ಪ್ರಿಯಕರನ ಭೇಟಿಗೆ ದುಬೈನಿಂದ ಬೆಂಗಳೂರಿಗೆ ಬಂದಿದ್ದ ಗಗನಸಖಿ ಅಪಾರ್ಟ್‌ಮೆಂಟ್​ ಮೇಲಿಂದ ಬಿದ್ದು ಸಾವು

ಪ್ರಿಯಕರನ ನೋಡಲು ದುಬೈನಿಂದ ಬೆಂಗಳೂರಿಗೆ ಬಂದಿದ್ದ ಗಗನಸಖಿ ಅಪಾರ್ಟ್‌ಮೆಂಟ್​ನ ನಾಲ್ಕನೇ ಮಹಡಿ ಮೇಲಿಂದ ಬಿದ್ದು ಮೃತಪಟ್ಟಿದ್ದಾಳೆ. ಈ ಸಾವಿನ ಸುತ್ತ ಅನುಮಾನಗಳು ಹುಟ್ಟಿಕೊಂಡಿದ್ದು, ಇದು ಆತ್ಮಹತ್ಯೆಯೋ, ಕೊಲೆಯೋ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಿಯಕರನ ಭೇಟಿಗೆ ದುಬೈನಿಂದ ಬೆಂಗಳೂರಿಗೆ ಬಂದಿದ್ದ ಗಗನಸಖಿ ಅಪಾರ್ಟ್‌ಮೆಂಟ್​ ಮೇಲಿಂದ ಬಿದ್ದು ಸಾವು
ಗಗನಸಖಿ ಅರ್ಚನಾ
Edited By:

Updated on: Mar 13, 2023 | 7:55 AM

ಬೆಂಗಳೂರು: ಪ್ರಿಯಕರನ ಅಪಾರ್ಟ್‌ಮೆಂಟ್‌ನ ನಾಲ್ಕನೇ ಮಹಡಿಯಿಂದ ಬಿದ್ದು ಗಗನಸಖಿ(Air hostess) ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹಿಮಾಚಲ ಪ್ರದೇಶದ 28 ವರ್ಷದ ಗಗನಸಖಿ ಅರ್ಚನಾ ಮೃತಪಟ್ಟಿರುವ ದುರ್ವೈವಿ. ಸಾಫ್ಟ್ ವೇರ್ ಇಂಜಿನಿಯರ್ ಕೇರಳ ಮೂಲದ ಆದೇಶ್ ಹಾಗೂ ಗಗನಸಖಿ ಅರ್ಚನಾ ಪ್ರೀತಿಸುತ್ತಿದ್ದರು. ಆದ್ರೆ, ಅರ್ಚನಾ ದುಬೈನಲ್ಲಿ ಕೆಲಸ ಮಾಡುತ್ತಿದ್ದರೆ, ಆದೇಶ್​ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ. ಈ ಹಿನ್ನೆಲೆಯಲ್ಲಿ ಅರ್ಚನಾ ಮೊನ್ನೇ ದುಬೈನಿಂದ ಆದೇಶ್​ನನ್ನು ನೋಡಲು ಬೆಂಗಳೂರಿಗೆ ಬಂದಿದ್ದಾಳೆ. ಆದ್ರೆ, ಅದೇನು ಆಯ್ತೋ ಏನೋ ಆದೇಶ್ ನೆಲೆಸಿದ್ದ ಅಪಾರ್ಟ್‌ಮೆಂಟ್‌ನ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾಳೆ. ಈ ಸಾವಿನ ಸುತ್ತ ಅನುಮಾನಗಳು ಹುಟ್ಟುಕೊಂಡಿದ್ದು, ಇದು ಆತ್ಮಹತ್ಯೆಯೋ, ಕೊಲೆಯೋ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ದುಬೈನಲ್ಲಿ ಅರ್ಚನಾ ಗಗನಸಖಿಯಾಗಿ ಉದ್ಯೋಗಿಯಾಗಿದ್ದರು. ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಾಣಿಸುತ್ತದೆ. ಆದರೆ, ಆದೇಶ್‌ ಈಕೆಯನ್ನು ಮೇಲಿನಿಂದ ತಳ್ಳಿರುವ ಸಾಧ್ಯತೆಯೂ ಇದೆ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ನಡೆದ ಸಮಯದಲ್ಲಿ ಆದೇಶ್‌ ಅದೇ ಫ್ಲಾಟ್‌ನಲ್ಲಿದ್ದ. ಆತನೇ ಪೊಲೀಸರಿಗೆ ಕರೆ ಮಾಡಿ ಅರ್ಚನಾ ಮಹಡಿಯಿಂದ ಬಿದ್ದಿರುವ ಮಾಹಿತಿಯನ್ನು ಪೊಲೀಸರಿಗೆ ತಿಳಿಸಿದ್ದಾನೆ. ತಡರಾತ್ರಿ ಇಬ್ಬರ ನಡುವೆ ಏನಾಗಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಈ ಕುರಿತು ಅಪಾರ್ಟ್‌ ಮೆಂಟ್ ಸೇರಿದಂತೆ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ಕ್ರೈಂ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:45 am, Mon, 13 March 23