ಬಿಲ್ಡಿಂಗ್ ಡೆಮಾಲಿಷನ್ ವೇಳೆ ಅವಘಡ: ಇಬ್ಬರು ಕಾರ್ಮಿಕರ ದುರ್ಮರಣ

| Updated By: ಗಂಗಾಧರ​ ಬ. ಸಾಬೋಜಿ

Updated on: Feb 11, 2023 | 6:27 PM

ಹಳೇ ಕಟ್ಟಡ ನೆಲಸಮ ಮಾಡುವ ವೇಳೆ ಗೋಡೆ ಕುಸಿದು ಇಬ್ಬರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆ ನಗರದ ಮಹಾಲಕ್ಷ್ಮೀ ಲೇಔಟ್​ನ 10ನೇ ಕ್ರಾಸ್​ನಲ್ಲಿ ನಡೆದಿದೆ.

ಬಿಲ್ಡಿಂಗ್ ಡೆಮಾಲಿಷನ್ ವೇಳೆ ಅವಘಡ: ಇಬ್ಬರು ಕಾರ್ಮಿಕರ ದುರ್ಮರಣ
ಪ್ರಾತಿನಿಧಿಕ ಚಿತ್ರ
Image Credit source: newindianexpress.com
Follow us on

ಬೆಂಗಳೂರು: ಹಳೇ ಕಟ್ಟಡ ನೆಲಸಮ (building demolition) ಮಾಡುವ ವೇಳೆ ಗೋಡೆ ಕುಸಿದು ಇಬ್ಬರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆ ನಗರದ ಮಹಾಲಕ್ಷ್ಮೀ ಲೇಔಟ್​ನ 10ನೇ ಕ್ರಾಸ್​ನಲ್ಲಿ ನಡೆದಿದೆ. ಉತ್ತರ ಭಾರತ ಮೂಲದ ಇಬ್ಬರು ಕೂಲಿ ಕಾರ್ಮಿಕರು ದುರಂತದಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್​ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಹೋಟೆಲ್ ಮಾಲೀಕನಿಂದ ಸಿಬ್ಬಂದಿ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಿರುವಂತಹಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳದ ಶಬರಿ ಹೋಟೆಲ್​ನಲ್ಲಿ ನಡೆದಿದೆ. ಕಪಾಳಕ್ಕೆ ಹಿಗ್ಗಾಮುಗ್ಗಾ ಥಳಿಸಿ, ಕಾಲಿನಿಂದ ಹೋಟೆಲ್ ಮಾಲೀಕ ಒದಿದ್ದಾನೆ. ಶಬರಿ ಹೋಟೆಲ್ ಮಾಲೀಕ ವೆಂಕಟೇಶ್​ ಗಾಣಿಗ ಈ ರೀತಿ ವರ್ತಿಸಿದ್ದಾರೆ.

ರಸ್ತೆ ಮಧ್ಯದಲ್ಲೇ ಹೊತ್ತಿ ಉರಿದ ಕಾರು

ಕೋಲಾರ: ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿರುವಂತಹ ಘಟನೆ ಜಿಲ್ಲೆಯ ಕೆಜಿಎಫ್ ತಾಲೂಕಿನ ಟಿ. ಗೊಲ್ಲಹಳ್ಳಿ ಗೇಟ್ ಬಳಿ ನಡೆದಿದೆ. ರಸ್ತೆ ಮಧ್ಯದಲ್ಲೇ ಕಾರು ಹೊತ್ತಿ ಉರಿದಿದೆ. ಕಾರಿ‌ಲ್ಲಿದ್ದ ತಾಯಿ, ಮಗು ಹಾಗೂ ಡ್ರೈವರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿ ಶಾಮಕದಳ ಸಿಬ್ಬಂದಿ ಆಗಮಿಸಿ ಬೆಂಕಿ‌ ನಂದಿಸುವಲ್ಲಿ ಯಶಸ್ವಿಯಾದರು. ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಇದನ್ನೂ ಓದಿ: ಕೆಆರ್​ ಮಾರ್ಕೆಟ್​ ಫ್ಲೈಓವರ್‌ ಮೇಲೆ ಡಿವೈಡರ್‌ಗೆ ಬೈಕ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

ಬೀದಿ ನಾಯಿಗಳ ದಾಳಿಗೆ ಒಂಭತ್ತು ಮೇಕೆಗಳು ಸಾವು

ಬಾಗಲಕೋಟೆ: ಬೀದಿ ನಾಯಿಗಳ ದಾಳಿಗೆ ಒಂಭತ್ತು ಮೇಕೆಗಳು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಜಮಖಂಡಿ ನಗರದ ಲಕ್ಕನಕೆರೆ ಬಳಿ ನಡೆದಿದೆ. ಕೆರೆಯ ಬಳಿ ಮೇಕೆಗಳು ಮೇಯುತ್ತಿದ್ದು, ಏಕಾಏಕಿ ನಾಯಿಗಳ ಹಿಂಡು ದಾಳಿ ಮಾಡಿದೆ. ಅರೆಬರೆ ಮಾಂಸ ತಿಂದು ನಾಯಿಗಳು ಬೀಸಾಡಿವೆ. ಸಾವನ್ನಪ್ಪಿರುವ ಮೇಕೆಗಳನ್ನ ಕಂಡು ಮಾಲೀಕರು ಕಣ್ಣೀರಿಟ್ಟಿದ್ದಾರೆ. ಜಮಖಂಡಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ಬ್ರೆಕ್ ಹಾಕಲು ಸಾರ್ವಜನಿಕರು ಮನವಿ ಮಾಡಿದ್ದಾರೆ. ಇನ್ನು ಸ್ಥಳಕ್ಕೆ ಜಮಖಂಡಿ‌ ಶಹರ್ ಠಾಣೆ ಪೊಲೀಸರು, ಪಶುಸಂಗೋಪನೆ, ನಗರ ಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕಾರು-ಲಾರಿ ಮುಖಾಮುಖಿ ಡಿಕ್ಕಿ, ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು

ತುಮಕೂರು: ಕಾರು-ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಗ್ರಾಮದಲ್ಲಿ ನಡೆದಿದೆ. ರಘು(35), ಅನುಷಾ(28) ಸ್ಥಳದಲ್ಲೇ ಮೃತಪಟ್ಟಿರುವ ದಂಪತಿ. ತಿಗಳನಹಳ್ಳಿಯಿಂದ ಬಳ್ಳಾರಿಗೆ ಮದುವೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಇದನ್ನೂ ಓದಿ: ಪೊಲೀಸ್​ ಠಾಣೆ ಎದುರಿನ ಅಂಗಡಿಯಲ್ಲಿಯೇ ಕಳ್ಳತನ: ಖದೀಮರ ಕೈಚಳಕಕ್ಕೆ ಬೆರಗಾದ ಖಾಕಿ

ಯುವಕನ ಹತ್ಯೆಗೈದು ಮೃತದೇಹ ಸುಟ್ಟ ಹಂತಕರು

ಹಾಸನ: ದುಷ್ಕರ್ಮಿಗಳು 25 ವರ್ಷದ ಯುವಕನನ್ನು ಕೊಂದು ಸುಟ್ಟು ಹಾಕಿದ ಘಟನೆ ಜಿಲ್ಲೆಯ ಅರಸೀಕೆರೆಯ ಶ್ರೀನಗರದ ರೈಲ್ವೆ ಹಳಿ ಸಮೀಪ ನಡೆದಿದೆ. ಘಟನಾ ಸ್ಥಳಕ್ಕೆ ಎಸ್​​ಪಿ ಹರಿರಾಮ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರಸೀಕೆರೆ ಪೊಲೀಸರು ಮೃತದೇಹದ ಗುರುತು ಪತ್ತೆಗೆ ಮುಂದಾಗಿದ್ದಾರೆ. ಅರಸೀಕೆರೆ ಟೌನ್​ ಪೊಲೀಸ್​​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.