್ದರು.

ಇದೇ ವೇಳೆ ಗುಂಪೊಂದು ಹೆದ್ದಾರಿಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿಕೊಂಡು ಹೋಗುತ್ತಿತ್ತು. ಇದನ್ನು ಕಂಡು ನವೀನ್​​ ಗುಂಪನ್ನು ಪ್ರಶ್ನಿಸಿದ್ದಾರೆ. ಇಷ್ಟಕ್ಕೆ ಗುಂಪು ನವೀನ್​ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಮಾಡಿ ಕೊಲೆ ಮಾಡಿದೆ. ಕೊಲೆ ಮಾಡಿದ ಬಳಿಕ ದುಷ್ಕರ್ಮಿಗಳು ವಾಹನ ಸಮೇತ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಹೊಸಕೋಟೆ ಠಾಣೆ ಪೊಲೀಸರು, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಾರು ಅಥವಾ ವೈಯಕ್ತಿಕ ವಿಚಾರಕ್ಕೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ಜಮೀನಿನಲ್ಲಿ ಸಿಕ್ತು ಮನೆಯಿಂದ ಹೊರ ಹೋದವನ ತಲೆ ಬರುಡೆ; ತನಿಖೆಯಲ್ಲಿ ಬಯಲಾಯ್ತು ಭಯಾನಕ ಸತ್ಯ

ಪ್ರಕರಣ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಹೊಸಕೋಟೆ ಕಡೆಯಿಂದ ಹೆದ್ದಾರಿಯಲ್ಲಿ ಎರಡು ಕಾರುಗಳು ಬಂದಿವೆ. 10 ಕಿ.ಮೀ.ವರೆಗೂ ಎರಡೂ ಕಾರಿನವರು ಓವರ್​ಟೇಕ್ ಮಾಡಿಕೊಂಡು ಬಂದಿದ್ದಾರೆ. ಬಳಿಕ ಎರಡೂ ಕಾರಿನಲ್ಲಿದ್ದವರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಆಲ್ಟೋಕಾರಲ್ಲಿದ್ದ ನಾಲ್ವರು ಓಮ್ನಿಕಾರಲ್ಲಿದ್ದವರ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ವೇಳೆ ಓಮ್ನಿ ಕಾರಲ್ಲಿದ್ದ ಓರ್ವ ಮೃತಪಟ್ಟಿದ್ದು, ಮತ್ತೊಬ್ಬ ಪರಾರಿಯಾಗಿದ್ದಾನೆ ಎಂದು ಹೇಳಿದರು.

ಪ್ರಕರಣದ ಬಗ್ಗೆ ಹೊಸಕೋಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದಷ್ಟು ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸುತ್ತೇವೆ ಎಂದು ತಿಳಿಸಿದರು.

ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಬರ್ಬರ ಕೊಲೆ

ಚಿಕ್ಕಬಳ್ಳಾಪುರ: ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ನಗರ ಪೊಲೀಸ್​ ಠಾಣೆಯ ಬಳಿ ರಸ್ತೆಯಲ್ಲಿ ನಡೆದಿದೆ. ಎಲ್.ಎಂ.ಎಲ್.ಶೇಖರ್ ಕೊಲೆಯಾದ ವ್ಯಕ್ತಿ. ಅನೈತಿಕ ಸಂಬಂಧ, ಕಿರುಕುಳ, ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ