ಎರಡು ಕಾರ್​ಗಳ ಮಧ್ಯೆ ಮುಖಾಮುಖಿ ಡಿಕ್ಕಿ; ಕೇಂದ್ರ ಸಚಿವೆ ಶೋಭಾ ಕರಾಂದ್ಲಾಜೆರಿಂದ ಗಾಯಾಳುಗಳಿಗೆ ಸಹಾಯ ಹಸ್ತ

ಎರಡು ಕಾರ್​ಗಳ ಮಧ್ಯೆ ಮುಖಾಮುಖಿ ಡಿಕ್ಕಿ; ಕೇಂದ್ರ ಸಚಿವೆ ಶೋಭಾ ಕರಾಂದ್ಲಾಜೆರಿಂದ ಗಾಯಾಳುಗಳಿಗೆ ಸಹಾಯ ಹಸ್ತ
ಕೇಂದ್ರ ಸಚಿವೆ ಶೋಭಾ ಕರಾಂದ್ಲಾಜೆರಿಂದ ಗಾಯಾಳುಗಳಿಗೆ ಸಹಾಯ ಹಸ್ತ

ಹೊಸಪೇಟೆ ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ಬರುತ್ತಿದ್ದ ವೇಳೆ ಅಪಘಾತ ನಡೆದಿದ್ದು, ಸಚಿವರ ಮಾನವೀಯ ಕಾರ್ಯಕ್ಕೆ ಸ್ಥಳಿಯರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಎರಡು ಕಾರ್​ಗಳು ಯಾರದ್ದು ಎಂಬುದು ತಿಳಿದು ಬಂದಿಲ್ಲ. 

TV9kannada Web Team

| Edited By: ಗಂಗಾಧರ್​ ಬ. ಸಾಬೋಜಿ

Apr 16, 2022 | 3:44 PM

ವಿಜಯನಗರ: ಹೊಸಪೇಟೆ ತಾಲೂಕಿನ ಪಿ.ಕೆ ಹಳ್ಳಿಯ ಬಳಿ ಎರಡು ಕಾರ್​ಗಳ ಮಧ್ಯೆ ಮುಖಾಮುಖಿ ಡಿಕ್ಕಿ (Accident) ಹೊಡೆದಿದ್ದು, ಕಾರ್​ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗೆ ಗಂಭೀರ ಗಾಯವಾಗಿದೆ. ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೇಂದ್ರ ಸಚಿವೆ ಶೋಭಾ ಕರಾಂದ್ಲಾಜೆರಿಂದ ಗಾಯಾಳುಗಳಿಗೆ ಸಹಾಯ ಮಾಡಿ ಮಾನವೀಯತೆ ಮೇರೆದಿದ್ದಾರೆ. ತಕ್ಷಣ ತಮ್ಮ ಕಾರಿನಲ್ಲಿ ಗಾಯುಳುವನ್ನ ಆಸ್ಪತ್ರೆಗೆ ರವಾನಿಸಲು ಸೂಚಿಸಿದ ಶೋಭಾ ಕರಂದ್ಲಾಜೆ, ತಮ್ಮ ಕಾರನ್ನು ಗಾಯಾಳುಗಳಿಗೆ ನೀಡಿ ಬೈಕ್ ಹತ್ತಿ ಹೋಗಿದ್ದಾರೆ. ಹೊಸಪೇಟೆ ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ಬರುತ್ತಿದ್ದ ವೇಳೆ ಅಪಘಾತ ನಡೆದಿದ್ದು, ಸಚಿವರ ಮಾನವೀಯ ಕಾರ್ಯಕ್ಕೆ ಸ್ಥಳಿಯರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಎರಡು ಕಾರ್​ಗಳು ಯಾರದ್ದು ಎಂಬುದು ತಿಳಿದು ಬಂದಿಲ್ಲ.

ಬಿಬಿಎಂಪಿ ಕಚೇರಿಯ ಮುಖ್ಯ ಇಂಜಿನಿಯರ್ ಕಚೇರಿಯಲ್ಲಿ ಬೆಂಕಿ ಅವಘಡ:

ಬೆಂಗಳೂರು: ಬ್ಯಾಟರಾಯನಪುರ ಬಿಬಿಎಂಪಿ ಕಚೇರಿಯ 3ನೇ ಮಹಡಿಯಲ್ಲಿರುವ ಮುಖ್ಯ ಇಂಜಿನಿಯರ್ ರಂಗನಾಥ್ ಕಚೇರಿಯಲ್ಲಿ ಎಸಿ ಸ್ಫೋಟಗೊಂಡು ಬೆಂಕಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಅವಘಡ ಉಂಟಾಗಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ಘಟನೆಯಿಂದ ಯಾವುದೇ ದಾಖಲೆಗೆ ಹಾನಿಯಾಗಿಲ್ಲ. ಆದರೆ, ಕೆಲ ಪಿಟೋಪಕರಣ ಹಾಗೂ ಪತ್ರಗಳು ಬೆಂಕಿಗಾಹುತಿಯಾಗಿವೆ. ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕಚೇರಿಯಲ್ಲಿ ಘಟನೆ ನಡೆದಿದೆ.

ನಾಗದೇವತೆ ಮೂರ್ತಿ ಧ್ವಂಸಗೊಳಿಸಿದ ದುಷ್ಕರ್ಮಿಗಳು: ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ವಾಸುಕಿ ಸುಬ್ರಹ್ಮಣ್ಯ ಮೂರ್ತಿಯನ್ನು ಕಿಡಿಗೇಡಿಗಳು ವಿರೂಪಗೊಳಿಸಿದ್ದಾರೆ. ಕೂಡಲೇ ಕಿಡಿಗೇಡಿಗಳನ್ನು ಬಂಧಿಸುವಂತೆ ಭಕ್ತರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಮುದಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹೆದ್ದಾರಿಯಲ್ಲಿ ಎರಡು ಲಾರಿಗಳ ನಡುವೆ ಅಪಘಾತ: ತುಮಕೂರು ಶಿರಾ ತಾಲೂಕಿನ ಮಾನಗೆರೆ ಬಳಿ ಹೆದ್ದಾರಿಯಲ್ಲಿ ಎರಡು ಲಾರಿಗಳ ನಡುವೆ ಅಪಘಾತವಾಗಿದೆ. ಈ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ವಾಹನ ಸಂಚಾರ ನಿರ್ಬಂಧಿಸಿ, ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಕ್ರೇನ್ ಮೂಲಕ ಲಾರಿಗಳನ್ನು ತೆರವುಗೊಳಿಸಿದ ಬಳಿಕ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗುತ್ತೆ.

ಇದನ್ನೂ ಓದಿ:

ಕೆ.ಎಸ್​ ಈಶ್ವರಪ್ಪ ಪರ, ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ

ಪ್ರಚಲಿತ ಯುಗಧರ್ಮಕ್ಕೆ ಹೆಚ್ಚು ಸಮಂಜಸ – ಪ್ರಾಣಿ ಪಶು ಪಕ್ಷಿಗಳಲ್ಲಿ ಇರುವ ಬುದ್ಧಿ ಮನುಷ್ಯರಲ್ಲಿ ಏಕೆ ಇಲ್ಲ!?

Follow us on

Related Stories

Most Read Stories

Click on your DTH Provider to Add TV9 Kannada