ಕುಡಿದ ಮತ್ತಿನಲ್ಲಿ ಸ್ನೇಹಿತನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಆರೋಪಿ ಬಂಧನ

ಮೇ 26ರಂದು ಕುಡಿದ ಅಮಲಿನಲ್ಲಿ ಸ್ನೇಹಿತ ನಾರಾಯಣಸ್ವಾಮಿನಿಗೆ (35) 10ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಆರೋಪಿ ಚಂದ್ರನನ್ನು  ಬಾಗಲೂರು ಠಾಣೆಯ ಪೊಲೀಸ್​ರು ಬಂಧಿಸಿದ್ದಾರೆ.

ಕುಡಿದ ಮತ್ತಿನಲ್ಲಿ ಸ್ನೇಹಿತನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಆರೋಪಿ ಬಂಧನ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on: Jun 27, 2022 | 5:13 PM

ಬೆಂಗಳೂರು: ಮೇ 26ರಂದು ಕುಡಿದ (Drink) ಅಮಲಿನಲ್ಲಿ ಸ್ನೇಹಿತ ನಾರಾಯಣಸ್ವಾಮಿಗೆ (35) 10ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಲೆ (Murder) ಮಾಡಿದ್ದ ಆರೋಪಿ (Accused) ಚಂದ್ರನನ್ನು  ಬಾಗಲೂರು ಠಾಣೆಯ ಪೊಲೀಸ್​ರು (Police) ಬಂಧಿಸಿದ್ದಾರೆ. ನಾರಾಯಣಸ್ವಾಮಿ, ಚಂದ್ರ ಇಬ್ಬರು ಗಾರೆ ಕೆಲಸ ಮಾಡುತ್ತಿದ್ದರು. ಚಂದ್ರನು ಕುಡಿದ ಅಮಲಿನಲ್ಲಿ ಸ್ನೇಹಿತ ನಾರಾಯಣಸ್ವಾಮಿ ಜೊತೆ ಜಗಳವಾಡಿಕೊಂಡಿದ್ದನು. ಜಗಳ ತಾರಕಕ್ಕೇರಿ ಚಂದ್ರ ನಾರಾಯಣಸ್ವಾಮಿಯನ್ನು ಕೊಲೆ ಮಾಡಿದ್ದನು. ಚಂದ್ರ 6 ತಿಂಗಳ ಹಿಂದೆ ಹೆಂಡತಿ ಜತೆಗೂ ಜಗಳವಾಡಿ ಹೆಂಡತಿಯನ್ನು ಮನೆಯಿಂದ ಓಡಿಸಿದ್ದನು.

ಇದನ್ನು ಓದಿ: ಬೆಂಗಳೂರು: ಜಿಎಸ್​​ಟಿ ಕಚೇರಿ ಕಟ್ಟಡದಿಂದ ಜಿಗಿದು ಆಫೀಸ್​ ಬಾಯ್ ಆತ್ಮಹತ್ಯೆ

ಚಂದ್ರ ಮೇ 26ರಂದು ಮನೆಯಲ್ಲಿ ಮದ್ಯ ಸೇವನೆ ವೇಳೆ ನಾರಾಯಣಸ್ವಾಮಿ ಜೊತೆ ಜಗಳವಾಡಿ ಚಾಕುವಿನಿಂದ ಇರಿದು ಕೊಂದು ಶವ ಬಿಟ್ಟು ಪರಾರಿಯಾಗಿದ್ದನು. ಆಟವಾಡುತ್ತಿದ್ದ ಮಕ್ಕಳು ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ನೇಹಿತರು 4 ವರ್ಷಗಳ ಹಿಂದೆಯೂ ಜಗಳವಾಡಿಕೊಂಡಿದ್ದರು. ಠಾಣೆ ಮೆಟ್ಟಿಲೇರಿದ ನಂತರ ಚಂದ್ರ, ನಾರಾಯಣಸ್ವಾಮಿ ಒಂದಾಗಿದ್ದರು. ಮತ್ತೆ ಕುಡಿದ ಮತ್ತಿನಲ್ಲಿ ಜಗಳವಾಡಿಕೊಂಡು ಒಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ.

ಇದನ್ನು ಓದಿ: ಆಕ್ಸಿಡೆಂಟ್ ಎಂದು ಬಿಂಬಿಸಿದ್ದ ಪ್ರಕರಣಕ್ಕೆ ಟ್ವಿಸ್ಟ್; ಮದ್ಯ ಕುಡಿಸಿ ಸ್ನೇಹಿತನನ್ನೇ ಕೊಲೆಗೈದಿದ್ದ ಆರೋಪಿಗಳು ಅರೆಸ್ಟ್!

ಮೈಸೂರಿನಲ್ಲಿ ನೀರಿನ ತೊಟ್ಟಿಗೆ ಬಿದ್ದು ಬಾಲಕಿ ಸಾವು

ಮೈಸೂರು: ನಗರದಲ್ಲಿ ನಿರ್ಮಾಣ ಹಂತದ ಕಟ್ಟಡದ ನೀರಿನ ತೊಟ್ಟಿಗೆ ಬಿದ್ದು ಬಾಲಕಿ ಸಾವನ್ನಪ್ಪಿರುವ ಘಟನೆ ನಗರದ ಹೆಬ್ಬಾಳ ಬಡಾವಣೆಯಲ್ಲಿ ನಡೆದಿದೆ. ಮಹಾಲಕ್ಷ್ಮೀ (3) ಮೃತ ದುರ್ದೈವಿ. ಮಹಾಲಕ್ಷ್ಮೀ ತಮಿಳುನಾಡು ಮೂಲದ ದಂಪತಿಯ ಪುತ್ರಿಯಾಗಿದ್ದಾರೆ. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ