ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ, ಸಿಇಒ ಹತ್ಯೆ ಪ್ರಕರಣ; ಜೋಕರ್ ಫೆನಿಕ್ಸ್ ಸೇರಿ ಮೂವರ ಬಂಧನ

ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ, ಸಿಇಒ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನ ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಫಿಲೆಕ್ಸ್​, ಶಿವು ಮತ್ತು ಬೆಂಗಳೂರಿನ ರೂಪೇನಾ ಅಗ್ರಹಾರದ ವಿನಯ್​ ರೆಡ್ಡಿ ಬಂಧಿತ ಆರೋಪಿಗಳು.

ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ, ಸಿಇಒ ಹತ್ಯೆ ಪ್ರಕರಣ; ಜೋಕರ್ ಫೆನಿಕ್ಸ್ ಸೇರಿ ಮೂವರ ಬಂಧನ
ಜೋಕರ್ ಫೆನಿಕ್ಸ್
Follow us
Shivaprasad
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 12, 2023 | 7:27 AM

ಬೆಂಗಳೂರು: ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ, ಸಿಇಒ ಹತ್ಯೆ(Murder) ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನ ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಫಿಲೆಕ್ಸ್​, ಶಿವು ಮತ್ತು ಬೆಂಗಳೂರಿನ ರೂಪೇನಾ ಅಗ್ರಹಾರದ ವಿನಯ್​ ರೆಡ್ಡಿ ಬಂಧಿತ ಆರೋಪಿಗಳು. ನಿನ್ನೆ(ಜು.11) ಸಂಜೆ ಪಂಪಾ ಬಡಾವಣೆಯಲ್ಲಿರುವ ಏರೋನಿಕ್ಸ್ ಇಂಟರ್ನೆಟ್ ಕಂಪನಿಗೆ ಆಗಮಿಸಿ ಎಂಡಿ ಫಣೀಂದ್ರ ಸುಬ್ರಹ್ಮಣ್ಯ ಮತ್ತು ಸಿಇಒ ವಿನುಕುಮಾರ್ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿ, ಕೊಲೆ ಮಾಡಿ ಪರಾರಿಯಾಗಿದ್ದರು. ಇದೀಗ ಮೂವರು ಆರೋಪಿಗಳು ಅರೆಸ್ಟ್ ಆಗಿದ್ದಾರೆ.

ಘಟನೆ ವಿವರ

ಇನ್ನು ಆರೋಪಿ ಜೋಕರ್ ಫೆನಿಕ್ಸ್ ಏರೋನಿಕ್ಸ್ ಇಂಟರ್ನೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ಎಂಡಿ ಫಣೀಂದ್ರ ಸುಬ್ರಹ್ಮಣ್ಯ, ಫಿಲೆಕ್ಸ್​ನನ್ನು ಕೆಲಸದಿಂದ ತೆಗೆದು ಹಾಕಿದ್ದ. ಜೊತೆಗೆ ಕೆಲಸದ ವೇಳೆ ಫಿಲೆಕ್ಸ್​ನನ್ನು ನಿಂದಿಸುತ್ತಿದ್ದ ಆರೋಪ ಮಾಡಿದ್ದ ಇತ, ಇದೇ ದ್ವೇಷದ ಹಿನ್ನೆಲೆ ಫಣೀಂದ್ರನನ್ನು ಕೊಲೆ ಮಾಡಿದ್ದಾನೆ. ಇನ್ನು ಈ ವೇಳೆ ಎಂಡಿಯನ್ನ ರಕ್ಷಿಸಲು ಬಂದ ವಿನುಕುಮಾರ್ ಮೇಲೂ ಹಲ್ಲೆ ಮಾಡಿ ಕೊಲೆ ಮಾಡಿದ್ದ. ಇದೀಗ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ತುಮಕೂರು ಜಿಲ್ಲೆಯ ಕುಣಿಗಲ್​ನಲ್ಲಿ ಬಂಧಿಸಲಾಗಿದೆ.

ಇದನ್ನೂ ಓದಿ:Bengaluru: ಹಾಡಹಗಲೇ ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ ಮತ್ತು ಸಿಇಒ ಕೊಲೆ ಮಾಡಿದ ಟಿಕ್ ಟಾಕ್ ಸ್ಟಾರ್ ಜೋಕರ್

ಕೊಲೆ ಮಾಡಿ ಎಸ್ಕೇಪ್​ ಆಗಿದ್ದವರು ಕುಣಿಗಲ್​ನಲ್ಲಿ ಲಾಕ್​

ಇನ್ನು ನಿನ್ನೆ ಕೊಲೆ ಪ್ರಕರಣ ದಾಖಲಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಅಮೃತಹಳ್ಳಿ ಠಾಣೆಯ ಪೊಲೀಸರು ಆರೋಪಿಗಳ ಪತ್ತೆಗೆ ಈಶಾನ್ಯ ವಿಭಾಗ ಡಿಸಿಪಿ ಲಕ್ಷ್ಮೀ ಪ್ರಸಾದ್ ಮಾರ್ಗದರ್ಶನದಲ್ಲಿ 5 ತಂಡ ರಚಿಸಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಗಳ ಹಿಂದೆ ಬಿದ್ದಿದ್ದರು. ಆದರೆ, ಆರೋಪಿಗಳು ಕೊಲೆ ಮಾಡಿ ತುಮಕೂರಿನ ಕುಣಿಗಲ್​ನಲ್ಲಿ ತಲೆಮರೆಸಿಕೊಂಡಿದ್ದರು. ಇದರ ಖಚಿತ ಮಾಹಿತಿ ಮೇರೆಗೆ ಹೋಗಿ ಎಸಿಪಿ ರಂಗಪ್ಪ ನೇತೃತ್ವದ ತಂಡದಿಂದ ಮೂವರನ್ನು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನು ಆರೋಪಿಗಳಾದ ವಿನಯ್ ಹಾಗೂ ಶಿವು ಎನ್ನುವವರಿಗೆ ಹತ್ಯೆ ಮಾಡುವ ಯಾವುದೇ ಉದ್ದೇಶ ಇರಲಿಲ್ಲ, ಫಿಲೆಕ್ಸ್ ಮಾತನ್ನ ಕೇಳಿ ಹತ್ಯೆಗೆ ಕೈ ಜೋಡಿಸಿದ್ದಾರೆ. ಇದೀಗ ಪೊಲೀಸರು ಟೆಕ್ನಿಕಲ್ ಅನಾಲಿಸಿಸ್ ಅಧರಿಸಿ ಆರೋಪಿಗಳನ್ನ ಬಂಧಿಸಿದ್ದಾರೆ. ಜೊತೆಗೆ ಕೊಲೆ ನಿಖರ ಕಾರಣ ಕುರಿತು ವಿಚಾರಣೆ ನಡೆಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ