ಕರ್ನಾಟದಲ್ಲಿ ಮತ್ತೊಂದು ಅಮಾನವೀಯ ಘಟನೆ: ಹಸುವಿನ ತಲೆ ಕಡಿದು ದೇಹ ಕೊಂಡೊಯ್ದ ದುರುಳರು

| Updated By: ರಮೇಶ್ ಬಿ. ಜವಳಗೇರಾ

Updated on: Jan 19, 2025 | 3:32 PM

ಬೆಂಗಳೂರಿನ ಚಾಮರಾಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲು ಕೊಯ್ದ ಕ್ರೌರ್ಯ ಮರೆದಿರುವ ಪ್ರಕರಣ ಮಾಸುವ ಮುನ್ನವೇ ಮೈಸೂರಿನಲ್ಲಿ ಮೈಸೂರಿನಲ್ಲಿ ಕಿಡಿಗೇಡಿಗಳು ಹಸುವಿನ ಬಾಲಕ್ಕೆ ಮಚ್ಚು ಹೊಡೆದು ಗಾಯಗೊಳಿಸಿರುವ ಪ್ರಕರಣ ಬೆಳಗೆ ಬಂದಿತ್ತು. ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲೂ ಸಹ ಅಮಾನವೀಯ ಘಟನೆ ನಡೆದಿದ್ದು, ಗರ್ಭ ಧರಿಸಿದ ಹಸುವಿನ ತಲೆ ಕಡಿದು ದೇಹ ಕೊಂಡೊಯ್ದಿದ್ದಾರೆ.

ಕರ್ನಾಟದಲ್ಲಿ ಮತ್ತೊಂದು ಅಮಾನವೀಯ ಘಟನೆ: ಹಸುವಿನ ತಲೆ ಕಡಿದು ದೇಹ ಕೊಂಡೊಯ್ದ ದುರುಳರು
Follow us on

ಕಾರವಾರ, (ಜನವರಿ 19): ಕರ್ನಾಟಕದಲ್ಲಿ ಹಸುಗಳ ಮೇಲೆ ಕ್ರೌರ್ಯ ಮರೆಯುತ್ತಿರುವ ಪ್ರಕರಣಗಳು ಹೆಚ್ವುತ್ತಲೇ ಇವೆ. ಮೊನ್ನೆ ಅಷ್ಟೇ ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕನಗರದಲ್ಲಿ ಆಗಂತುಕರು ಹಾಲು ತುಂಬಿದ ಮೂರು ಹಸುಗಳ ಕೆಚ್ಚಲು ಕೊಯ್ಯುವ ಮೂಲಕ ಅಟ್ಟಹಾಸ ಮೆರೆದಿದ್ದರು. ಇದರ ಬೆನ್ನಲ್ಲೇ ಮೈಸೂರಿನಲ್ಲೂ ಸಹ ಮಚ್ಚಿನಿಂದ ಹಸುವಿನ ಬಾಲಕ್ಕೆ ಹಾನಿಗೊಳಿಸಿದ್ದರು. ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಗರ್ಭ ಧರಿಸಿದ್ದ ಹಸುವಿನ ತಲೆ ಕಡಿದು ದೇಹ ಕೊಂಡೊಯ್ದಿರುವ ಪ್ರಕರಣ ಬೆಳಕಿಗೆ ಬಂದಿದೆ.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸಾಲ್ಕೋಡು ಗ್ರಾಮದಲ್ಲಿ ಕೃಷ್ಣ ಆಚಾರಿ ಎಂಬುವವರಿಗೆ ಸೇರಿದ ಹಸುವಿನ ತಲೆ ಕಡಿದು ಬಳಿಕ ಅದರ ದೇಹವನ್ನು ಕೊಂಡೊಯ್ದಿದ್ದಾರೆ. ನಿನ್ನೆ (ಜನವರಿ 18) ಮನೆಯಿಂದ ಮೇಯಲು ಹೋಗಿದ್ದ ಹಸು ರಾತ್ರಿಯಾದರೂ ಸಹ ವಾಪಸ್ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಇಂದು (ಜನವರಿ 19) ಬೆಳಿಗ್ಗೆ ಮಾಲೀಕ ಕೃಷ್ಣ ಆಚಾರಿ ಅವರು ಹಸುವಿಗಾಗಿ ಹುಡಕಾಟ ನಡೆಸಿದ್ದಾರೆ. ಆ ವೇಳೆ ಹಸುವಿನ ರಕ್ತ, ಕಾಲು ಹಾಗೂ ರುಂಡ ಪತ್ತೆಯಾಗಿದೆ. ಇದನ್ನು ನೋಡಿ ಹಸುವಿನ ಮಾಲೀಕ ಕೃಷ್ಣ ಆಚಾರಿ ಬೆಚ್ಚಿಬಿದ್ದಿದ್ದಾರೆ.

ಇದನ್ನೂ ಓದಿ: ಚಾಮರಾಜಪೇಟೆ ಬೆನ್ನಲ್ಲೇ ಮೈಸೂರಿನಲ್ಲಿ ಕರುವಿನ ಮೇಲೆ ದಾಳಿ: ಮಾರಕಾಸ್ತ್ರದಿಂದ ಬಾಲ ತುಂಡರಿಸಿ ದುಷ್ಕರ್ಮಿಗಳು ಪರಾರಿ

ದುರುಳದು ಹಸುವಿ‌ನ ರುಂಡ ಬೇರ್ಪಡಿಸಿ, ಕಾಲು ಕತ್ತರಿಸಿ ದೇಹವನ್ನು ಮಾತ್ರ ತೆಗೆದುಕೊಂಡು ಹೋಗಿದ್ದಾರೆ. ಭಕ್ಷಣೆಗಾಗಿ ಹಸುವಿನ ದೇಹವನ್ನು ಮಾತ್ರ ಕೊಂಡೊಯ್ದಿರುವ ಶಂಕೆ ವ್ಯಕ್ತವಾಗಿದೆ. ಕಾಡು ಪ್ರಾಣಿ ದಾಳಿ ಮಾಡಿದ್ರೆ ಹಸುವಿನ ದೇಹದ ಭಾಗಗಳು ಪ್ರತ್ಯೇಕವಾಗಿ ತುಂಡು ತುಂಡಾಗಿ ಬಿಳುವುದಿಲ್ಲ. ಇದು ಮಾಂಸ ಭಕ್ಷಣೆಗೆಂದೇ ಮಾಡಿದ ಹೇಯ ಕೃತ್ಯ ಎಂದು ಸ್ಥಳೀಯರು ಆರೋಪಿಸಿದ್ದು, ಗರ್ಭ ಧರಿಸಿದ್ದ ಹಸುವನ್ನು ಕಳೆದುಕೊಂಡು ಮಾಲೀಕ ಕೃಷ್ಣ ಆಚಾರಿ ಆಘಾತಕ್ಕೊಳಗಾಗಿದ್ದಾರೆ.

ಹದಿನೈದು ದನಗಳು ನಾಪತ್ತೆ

ಸಾಲ್ಕೋಡು ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕಳೆದ ಒಂದು ತಿಂಗಳಲ್ಲಿ ಮೇಯಲು ಬಿಟ್ಟಿದ್ದ ಹದಿನೈದು ದನಗಳು ನಾಪತ್ತೆಯಾಗಿವೆ. ಚಿರತೆ ದಾಳಿ ಮಾಡಿ ಒಯ್ದಿರುವ ಶಂಕೆಯಲ್ಲಿ ಮಾಲೀಕರು ಸುಮ್ಮನಾಗಿದ್ದರು. ಆದರೆ, ಈಗ ಮಾಂಸಕ್ಕಾಗಿ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದ್ದು, ಕಳೆದ ಒಂದು ತಿಂಗಳಿನಿಂದ ಹಸುಗಳ ಮೇಲೆ ನಿರಂತರವಾಗಿ ಕೃತ್ಯ ನಡೆಯುತ್ತಿದೆ. ಆದ್ರೆ ಇದೆ ಮೊದಲ ಬಾರಿಗೆ ಸ್ಥಳದಲ್ಲೇ ಆಕಳನ್ನು ಕಡಿದಿದ್ದಾರೆ.

ರಕ್ಷಣೆಗೆ ಸ್ಥಳೀಯರ ಆಗ್ರಹ

ಇನ್ನು ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಹಸುಗಳನ್ನು ಕಳೆದುಕೊಂಡ ಮಾಲೀಕರು ನಮಗೆ ಹಾಗೂ ನಮ್ಮ ಪ್ರಾಣಿಗಳಿಗೆ ರಕ್ಷಣೆ ಕೊಡುವಂತೆ ಆಗ್ರಹಿಸಿದ್ದಾರೆ. ಮೇವಿಗಾಗಿ ಕಾಡಿನಲ್ಲಿ ಹೊಗಲು ಭಯ ಆಗುತ್ತಿದೆ. ದನ ಕಡಿಯುವ ಜನ ನಾಳೆ ನಮ್ಮನ್ನು ಕಡಿಬಹುದು. ದಯವಿಟ್ಟು ಪೊಲೀಸ್ರು ರಕ್ಷಣೆ ಕೊಡಬೇಕೆಂದು ಒತ್ತಾಯಿಸಿದ್ದಾರೆ.

ಮೊನ್ನೆ ಅಷ್ಟೇ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಮೂರು ಹಸುವಿನ ಜೆಚ್ಚಲು ಕೊಯ್ದು ಅಟ್ಟಹಾಸ ಮರೆದಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ಪ್ರತಿಭಟನೆ ಮಾಡಿದ್ದವು. ಬಳಿಕ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:57 pm, Sun, 19 January 25