ಕಾರು, ಟ್ಯಾಂಕರ್ ನಡುವೆ ಡಿಕ್ಕಿ: ಉತ್ತರ ಕನ್ನಡ ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ ಸೇರಿ ಮೂವರಿಗೆ ಗಂಭೀರ ಗಾಯ
ಜೆಡಿಎಸ್ ಜಿಲ್ಲಾಧ್ಯಕ್ಷರ ಕಾರು ಹಾಗೂ ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದ್ದು, ಜಿಲ್ಲಾಧ್ಯಕ್ಷ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿರುವಂತಹ ಘಟನೆ ಜಿಲ್ಲೆಯ ಕುಮಟಾ ತಾಲೂಕಿನ ಹಿರೇಗುತ್ತಿ ಗ್ರಾಮದಲ್ಲಿ ನಡೆದಿದೆ.
ಕಾರವಾರ: ಜೆಡಿಎಸ್ ಜಿಲ್ಲಾಧ್ಯಕ್ಷರ ಕಾರು ಹಾಗೂ ಟ್ಯಾಂಕರ್ ನಡುವೆ ಅಪಘಾತ (Accident) ಸಂಭವಿಸಿದ್ದು, ಜಿಲ್ಲಾಧ್ಯಕ್ಷ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿರುವಂತಹ ಘಟನೆ ಜಿಲ್ಲೆಯ ಕುಮಟಾ ತಾಲೂಕಿನ ಹಿರೇಗುತ್ತಿ ಗ್ರಾಮದಲ್ಲಿ ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ, ವಿ.ಎಂ.ಭಂಡಾರಿ ಹಾಗೂ ಪರಮೇಶ್ವರ್ ನಾಯ್ಕ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅಂಕೋಲಾದಿಂದ ಹೊನ್ನಾವರ ಕಡೆ ಪ್ರಯಾಣಿಸುತ್ತಿದ್ದಾಗ ಘಟನೆ ನಡೆದಿದೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.
ಮಾದಕ ವಸ್ತು ಸೇವಿಸುತ್ತಿದ್ದ 42 ವಿದ್ಯಾರ್ಥಿಗಳು ಅಮಾನತು
ಉಡುಪಿ: ಮಾದಕ ವಸ್ತು ಸೇವಿಸುತ್ತಿದ್ದ ಉಡುಪಿಯ ಮಣಿಪಾಲ ವಿವಿಯ 42 ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಅಮಾನತಾದವರು 1 ತಿಂಗಳ ಕಾಲ ತರಗತಿಗೆ ಹಾಜರಾಗುವಂತಿಲ್ಲ. ವಿವಿಯ ಯಾವುದೇ ಸೌಲಭ್ಯ ಬಳಸುವಂತಿಲ್ಲ. ಡ್ರಗ್ಸ್ ಸೇವಿಸಿದವರನ್ನು ಕ್ರಿಮಿನಲ್ಗಳೆಂದು ಪರಿಗಣಿಸಲು ಸಾಧ್ಯವಿಲ್ಲ. ಎಡಿಜಿಪಿ ಅಲೋಕ್ ಕುಮಾರ್ ಸೂಚನೆ ಮೇರೆಗೆ ಕ್ರಮಕೈಗೊಳ್ಳಲಾಗಿದೆ ಎಂದು ಉಡುಪಿಯ ಮಣಿಪಾಲ್ ವಿಶ್ವವಿದ್ಯಾಲಯದಿಂದ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಚಾಮರಾಜನಗರ: ಕಲ್ಲು ಎತ್ತಿ ಹಾಕಿ ಪತ್ನಿಯನ್ನು ಕೊಂದು, ತಾನು ನೇಣಿಗೆ ಶರಣಾದ ಪತಿ
ಫೈನಾನ್ಸ್ ಕಂಪನಿ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ
ಮೈಸೂರು: ನಂಜನಗೂಡು ತಾಲೂಕಿನ ಚಿಕ್ಕಕವಲಂದೆ ಗ್ರಾಮದಲ್ಲಿ ಖಾಸಗಿ ಫೈನಾನ್ಸ್ ಕಂಪನಿಯ ಕಿರುಕುಳಕ್ಕೆ ಬೇಸತ್ತು ಮಹೇಶ್(44) ಎಂಬ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಮಹೇಶ್, ಚೆನ್ನೈ ಮೂಲದ ಫೈನಾನ್ಸ್ ಕಂಪನಿಯಲ್ಲಿ 3.50 ಲಕ್ಷ ಸಾಲ ಪಡೆದಿದ್ದ. ಸಾಲ ಮರುಪಾವತಿಸುವಂತೆ ಕಿರುಕುಳ ಆರೋಪ ಕೇಳಿ ಬಂದಿದ್ದು ದೊಡ್ಡಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೈಲಿನಿಂದ ಹೊರಬಂದು ಮತ್ತೆ ಪ್ರೀತಿಸುವಂತೆ ಯುವಕನಿಂದ ಕಾಟ
ಬೆಂಗಳೂರು: ಜೈಲಿನಿಂದ ಹೊರಬಂದು ಮತ್ತೆ ಪ್ರೀತಿಸುವಂತೆ ಯುವಕ ಮಾರಿಯಪ್ಪನ್ನಿಂದ ಇಸ್ರೋ ವಿಜ್ಞಾನಿಗೆ ಕಿರುಕುಳ ನೀಡಿದ್ದಾನೆ. ಯುವತಿ ಮೇಲೆ ಒನ್ ವೇ ಲವ್ನಲ್ಲಿದ್ದ ಆಸಾಮಿ ಮಾರಿಯಪ್ಪನ್, ಕಳೆದ ವರ್ಷ ಮಾನಸಿಕ ಕಿರುಕುಳ ಹಿನ್ನೆಲೆ ಆತನ ಮೇಲೆ ಯುವತಿ ದೂರು ನೀಡಿದ್ದಳು. ಈ ಸಂಬಂಧ ಆರೋಪಿ ಮಾರಿಯಪ್ಪನ್ನ್ನು ಬಂಧಿಸಿ ಜೈಲಿಗಟ್ಟಿದ್ದ ಪೊಲೀಸರು, ಇದೀಗ ಜೈಲಿನಿಂದ ಜಾಮೀನು ಪಡೆದು ಹೊರಬಂದು ಮತ್ತೆ ಕಿರುಕುಳ ಕೊಟ್ಟಿದ್ದಾನೆ.
ಇದನ್ನೂ ಓದಿ: ಬಿಜೆಪಿ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಸುಫಾರಿ ಪ್ರಕರಣ: ಆರೋಪಿಗಳ ಮೊಬೈಲ್ನಲ್ಲಿ ಫೋಟೋಗಳು ಪತ್ತೆ, ಚುರುಕುಗೊಂಡ ತನಿಖೆ
ಇಸ್ರೋದಿಂದ ವಾಪಸ್ ಮನೆಗೆ ಬರುವಾಗ ಫೆ.10ರಂದು ಬೈಕ್ ಅಡ್ಡಗಟ್ಟಿ ಯುವತಿಗೆ ಕಾಟ ಕೊಟ್ಟಿದ್ದ ಆರೋಪಿ, ಈ ವೇಳೆ ನನ್ನನ್ನು ಪ್ರೀತಿಸು, ಮದುವೆಯಾಗು ಎಂದು ಪೀಡಿಸಿ, ಬೈಕ್ ಎಳೆದಾಡಿ ಹಿಂಸೆ ನೀಡಿದ್ದನಂತೆ. ಈ ಹಿನ್ನೆಲೆ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಯುವತಿ ಮತ್ತೊಂದು ದೂರು ದಾಖಲಿಸಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:25 pm, Thu, 23 February 23