ಮಂಗಳೂರು ಮೂಡಾ ಆಯುಕ್ತರ ವಿರುದ್ಧ ಮಹಿಳಾ ಉದ್ಯೋಗಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ದೂರು ದಾಖಲು
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ವಿರುದ್ಧ ಮಹಿಳಾ ಉದ್ಯೋಗಿ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ. ಜನವರಿ 6ರಂದು ಉರ್ವ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ. ಹೀಗಾಗಿ ಐಪಿಸಿ ಸೆಕ್ಷನ್ 354, 354Aರಡಿ ಕೇಸ್ ದಾಖಲಿಸಿ ಪೊಲೀಸರಿಂದ ತನಿಖೆ ಮಾಡಲಾಗುತ್ತಿದೆ.
ಮಂಗಳೂರು, ಜನವರಿ 07: ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ವಿರುದ್ಧ ಮಹಿಳಾ ಉದ್ಯೋಗಿ ಲೈಂಗಿಕ ದೌರ್ಜನ್ಯ (assault) ಆರೋಪ ಮಾಡಿದ್ದಾರೆ. ಹೊರಗುತ್ತಿಗೆ ಆಧಾರದಲ್ಲಿ ಬೆರಳಚ್ಚುಗಾರ್ತಿಯಾಗಿ ಕೆಲಸ ಮಾಡುತ್ತಿದ್ದ ಮಹಿಳೆ ಮೂಡಾ ಆಯುಕ್ತ ಮನ್ಸೂರು ಅಲಿ ವಿರುದ್ಧ ಲೈಂಗಿಕ, ಮಾನಸಿಕ, ಹಾಗೂ ದೈಹಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ, ಜನವರಿ 6ರಂದು ಉರ್ವ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ. ಹೀಗಾಗಿ ಐಪಿಸಿ ಸೆಕ್ಷನ್ 354, 354Aರಡಿ ಕೇಸ್ ದಾಖಲಿಸಿ ಪೊಲೀಸರಿಂದ ತನಿಖೆ ಮಾಡಲಾಗುತ್ತಿದೆ.
ಮದುವೆ ಮಾಡಿಸೋದಾಗಿ ವಂಚನೆ, ಲೈಂಗಿಕ ಕಿರುಕುಳ ಆರೋಪ
ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲ್ಲೂಕಿನ ಅಮೀನಗಢ ಪಟ್ಟಣ ಪಂಚಾಯಿತಿ ಸದಸ್ಯ ಸಂಜು ಐಹೊಳಿ ವಿರುದ್ಧ ಮದುವೆ ಮಾಡಿಸುವುದಾಗಿ ವಂಚನೆ ಹಾಗೂ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿತ್ತು. ಅಮೀನಗಢ ಪಟ್ಟಣದ ಯುವತಿ ಭಾಗ್ಯಲಕ್ಷ್ಮಿ ಯಂಕಂಚಿ ಎಂಬ ಯುವತಿ, ತನ್ನ ಪ್ರಿಯಕರನೊಂದಿಗೆ ಮದುವೆ ಮಾಡಿಸುವುದಾಗಿ ಬರೊಬ್ಬರಿ 9 ಲಕ್ಷ ರೂ. ಹಣ ಪಡೆದು ವಂಚನೆ ಮಾಡಿದ್ದಾನೆ ಎಂದು ಯುವತಿ ಆರೋಪಿಸಿದ್ದರು.
ಇದನ್ನೂ ಓದಿ: ಹೆಲ್ಮೆಟ್‌ನಿಂದ ಹೊಡೆದು ಗರ್ಭಿಣಿ ಪತ್ನಿಯನ್ನು ಕೊಂದಿದ್ದ ಪತಿ ಬಂಧನ; ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಿದ್ದ
ಯುವತಿಯ ಆರೋಪಕ್ಕೆ ವೃತ್ತಿಯಲ್ಲಿ ವಕೀಲ, ಪಟ್ಟಣ ಪಂಚಾಯತಿ ಸದಸ್ಯ ಹಾಗೂ ಜಯಕರ್ನಾಟಕ ಸಂಘಟನೆ ಹುನಗುಂದ ತಾಲ್ಲೂಕಾಧ್ಯಕ್ಷ ಆಗಿರುವ ಸಂಜು ಐಹೊಳಿ ಅಲ್ಲಗಳೆದಿದ್ದಾರೆ.
ಬಸವ ಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಅವಹೇಳನ ಆರೋಪ: A.S.ಪಾಟೀಲ್ ನಡಹಳ್ಳಿ ಫೋಟೋಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ
ವಿಜಯಪುರ: ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಂತಿಯ ಸ್ವಾಮೀಜಿ ವಿರುದ್ಧ ರಾಜ್ಯ ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷ ಎಸ್ ಪಾಟೀಲ್ ನಡಹಳ್ಳಿ ಅವಹೇಳನಾಕಾರಿ ಹೇಳಿಕೆ ಆರೋಪ ಹಿನ್ನೆಲೆ ನಗರದ ಎ.ಎಸ್ ಪಾಟೀಲ್ ನಡಹಳ್ಳಿ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಪ್ರತಿಭಟನೆ ಮಾಡಿದ್ದಾರೆ.
ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀ ವಿರುದ್ಧ ನಡಹಳ್ಳಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಆರೋಪಿಸಿದ್ದು, ತಕ್ಷಣವೇ ಕೂಡಲಸಂಗಮ ಶ್ರೀಗಳಿಗೆ ಕ್ಷಮೆ ಕೇಳುವಂತೆ ಪಂಚಮಸಾಲಿ ಮುಖಂಡರು ಒತ್ತಾಯಿಸಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.