AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ: ಎಐಎಂಐಎಂ ಮುಖಂಡ ಅಬ್ದುಲ್ ಸಲಾಂನ ಗುಂಡಿಕ್ಕಿ ಹತ್ಯೆ

ಸೋಮವಾರ ತಡರಾತ್ರಿ ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖಂಡ ಅಬ್ದುಲ್ ಸಲಾಂ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಡಿಸೆಂಬರ್ ನಂತರ ಬಿಹಾರದಲ್ಲಿ ಹತ್ಯೆಗೀಡಾದ ಎರಡನೇ ಎಐಎಂಐಎಂ ನಾಯಕ ಸಲಾಮ್. ನವೆಂಬರ್ 2022 ರಲ್ಲಿ ಗೋಪಾಲ್‌ಗಂಜ್ ವಿಧಾನಸಭಾ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ವಿಫಲರಾದ ಸಲಾಂ ಅವರು ರೈಲು ಹತ್ತಲು ಹೋಗುತ್ತಿದ್ದಾಗ ಘಟನೆ ನಡೆದಿದೆ.

ಬಿಹಾರ: ಎಐಎಂಐಎಂ ಮುಖಂಡ ಅಬ್ದುಲ್ ಸಲಾಂನ ಗುಂಡಿಕ್ಕಿ ಹತ್ಯೆ
ಅಬ್ದುಲ್ Image Credit source: India Today
ನಯನಾ ರಾಜೀವ್
|

Updated on: Feb 13, 2024 | 10:26 AM

Share

ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಎಐಎಂಐಎಂ(AIMIM) ಮುಖಂಡ ಅಬ್ದುಲ್ ಸಲಾಂ ಅಲಿಯಾಸ್ ಅಸ್ಲಂ ಮುಖಿಯಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಗೋಪಾಲಗಂಜ್ ಉಪಚುನಾವಣೆಯಲ್ಲಿ ಅಬ್ದುಲ್ ಸಲಾಂ ಎಐಎಂಐಎಂ ಅಭ್ಯರ್ಥಿಯಾಗಿದ್ದರು. ಜತೆಗೆ ಪಕ್ಷದ ರಾಜ್ಯ ಸಹ ಕಾರ್ಯದರ್ಶಿಯೂ ಆಗಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿಯು ಬಿಹಾರ ಸರ್ಕಾರವನ್ನು ತೀವ್ರವಾಗಿ ಖಂಡಿಸಿದ್ದಾರೆ.

ನಗರ ಪೊಲೀಸ್ ಠಾಣೆ ವ್ಯಾಪ್ತಿಯ ತುರ್ಕಹಾ ಸೇತುವೆ ಬಳಿ ಈ ಘಟನೆ ನಡೆದಿದೆ. ಮಾಹಿತಿ ಪ್ರಕಾರ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಕ್ರಿಮಿನಲ್ ಗಳು ಈ ಕೃತ್ಯ ಎಸಗಿದ್ದಾರೆ. ಅದೇ ಸಮಯದಲ್ಲಿ, ಗೋಪಾಲಗಂಜ್ ಪೊಲೀಸರ ಎಸ್‌ಐಟಿ ಈ ಕೊಲೆ ಪ್ರಕರಣದ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದಿದ್ದು, ಅವರನ್ನು ನಿರಂತರವಾಗಿ ವಿಚಾರಣೆ ನಡೆಸಲಾಗುತ್ತಿದೆ. ಪೊಲೀಸರು ಆರೋಪಿಗಳ ಬೈಕ್ ವಶಪಡಿಸಿಕೊಂಡಿದ್ದಾರೆ.

ವೈಯಕ್ತಿಕ ದ್ವೇಷದಿಂದ ಕೊಲೆ ಮಾಡಿರುವ ಶಂಕೆ ವೈಯಕ್ತಿಕ ದ್ವೇಷದಿಂದ ಕೊಲೆ ನಡೆದಿದೆ ಎಂದು ಎಸ್ಪಿ ಸ್ವರ್ಣ್ ಪ್ರಭಾತ್ ಹೇಳಿದ್ದಾರೆ. ಆರೋಪಿಗಳನ್ನು ಶೀಘ್ರವೇ ಬಂಧಿಸಿ ಕೊಲೆ ಪ್ರಕರಣವನ್ನು ಬಯಲಿಗೆಳೆಯಲಾಗುವುದು ಎಂದು ಹೇಳಿದರು.

ಮತ್ತಷ್ಟು ಓದಿ: ಫೇಸ್​ಬುಕ್​ ಲೈವ್​ನಲ್ಲಿ ಠಾಕ್ರೆ ಬಣದ ನಾಯಕನ ಹತ್ಯೆ ಮಾಡಿ, ತಾನೂ ಗುಂಡು ಹಾರಿಸಿಕೊಂಡ ಆರೋಪಿ

ಏತನ್ಮಧ್ಯೆ, ಗೋಪಾಲಗಂಜ್ ಸದರ್ ಎಸ್‌ಡಿಪಿಒ ಪ್ರಾಂಜಲ್ ತ್ರಿಪಾಠಿ ಅವರು ತನಿಖೆ ಮುಂದುವರೆದಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಹಿಡಿಯಲಾಗುವುದು ಎಂದು ಹೇಳಿದ್ದಾರೆ. ಮತ್ತೊಂದೆಡೆ, ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಘಟನೆಯನ್ನು ಖಂಡಿಸಿದ್ದಾರೆ ಮತ್ತು ನಿತೀಶ್ ಸರ್ಕಾರವನ್ನು ದೂರಿದ್ದಾರೆ.

ಇದೇ ವೇಳೆ ಆರ್ ಜೆಡಿ ಜಿಲ್ಲಾಧ್ಯಕ್ಷ ದಿಲೀಪ್ ಸಿಂಗ್ ಕೂಡ ಹತ್ಯಾಕಾಂಡವನ್ನು ತೀವ್ರವಾಗಿ ಖಂಡಿಸಿದ್ದಾರೆ. ಅಸ್ಲಂ ಪ್ರಮುಖ ರಾಜಕಾರಣಿ ಮಾತ್ರವಲ್ಲದೆ ದೊಡ್ಡ ಉದ್ಯಮಿಯೂ ಆಗಿದ್ದರು ಎಂದು ಹೇಳಿದರು. ಅಪರಾಧಿಗಳನ್ನು ಆದಷ್ಟು ಬೇಗ ಬಂಧಿಸಬೇಕು ಎಂದು ಪೊಲೀಸ್ ಆಡಳಿತವನ್ನು ಆಗ್ರಹಿಸಿದರು. ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹೇಳಿದರು.

ಅಬ್ದುಲ್ ಸಲಾಂ ಅಲಿಯಾಸ್ ಅಸ್ಲಾಂ ಮುಖಿಯಾ ಅವರು ಗೋಪಾಲ್ಗಂಜ್ ವಿಧಾನಸಭೆಯಿಂದ ಚುನಾವಣೆಗೆ ಸ್ಪರ್ಧಿಸಿದ್ದಾರೆ ಮತ್ತು ಪ್ರಸ್ತುತ ಮದ್ರಸಾ ಇಸ್ಲಾಮಿಯಾ ಕಾರ್ಯದರ್ಶಿಯಾಗಿದ್ದರು.  ಥಾವೆ ಜಂಕ್ಷನ್‌ನಲ್ಲಿ ಲಖನೌಗೆ ರೈಲು ಹತ್ತಲು ಆತ್ಮೀಯ ಸ್ನೇಹಿತ ಮುನ್ನಾ ಅವರೊಂದಿಗೆ ಮನೆಯಿಂದ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ