
ವಡೋದರಾ: ಗುಜರಾತ್ನ ವಡೋದರದ (Vadodara) ಕಪುರೈ ಸೇತುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು (ಮಂಗಳವಾರ) ಬಸ್ ಮತ್ತು ಟ್ರಕ್ ಡಿಕ್ಕಿಯಾದ ಪರಿಣಾಮ 6 ಜನರು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಐಷಾರಾಮಿ ಬಸ್ವೊಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಅನ್ನು ಹಿಂದಿಕ್ಕಲು ಪ್ರಯತ್ನಿಸುತ್ತಿದ್ದಾಗ ಈ ಅಪಘಾತ (Accident) ಸಂಭವಿಸಿದೆ.
ಅಪಘಾತದಿಂದ ಬಸ್ ಸಂಪೂರ್ಣ ಜಖಂ ಆಗಿದ್ದು, ಬಸ್ನಲ್ಲಿ ಪ್ರಯಾಣಿಸುತ್ತಿದ್ದ 6 ಜನ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ವಡೋದರಾದ ಸಯಾಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆ ಬಸ್ ರಾಜಸ್ಥಾನದ ಭಿಲ್ವಾರಾದಿಂದ ಮುಂಬೈಗೆ ಹೋಗುತ್ತಿತ್ತು. ಮಾರ್ಗಮಧ್ಯೆ ಬಸ್ ಚಾಲಕನ ವೇಗದ ಚಾಲನೆ ಮತ್ತು ನಿರ್ಲಕ್ಷ್ಯದಿಂದಾಗಿ ಅಪಘಾತಕ್ಕೀಡಾಗಿದೆ.
ಇದನ್ನೂ ಓದಿ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ: ಕೆಎಸ್ಆರ್ಟಿಸಿ ಬಸ್ ಹರಿದು ಮಹಿಳೆ ಸ್ಥಿತಿ ಗಂಭೀರ
ಗೋಧಿ ತುಂಬಿದ್ದ ಟ್ರಕ್ ಅನ್ನು ಓವರ್ಟೇಕ್ ಮಾಡಲು ಬಸ್ ಚಾಲಕ ಪ್ರಯತ್ನಿಸುತ್ತಿದ್ದಾಗ ಈ ಬಸ್ ಅಪಘಾತ ನಡೆದಿದೆ ಎನ್ನಲಾಗಿದೆ. ಮೃತಪಟ್ಟವರು ಯಾರು? ಎಂಬ ಬಗ್ಗೆ ಇನ್ನೂ ಮಾಹಿತಿ ಹೊರಬಿದ್ದಿಲ್ಲ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ.
Published On - 9:33 am, Tue, 18 October 22