Crime News: 6 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದರೂ ತೃಪ್ತನಾಗದ ವ್ಯಕ್ತಿಯಿಂದ ಮೇಕೆಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದಲ್ಲಿ ಒಂದು ಭಯಾನಕ ಘಟನೆ ನಡೆದಿದೆ. ಸರ್ಕಾರಿ ನೌಕರನು ಮೊದಲು ಬುಲಂದ್‌ಶಹರ್‌ನಲ್ಲಿ 6 ವರ್ಷದ ಬಾಲಕಿಗೆ ಕಿರುಕುಳ ನೀಡಿದ್ದಾನೆ, ನಂತರ ಮೇಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಈ ವಿಡಿಯೋ ಹೊರಬಿದ್ದ ನಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Crime News: 6 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದರೂ ತೃಪ್ತನಾಗದ ವ್ಯಕ್ತಿಯಿಂದ ಮೇಕೆಯ ಮೇಲೆ ಅತ್ಯಾಚಾರ
ಸಾಂದರ್ಭಿಕ ಚಿತ್ರ

Updated on: Aug 13, 2024 | 8:28 PM

ಬುಲಂದ್​ಶಹರ್: ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಇಂದು 6 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ನಂತರ ಸರ್ಕಾರಿ ನೌಕರನೊಬ್ಬ ಮೇಕೆ ಮೇಲೆಯೂ ಅತ್ಯಾಚಾರವೆಸಗಿದ್ದಾನೆ. ಮನ ಕಲಕುವ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ 6 ವರ್ಷದ ಬಾಲಕಿಯ ಮೇಲೆ ಆಕೆಯ ಮನೆಯಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಅಷ್ಟಕ್ಕೂ ತೃಪ್ತನಾಗದ ಆತ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಮೇಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ.

ಈ ರೀತಿ ಅತ್ಯಾಚಾರವೆಸಗಿದ ಆರೋಪಿಯನ್ನು 50 ವರ್ಷದ ಗಜೇಂದ್ರ ಸಿಂಗ್ ಎಂದು ಗುರುತಿಸಲಾಗಿದ್ದು, ಎಡಿಒ ಆಗಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ನೌಕರನಾಗಿದ್ದಾನೆ. ತನ್ನ ಪರಿಚಯಸ್ಥರ ಮನೆಗೆ ಹೋಗಿದ್ದ ಗಜೇಂದ್ರ ಸಿಂಗ್ ಅಲ್ಲಿ ಒಬ್ಬಳೇ ಇದ್ದ 6 ವರ್ಷದ ಹುಡುಗಿಯನ್ನು ಕಂಡು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ಇದರಿಂದ ತೃಪ್ತನಾಗದ ಆತ ಮನೆಯಲ್ಲಿದ್ದ ಕಂಬಕ್ಕೆ ಕಟ್ಟಿ ಹಾಕಿದ್ದ ಮೇಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ.

ಇದನ್ನೂ ಓದಿ: 3 ವರ್ಷದ ಬಾಲಕಿ ಮೇಲೆ ನರ್ಸರಿ ಸ್ಕೂಲ್ ವ್ಯಾನ್ ಚಾಲಕನಿಂದ ಅತ್ಯಾಚಾರ!


ಎಕ್ಸ್‌ನಲ್ಲಿ ಪೋಸ್ಟ್ ಮಾಡಲಾದ ಈ ಘಟನೆಯ ವೀಡಿಯೊಗಳಲ್ಲಿ, ಗಜೇಂದ್ರ ಸಿಂಗ್ ಕೋಟ್ ಮೇಲೆ ಮಲಗಿದ್ದು ತನ್ನ ಖಾಸಗಿ ಭಾಗವನ್ನು ಸ್ಪರ್ಶಿಸಲು ಹುಡುಗಿಯನ್ನು ಕೇಳುತ್ತಿರುವುದು ಕಂಡುಬರುತ್ತದೆ. ಅವನು ಹುಡುಗಿಯನ್ನು ಚುಂಬಿಸುವುದನ್ನು ಸಹ ಕಾಣಬಹುದು. ಇನ್ನೊಂದು ವಿಡಿಯೋದಲ್ಲಿ ಆರೋಪಿ ಮೇಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವುದನ್ನು ಕಾಣಬಹುದು.


ಇದನ್ನೂ ಓದಿ: ರಾಜಸ್ಥಾನ: ಬೈಕ್​​ಗೆ ಪತ್ನಿಯನ್ನು ಕಟ್ಟಿ ಎಳೆದೊಯ್ದ ಪತಿ, ವಿಡಿಯೊ ವೈರಲ್

ಈ ವೀಡಿಯೊಗಳಿಗೆ ಪ್ರತಿಕ್ರಿಯಿಸಿದ ಅಹ್ಮದ್‌ಗಢ ಪೊಲೀಸರು, ಸಹರಾನ್‌ಪುರ ನಿವಾಸಿ ಮತ್ತು ಶಿಕರ್‌ಪುರ ಬ್ಲಾಕ್‌ನಲ್ಲಿ ಸಹಾಯಕ ಅಭಿವೃದ್ಧಿ ಅಧಿಕಾರಿಯಾಗಿ ನೇಮಕಗೊಂಡ ಆರೋಪಿಯನ್ನು 6 ವರ್ಷದ ಬಾಲಕಿಗೆ ಕಿರುಕುಳ ನೀಡಿ ನಂತರ ಮೇಕೆಯ ಜೊತೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ ಆರೋಪದಲ್ಲಿ ಬಂಧಿಸಲಾಗಿದೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಆತನ ಮನೆಯ ಪಕ್ಕದಲ್ಲಿ ವಾಸವಾಗಿರುವ ವ್ಯಕ್ತಿಯೊಬ್ಬರು ಈ ವಿಡಿಯೋ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Loading...
Unable to load recommendations.
Follow Us