ಹುಬ್ಬಳ್ಳಿಯ ನೂಲ್ವಿ ಕ್ರಾಸ್​ ಬಳಿ ಭೀಕರ ಅಪಘಾತ: 15ಕ್ಕೂ ಹೆಚ್ಚು ಜನರಿಗೆ ಗಾಯ

ಕಾರ್ಖಾನೆ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುವ ಅಪಘಾತ ಸಂಭವಿಸಿ 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ

ಹುಬ್ಬಳ್ಳಿಯ ನೂಲ್ವಿ ಕ್ರಾಸ್​ ಬಳಿ ಭೀಕರ ಅಪಘಾತ: 15ಕ್ಕೂ ಹೆಚ್ಚು ಜನರಿಗೆ ಗಾಯ
ಅಪಘಾತ
Edited By:

Updated on: Oct 16, 2022 | 9:38 PM

ಧಾರವಾಡ: ಟಾಟಾ ಏಸ್​ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ 15ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿ ಕ್ರಾಸ್​ ಬಳಿ ನಡೆದಿದೆ. ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರಗೆ ದಾಖಲಿಸಲಾಗಿದೆ. 15 ಜನರು ಕಾರ್ಖಾನೆ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುವ ಅಪಘಾತ ಸಂಭವಿಸಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕ್ಷುಲ್ಲಕ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ: ಪತ್ನಿ ನೇಣಿಗೆ ಶರಣು

ನೆಲಮಂಗಲ: ಕ್ಷುಲ್ಲಕ ವಿಚಾರಕ್ಕೆ ಪತಿ-ಪತ್ನಿ ನಡುವೆ ಪ್ರತಿನಿತ್ಯ ಜಗಳ ಸಂಭವಿಸುತ್ತಿದ್ದು, ಇದರಿಂದ  ಪತ್ನಿ ಇಂದು (ಅ. 16) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲ ತಾಲೂಕಿನ ರೈಲ್ವೆ ಗೊಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಾವ್ಯ (26)ಮೃತ ಮಹಿಳೆ.

ಕಾವ್ಯ 8 ವರ್ಷಗಳ ಹಿಂದ ಪ್ರಕಾಶ್ ಎಂಬಾತನೊಂದಿಗೆ ವಿವಾಹವಾಗಿದ್ದಳು. ಪತ್ನಿ ಕಾವ್ಯಾಗೆ, ಪ್ರಕಾಶ ವರದಕ್ಷಿಣೆ ಮತ್ತು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಮೃತ ಕಾವ್ಯ ತಾಯಿ ಆರೋಪ ಮಾಡಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಘನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

ಉತ್ತರ ಕನ್ನಡ: ಕುಮಟಾ ತಾಲೂಕಿನ ದಿವಗಿ ಗ್ರಾಮದ ಬಳಿಯ ಅಘನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದೆ. ಅಂದಾಜು 35 ರಿಂದ 38 ವರ್ಷದ ವ್ಯಕ್ತಿಯ ಮೃತ ದೇಹ ಎಂದು ಊಹಿಸಲಾಗಿದೆ. ಕುಮಟಾ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ