AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ: ಸಾಲ ವಾಪಸ್ ಕೇಳಿದ್ದಕ್ಕೆ ಉದ್ಯಮಿಯ ಕೊಲೆ; ವೈದ್ಯ ಅರೆಸ್ಟ್​​

ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಉದ್ಯಮಿಯನ್ನು ವೈದ್ಯ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಜಿಲ್ಲೆಯ ಗೋಕಾಕ್‌ ನಗರದ ನಿವಾಸಿ ರಾಜು ಝಂವರ ಮೃತ ದುರ್ದೈವಿ.

ಬೆಳಗಾವಿ: ಸಾಲ ವಾಪಸ್ ಕೇಳಿದ್ದಕ್ಕೆ ಉದ್ಯಮಿಯ ಕೊಲೆ; ವೈದ್ಯ ಅರೆಸ್ಟ್​​
ಸಾಂದರ್ಭಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on: Feb 13, 2023 | 9:59 AM

Share

ಬೆಳಗಾವಿ: ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಉದ್ಯಮಿಯನ್ನು ವೈದ್ಯ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಜಿಲ್ಲೆಯ ಗೋಕಾಕ್‌ ನಗರದ ನಿವಾಸಿ ರಾಜು ಝಂವರ ಮೃತ ದುರ್ದೈವಿ. ಉದ್ಯಮಿ ಫೆ.10ರಂದು ಗೋಕಾಕ್‌ನಿಂದ ನಾಪತ್ತೆಯಾಗಿದ್ದರು. ಈ ಸಂಬಂಧ ಫೆ.11ರಂದು ಗೋಕಾಕ್ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡಿದ್ದ ಪೊಲೀಸರಿಗೆ ರಾಜು ಅವರ ದ್ವಿಚಕ್ರವಾಹನ ಗೋಕಾಕ್ ನಗರದ ಸಿಟಿ ಆಸ್ಪತ್ರೆ ಬಳಿ ಪತ್ತೆಯಾಗಿತ್ತು.

ಹಾಗೇ ಪೊಲೀಸರು ಉದ್ಯಮಿ ರಾಜು ಝಂವರ್‌ಗೆ ಕೊನೆ ಬಾರಿ ಕರೆ ಮಾಡಿದ್ದವರನ್ನು ಕರೆಯಿಸಿ ವಿಚಾರಣೆ ನಡೆಸಿದ್ದಾರೆ. ರಾಜು ಝಂವರ್‌ ನಾಪತ್ತೆ ಬಳಿಕ ವೈದ್ಯ ಡಾ.ಸಚಿನ್ ಶಿರಗಾವಿ ಕೂಡ ರಾಜುಗೆ ದೂರವಾಣಿ ಕರೆ ಮಾಡಿದ್ದನು.

ಡಾ.ಸಚಿನ್ ಶಿರಗಾವಿ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದಾಗ, ಸತ್ಯ ಬಾಯಿಬಿಟ್ಟಿದ್ದಾನೆ. ತಾನು (ಡಾ.ಸಚಿನ್ ಶಿರಗಾವಿ) ರಾಜುವನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿ ಘಟಪ್ರಭಾ ನದಿ ಬಲದಂಡೆ ಕಾಲುವೆಯಲ್ಲಿ ಎಸಿದಿರುವುದಾಗಿ ಹೇಳಿದ್ದಾನೆ. ಸದ್ಯ ನಾಪತ್ತೆಯಾಗಿದ್ದ ಉದ್ಯಮಿ ರಾಜುಗಾಗಿ ಕೊಳವಿ ಬಳಿ ಘಟಪ್ರಭಾ ನದಿ ಬಲದಂಡೆ ಕಾಲುವೆಯಲ್ಲಿ ಶೋಧ ಕಾರ್ಯ ನಡೆದಿದೆ.

ಮಹಿಳೆಯರ ಸರ ಕಳ್ಳತನ ಮಾಡ್ತಿದ್ದ ಆರೋಪಿಗಳ ಬಂಧನ

ಬೆಂಗಳೂರು: ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ಮೈಸೂರು ಮೂಲದ ಕಬ್ಬಾಳು ಚಂದು, ಕುಳ್ಳ ರಘು ಬಂಧಿತ ಆರೋಪಿಗಳು. ಬಂಧಿತರಿಂದ 6 ಲಕ್ಷ ಮೌಲ್ಯದ ಚಿನ್ನದ ಸರಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದ ಮಹಿಳೆಯರನ್ನ ಟಾರ್ಗೆಟ್ ಮಾಡಿ, ಬೈಕ್​ನಲ್ಲಿ ಬಂದು ಸರಗಳ್ಳತನ ಮಾಡಿ ಪರಾರಿಯಾಗುತ್ತಿದ್ದರು.

ಆರೋಪಿಗಳು ಇತ್ತೀಚೆಗೆ ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ಎಸಗಿದ್ದು, ಪಾರಿಜಾತ ಹೂ ತರಲು ಹೋಗುತ್ತಿದ್ದ 71 ವರ್ಷದ ಆದಿಲಕ್ಷ್ಮಿ ಎಂಬ ವೃದ್ಧೆಯ ಸರ ಕಸಿದು ಪರಾರಿಯಾಗಿದ್ದರು. ಆರೋಪಿಗಳು ವೃದ್ಧೆಯನ್ನು ಮೊದಲು ಹೂ ಯಾವ ದೇವರಿಗೆ ಎಂದು ಆರೋಪಿ ಕಬ್ಬಾಳು ಚಂದು ಮಾತನಾಡಿಸಿದ್ದನು. ನಂತರ ಮತ್ತೊಬ್ಬ ಆರೋಪಿ ಬಂದು ಮಹಿಳೆ ಸರ ಕಸಿದು ಪರಾರಿಯಾಗಿದ್ದಾನೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಸ್ಕಿಡ್​ ಆಗಿ ಬಿದ್ದು ಮಹಿಳೆ ದುರ್ಮರಣ

ಬೈಕ್ ಸ್ಕಿಡ್​ ಆಗಿ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಳಪೆ ಗುಣಮಟ್ಟದ ಹೆಲ್ಮೆಟ್ ಧರಿಸಿದ್ದ 35 ವರ್ಷದ ಮಹಿಳೆ‌ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಮಹಿಳೆ ಇಂದು (ಫೆ.13) ಬೆಳಿಗ್ಗೆ 8.10ರ ಸುಮಾರಿಗೆ ಬೈಕ್​ನಲ್ಲಿ ಆಫೀಸ್​​ಗೆಂದು ಎಮ್​​ಜಿ ರಸ್ತೆ ಕಡೆ ಹೋಗುತ್ತಿದ್ದರು. ಈ ವೇಳೆ ಮುಂದೆ ಹೋಗುತ್ತಿದ್ದ ವಾಹನವೊಂದರ ಆಯಿಲ್ ಲೀಕಾಗಿದೆ. ಲೀಕಾದ ಆಯಿಲ್​ ಮೇಲೆ ಸ್ಪೀಡ್​​​ ಆಗಿ ಹೋದ ಪರಿಣಾಮ ಬೈಕ್​ ಸ್ಕಿಡ್​ ಆಗಿದೆ. ಘಟನಾ ಸ್ಥಳಕ್ಕೆ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿನೆ ನಡೆಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ