Accident: ವಡೋದರಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಬಸ್ ಅಪಘಾತ; 6 ಜನ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

ಅಪಘಾತದಿಂದ ಬಸ್​ ಸಂಪೂರ್ಣ ಜಖಂ ಆಗಿದ್ದು, ಬಸ್​ನಲ್ಲಿ ಪ್ರಯಾಣಿಸುತ್ತಿದ್ದ 6 ಜನ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ವಡೋದರಾದ ಸಯಾಜಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Accident: ವಡೋದರಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಬಸ್ ಅಪಘಾತ; 6 ಜನ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ
ವಡೋದರಾದಲ್ಲಿ ಬಸ್ ಅಪಘಾತ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Oct 18, 2022 | 1:41 PM

ವಡೋದರಾ: ಗುಜರಾತ್​ನ ವಡೋದರದ (Vadodara) ಕಪುರೈ ಸೇತುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಮಂಗಳವಾರ) ಬಸ್ ಮತ್ತು ಟ್ರಕ್ ಡಿಕ್ಕಿಯಾದ ಪರಿಣಾಮ 6 ಜನರು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಐಷಾರಾಮಿ ಬಸ್​ವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಅನ್ನು ಹಿಂದಿಕ್ಕಲು ಪ್ರಯತ್ನಿಸುತ್ತಿದ್ದಾಗ ಈ ಅಪಘಾತ (Accident) ಸಂಭವಿಸಿದೆ.

ಅಪಘಾತದಿಂದ ಬಸ್​ ಸಂಪೂರ್ಣ ಜಖಂ ಆಗಿದ್ದು, ಬಸ್​ನಲ್ಲಿ ಪ್ರಯಾಣಿಸುತ್ತಿದ್ದ 6 ಜನ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ವಡೋದರಾದ ಸಯಾಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆ ಬಸ್ ರಾಜಸ್ಥಾನದ ಭಿಲ್ವಾರಾದಿಂದ ಮುಂಬೈಗೆ ಹೋಗುತ್ತಿತ್ತು. ಮಾರ್ಗಮಧ್ಯೆ ಬಸ್​ ಚಾಲಕನ ವೇಗದ ಚಾಲನೆ ಮತ್ತು ನಿರ್ಲಕ್ಷ್ಯದಿಂದಾಗಿ ಅಪಘಾತಕ್ಕೀಡಾಗಿದೆ.

ಇದನ್ನೂ ಓದಿ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ: ಕೆಎಸ್​ಆರ್​ಟಿಸಿ ಬಸ್ ಹರಿದು ಮಹಿಳೆ ಸ್ಥಿತಿ ಗಂಭೀರ

ಗೋಧಿ ತುಂಬಿದ್ದ ಟ್ರಕ್ ಅನ್ನು ಓವರ್​ಟೇಕ್ ಮಾಡಲು ಬಸ್ ಚಾಲಕ ಪ್ರಯತ್ನಿಸುತ್ತಿದ್ದಾಗ ಈ ಬಸ್ ಅಪಘಾತ ನಡೆದಿದೆ ಎನ್ನಲಾಗಿದೆ. ಮೃತಪಟ್ಟವರು ಯಾರು? ಎಂಬ ಬಗ್ಗೆ ಇನ್ನೂ ಮಾಹಿತಿ ಹೊರಬಿದ್ದಿಲ್ಲ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:33 am, Tue, 18 October 22

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ