Sign In

By signing in or creating an account, you agree with Associated Broadcasting Company's Terms & Conditions and Privacy Policy.

Accident: ಮಿನಿ ಬಸ್​ ಡಿಕ್ಕಿ: ಆಟೋದಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ದುರ್ಮರಣ

ಟೆಂಪೊ ಮತ್ತು ಆಟೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ದುರ್ಮರಣ ಹೊಂದಿರುವಂತಹ ಘಟನೆ ನಗರದ ಹೊರವಲಯದ ರೋಣ ರಸ್ತೆಯಲ್ಲಿ ದುರ್ಘಟನೆ ಸಂಭವಿಸಿದೆ.

Accident: ಮಿನಿ ಬಸ್​ ಡಿಕ್ಕಿ: ಆಟೋದಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ದುರ್ಮರಣ
ಮಿನಿ ಬಸ್​ ಮತ್ತು ಆಟೋ ನಡುವೆ ಅಪಘಾತ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Feb 12, 2023 | 9:23 PM

ಗದಗ: ಟೆಂಪೊ ಮತ್ತು ಆಟೋ ಮುಖಾಮುಖಿ ಡಿಕ್ಕಿ (Accident) ಹೊಡೆದ ಪರಿಣಾಮ ಮೂವರು ದುರ್ಮರಣ ಹೊಂದಿರುವಂತಹ ಘಟನೆ ನಗರದ ಹೊರವಲಯದ ರೋಣ ರಸ್ತೆಯಲ್ಲಿ ದುರ್ಘಟನೆ ಸಂಭವಿಸಿದೆ. ಬಾಗಲಕೋಟೆಯಲ್ಲಿ ಮದುವೆ ಮುಗಿಸಿ ಬೆಟಗೇರಿಗೆ ಬರುತ್ತಿದ್ದ ಮಿನಿ ಬಸ್, ಗದಗ ನಗರದಿಂದ ಹೊರಟಿದ್ದ ಆಟೋ ರಿಕ್ಷಾ ನಡುವೆ ಡಿಕ್ಕಿಯಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಬೆಟಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

ದಾವಣಗೆರೆ: ಗೋಮಾಳದ ವಿಚಾರಕ್ಕೆ ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ದಾವಣಗೆರೆಯ ಗಾಂಧಿನಗರದ 6ನೇ ಕ್ರಾಸ್​ನಲ್ಲಿ ನಡೆದಿದೆ. ದಾವಣಗೆರೆ ತಾಲೂಕಿನ ಕಿತ್ತೂರು ಗ್ರಾಮದ ಮೈಲಾರಿ(28) ಹತ್ಯೆಗೊಳಗಾದ ಯುವಕ. ಮೂವರು ಯುವಕರ ತಂಡದಿಂದ ದುಷ್ಕೃತ್ಯವೆಸಗಲಾಗಿದೆ. ಮೈಲಾರ ಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ 6 ಎಕರೆ ಗೋಮಾಳದ ವಿಚಾರವಾಗಿ ಜಗಳವಾಗಿದೆ. ಮಲ್ಲ, ಮೂರ್ತಪ್ಪ, ರಕ್ಷಿತ್ ಸೇರಿ 7 ಜನರ ತಂಡದಿಂದ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗುತ್ತಿದೆ. ಹತ್ಯೆಯಾಗಿರುವ ಮೈಲಾರಿ ಕುಟುಂಬಸ್ಥರಿಂದ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದಾವಣಗೆರೆಯ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಅರಮನೆ ಮೈದಾನದ 4, 5ನೇ ಗೇಟ್‌ ಮುಂಭಾಗದಲ್ಲಿ ಅಗ್ನಿ ಅವಘಡ

ಆಟವಾಡುತ್ತಿದ್ದ ವೇಳೆ ತೋಟದ ಬಾವಿಗೆ ಬಿದ್ದು ಬಾಲಕ ಸಾವು

ಕಾರವಾರ: ಆಟವಾಡುತ್ತಿದ್ದ ವೇಳೆ ತೋಟದ ಬಾವಿಗೆ ಬಿದ್ದು ಬಾಲಕ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ವಂದೂರು ಗ್ರಾಮದ ಬಳಿ ನಡೆದಿದೆ. ನಾಗಭೂಷಣ ಹೆಗಡೆ(7) ಮೃತ ದುರ್ದೈವಿ ಬಾಲಕ. ಒಂದನೇ ತರಗತಿ ವಿದ್ಯಾರ್ಥಿಯಾಗಿದ್ದ ನಾಗಭೂಷಣ, ಮನೆಯ ನಾಯಿಯೊಂದಿಗೆ ತೋಟದ ಬಳಿ ಆಟವಾಡುತ್ತಿದ್ದ ವೇಳೆ ಆಯತಪ್ಪಿ ತೆರೆದ ಬಾವಿಗೆ ಬಿದ್ದು ದುರ್ಘಟನೆ ಸಂಭವಿಸಿದೆ. ಮಗ ಕಾಣದೇ ಇದ್ದಾಗ ಮನೆಯ ಸುತ್ತಮುತ್ತ ಮನೆಯವರು ಹುಡುಕಾಡಿದ್ದಾರೆ. ಈ ವೇಳೆ ಬಾವಿಯಲ್ಲಿ ನೋಡಿದಾಗ ಮಗು ಮೃತಪಟ್ಟಿದ್ದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪೊಲೀಸ್ ಭೇಟಿ ನೀಡಿ ಬಾಲಕನ ಶವವನ್ನು ಸಿಬ್ಬಂದಿಗಳು ಮೇಲಕ್ಕೆತ್ತಿದ್ದಾರೆ. ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಖಾಸಗಿ ಕಾಲೇಜಿನ ಕಾರ್ಯಕ್ರಮದಲ್ಲಿ ಅಂಬೇಡ್ಕರ್​ಗೆ ಅಪಮಾನ: ಪ್ರಿನ್ಸಿಪಾಲ್​​ ಸೇರಿದಂತೆ 6 ಜನರ ವಿರುದ್ಧ ಎಫ್​ಐಆರ್​ ದಾಖಲು

ಕಬ್ಬಿನ ಗದ್ದೆಯಲ್ಲಿ ಬೆಂಕಿ ನಂದಿಸುವಾಗ ಕುರಿಗಾಹಿ ಸಜೀವದಹನ

ಮಂಡ್ಯ: ಕಬ್ಬಿನ ಗದ್ದೆಯಲ್ಲಿ ಬೆಂಕಿ ನಂದಿಸುವಾಗ ಕುರಿಗಾಹಿ ಸಜೀವದಹನವಾಗಿರುವಂತಹ ಘಟನೆ ಮಂಡ್ಯ ತಾಲೂಕಿನ ಮೊಡಚಾಕನಹಳ್ಳಿಯಲ್ಲಿ ನಡೆದಿದೆ. ಮಹಾಲಿಂಗು(60) ಮೃತ ಕುರಿಗಾಹಿ. ಗ್ರಾಮದ ಕುಮಾರ್‌ ಎಂಬುವವರ ಗದ್ದೆಯಲ್ಲಿ ಬೆಂಕಿ ಕಾಣಿಸಿದ್ದು, ಗಾಢ ಹೊಗೆಯಿಂದ ಗದ್ದೆಯಲ್ಲೇ ಕುಸಿದು ಬಿದ್ದ ಪರಿಣಾಮ ಬೆಂಕಿ ಹತ್ತಿಕೊಂಡು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿನಂದಿಸಿದರು. ಶಿವಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:10 pm, Sun, 12 February 23