ಸರ್ಕಾರಿ ವಾಹನದಲ್ಲಿಯೇ ಮದ್ಯ ಸಾಗಾಟ, ತನಿಖೆ ನಡೆಸಿದ್ದ ಎಸಿಪಿ ಅಮಾನತು!

ಬೆಂಗಳೂರು: ಕೊರೊನಾ ವಿರುದ್ಧದ ಹೋರಾಟಕ್ಕೆ ಇಡೀ ದೇಶವನ್ನೇ ಲಾಕ್​ಡೌನ್ ಮಾಡಲಾಗಿದೆ. ಈ ನಡುವೆ ಎಲ್ಲೂ ಮದ್ಯದಂಗಡಿಗಳು ತೆರೆದಿಲ್ಲ. ಇದರಿಂದ ಮದ್ಯಪ್ರಿಯರು ಪರಿತಪಿಸುವಂತಾಗಿದೆ. ಆದರೆ ಬೇಸರದ ಸಂಗತಿ ಎಂದರೆ ಸರ್ಕಾರಿ ವಾಹನದಲ್ಲಿಯೇ ಅಕ್ರಮವಾಗಿ ಮದ್ಯ ಸಾಗಾಟ ಮಾಡಲಾಗುತ್ತಿದೆ. ಸರ್ಕಾರಿ ಅಧಿಕಾರಿಗಳೇ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಈ ಮದ್ಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರಿಗೆ ಸೇರಿದ್ದು ಎಂದು ಹೇಳಲಾಗುತ್ತಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ಪೊಲೀಸರ ತಪಾಸಣೆ ವೇಳೆ ಸರ್ಕಾರಿ ಜಿಎಸ್‌ಟಿ ವಾಹನದಲ್ಲಿ ಮದ್ಯ ಸಾಗಿಸುತ್ತಿದ್ದರು. ಆರೋಪಿಗಳಾದ […]

ಸರ್ಕಾರಿ ವಾಹನದಲ್ಲಿಯೇ ಮದ್ಯ ಸಾಗಾಟ, ತನಿಖೆ ನಡೆಸಿದ್ದ ಎಸಿಪಿ ಅಮಾನತು!
Follow us
ಸಾಧು ಶ್ರೀನಾಥ್​
|

Updated on:Apr 24, 2020 | 4:56 PM

ಬೆಂಗಳೂರು: ಕೊರೊನಾ ವಿರುದ್ಧದ ಹೋರಾಟಕ್ಕೆ ಇಡೀ ದೇಶವನ್ನೇ ಲಾಕ್​ಡೌನ್ ಮಾಡಲಾಗಿದೆ. ಈ ನಡುವೆ ಎಲ್ಲೂ ಮದ್ಯದಂಗಡಿಗಳು ತೆರೆದಿಲ್ಲ. ಇದರಿಂದ ಮದ್ಯಪ್ರಿಯರು ಪರಿತಪಿಸುವಂತಾಗಿದೆ. ಆದರೆ ಬೇಸರದ ಸಂಗತಿ ಎಂದರೆ ಸರ್ಕಾರಿ ವಾಹನದಲ್ಲಿಯೇ ಅಕ್ರಮವಾಗಿ ಮದ್ಯ ಸಾಗಾಟ ಮಾಡಲಾಗುತ್ತಿದೆ. ಸರ್ಕಾರಿ ಅಧಿಕಾರಿಗಳೇ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಮದ್ಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರಿಗೆ ಸೇರಿದ್ದು ಎಂದು ಹೇಳಲಾಗುತ್ತಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ಪೊಲೀಸರ ತಪಾಸಣೆ ವೇಳೆ ಸರ್ಕಾರಿ ಜಿಎಸ್‌ಟಿ ವಾಹನದಲ್ಲಿ ಮದ್ಯ ಸಾಗಿಸುತ್ತಿದ್ದರು. ಆರೋಪಿಗಳಾದ ವಿಶೇಷ್ ಗುಪ್ತಾ, ಗೋಪಿ ಎಂಬುವರನ್ನು ಬಂಧಿಸಲಾಗಿದ್ದು, 8 ಬಾಕ್ಸ್‌ಗಳಲ್ಲಿದ್ದ ದುಬಾರಿ ಬೆಲೆಯ ಮದ್ಯವನ್ನ ಪೊಲೀಸರು ವಶಕ್ಕೆ ಪಡೆದಿದ್ದರು. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಕೇಸ್​ನ ತನಿಖೆ ನಡೆಸಿದ್ದ ಎಸಿಪಿ ಅಮಾನತಿಗೆ ಶಿಫಾರಸು: ಪ್ರಕರಣದ ತನಿಖೆ ನಡೆಸಿದ್ದ ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಎಸಿಪಿ ವಾಸು ಅಮಾನತಿಗೆ ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಶಿಫಾರಸು ಮಾಡಿದ್ದಾರೆ. ಏ.11ರಂದು ಮುರುಗನ್ ಕಡೆಯವರಿಗೆ ಸೇರಿದ ಮದ್ಯ ಜಪ್ತಿ ಮಾಡಲಾಗಿತ್ತು. ಆಗ ಆರೋಪಿಗಳ ವಿರುದ್ಧ ಕೇಸ್ ದಾಖಲಿಸದಂತೆ ಮುರುಗನ್ ಎಚ್ಚರಿಕೆ ನೀಡಿದ್ರು. ಆರೋಪಿಗಳ ಹೇಳಿಕೆ ಪಡೆದು ನನ್ನ ವಿರುದ್ಧ ಸುಳ್ಳು ಆರೋಪ ಹೊರಿಸಿದ್ದಾರೆ. ಆರೋಪಿಗಳ ಬಿಡುಗಡೆಗೆ ನಾನು 50 ಲಕ್ಷ ಕೇಳಿದ್ದೇನೆಂದು ಸುಳ್ಳು ಆರೋಪ ಮಾಡಿ ಅಮಾನತಿಗೆ ಶಿಫಾರಸು ಮಾಡಿದ್ದಾರೆ ಎಂದು ಟಿವಿ9ಗೆ ಎಸಿಪಿ ವಾಸು ಪ್ರತಿಕ್ರಿಯೆ ನೀಡಿದ್ದಾರೆ.

https://www.facebook.com/Tv9Kannada/videos/313505882951490/

Published On - 4:15 pm, Fri, 24 April 20

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?