Accident: ಮುಂಬೈ-ಪುಣೆ ಎಕ್ಸ್​ಪ್ರೆಸ್​ವೇಯಲ್ಲಿ ಭೀಕರ ಅಪಘಾತ; ಐವರು ಸಾವು, 3 ಜನರ ಸ್ಥಿತಿ ಗಂಭೀರ

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಾಪೋಲಿ ಪ್ರದೇಶದ ಬಳಿ ಇಂದು ಮುಂಜಾನೆ ಈ ಅಪಘಾತ ಸಂಭವಿಸಿದೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

Accident: ಮುಂಬೈ-ಪುಣೆ ಎಕ್ಸ್​ಪ್ರೆಸ್​ವೇಯಲ್ಲಿ ಭೀಕರ ಅಪಘಾತ; ಐವರು ಸಾವು, 3 ಜನರ ಸ್ಥಿತಿ ಗಂಭೀರ
ಪುಣೆ- ಮುಂಬೈ ಹೈವೇಯಲ್ಲಿ ಅಪಘಾತ
Edited By:

Updated on: Nov 18, 2022 | 9:33 AM

ಮುಂಬೈ: ಮಹಾರಾಷ್ಟ್ರದ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ (Mumbai-Pune Expressway) ಇಂದು (ಶುಕ್ರವಾರ) ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರೊಂದು ಮತ್ತೊಂದು ವಾಹನಕ್ಕೆ ಡಿಕ್ಕಿ (Accident) ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಾಪೋಲಿ ಪ್ರದೇಶದ ಬಳಿ ಇಂದು ಮುಂಜಾನೆ ಈ ಅಪಘಾತ ಸಂಭವಿಸಿದೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಇನ್ನೂ ಮೂವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡವರನ್ನು ನವ ಮುಂಬೈನ ಕಾಮೋಥೆಯಲ್ಲಿರುವ ಎಂಜಿಎಂ ಆಸ್ಪತ್ರೆಗೆ ಸಾಗಿಸಲಾಗಿದೆ.

ಇದನ್ನೂ ಓದಿ: Crime News: ಜಮ್ಮು ಕಾಶ್ಮೀರದಲ್ಲಿ ಭೀಕರ ಬಸ್ ಅಪಘಾತ; ಮೂವರು ಸಾವು, 17 ಜನರಿಗೆ ಗಾಯ

ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತಗಳನ್ನು ಕಡಿಮೆ ಮಾಡಲು ಮತ್ತು ಸುರಕ್ಷಿತವಾಗಿ ಚಾಲನೆ ಮಾಡುವ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನದಲ್ಲಿ ಡಿಸೆಂಬರ್ 1ರಂದು 24 ಗಂಟೆಗಳ ಕಾರು ತಪಾಸಣೆ ಡ್ರೈವ್ ಅನ್ನು ಪ್ರಾರಂಭಿಸುವುದಾಗಿ ಪ್ರಾದೇಶಿಕ ಸಾರಿಗೆ ಕಚೇರಿ (RTO) ತಿಳಿಸಿತ್ತು. ಕಳೆದ 10 ತಿಂಗಳಲ್ಲಿ ಪುಣೆ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ವೇಗದ ಮಿತಿಯನ್ನು ಮೀರಿದ ಸುಮಾರು 7,000 ಕಾರುಗಳಿಗೆ ದಂಡ ವಿಧಿಸಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ