ಆರ್ಗ್ಯಾನಿಕ್​ ಚೀಲದ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ಆರೋಪ: ಎನ್ವಿ ಗ್ರೀನ್ ಬಯೋಟೆಕ್ ಮಾಲೀಕನ ವಿರುದ್ಧ ಎಫ್​ಐಆರ್​

ಸದ್ಯ ಅಶ್ವತ್ಥ್ ಹೆಗ್ಡೆ ವಿರುದ್ಧ ಐಪಿಸಿ ಸೆಕ್ಷನ್ 406, 420ರಡಿ ಪ್ರಕರಣ ದಾಖಲಿಸಲಾಗಿದೆ. ಚೀಲದ ಹೆಸರಲ್ಲಿ ಕೋಟಿಗಟ್ಟಲೇ ಫಂಡ್ ಕಲೆಕ್ಷನ್ ಆರೋಪ ಹಿನ್ನೆಲೆಯಲ್ಲಿ ನಾಗ್ಪುರ, ಛತ್ತೀಸ್​ಗಢ, ಹೈದರಾಬಾದ್​ನಲ್ಲೂ ಅಶ್ವತ್ಥ್ ವಿರುದ್ಧ ಕೇಸ್​​ ದಾಖಲಾಗಿದೆ.

ಆರ್ಗ್ಯಾನಿಕ್​ ಚೀಲದ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ಆರೋಪ: ಎನ್ವಿ ಗ್ರೀನ್ ಬಯೋಟೆಕ್ ಮಾಲೀಕನ ವಿರುದ್ಧ ಎಫ್​ಐಆರ್​
ಅಶ್ವತ್ಥ್​ ಹೆಗ್ಡೆ
Edited By:

Updated on: Nov 02, 2023 | 4:01 PM

ಬೆಂಗಳೂರು, ನವೆಂಬರ್ 2: ಆರ್ಗ್ಯಾನಿಕ್​ ಚೀಲದ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ಮಾಡಿದ ಆರೋಪದ ಮೇಲೆ ಎನ್ವಿ ಗ್ರೀನ್ ಬಯೋಟೆಕ್ (EnviGreen Biotech) ಮಾಲೀಕ ಅಶ್ವತ್ಥ್​ ಹೆಗ್ಡೆ ಎಂಬವರ ವಿರುದ್ಧ ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಅಶ್ವತ್ಥ್​ ಹೆಗ್ಡೆ (Ashwath Hegde) ವಿರುದ್ಧ ದೂರು ನೀಡಿದ್ದ ಉದ್ಯಮಿ ನೀಲಿಮಾ ಎಂಬವರು ದೂರು ನೀಡಿದ್ದರು.

ಪ್ಲಾಸ್ಟಿಕ್ ಬದಲು ಆರ್ಗ್ಯಾನಿಕ್ ಬ್ಯಾಗ್ ಕಂಡು ಹಿಡಿದಿದ್ದಾಗಿ ನಂಬಿಸಿದ್ದ ಅಶ್ವತ್ಥ್​ ಹೆಗ್ಡೆ, ಬಿಸಿ ನೀರಿನಲ್ಲಿ ಕರಗುವ ಕೈಚೀಲ ಮಾಡುವುದಾಗಿ ಭರವಸೆ ನೀಡಿದ್ದರು. ಯಂತ್ರ ಹಾಗೂ ಕಾರ್ಮಿಕರನ್ನು ಕೊಡುವುದಾಗಿ ಹೇಳಿದ್ದರು. 1.26 ಕೋಟಿ ರೂಪಾಯಿ ಮೌಲ್ಯದ ಯಂತ್ರ ಕೊಡುವುದಾಗಿ ಹೇಳಿದ್ದರು ಎಂಬುದಾಗಿ ನೀಲಿಮಾ ದೂರಿನಲ್ಲಿ ತಿಳಿಸಿದ್ದಾರೆ.

ಇದಕ್ಕಾಗಿ ಅಶ್ವತ್ಥ್ ಹೆಗ್ಡೆಗೆ 74 ಲಕ್ಷ ರೂಪಾಯಿ ಹಣವನ್ನು ದೂರುದಾರೆ ನೀಲಿಮಾ ನೀಡಿದ್ದರು. ಆದರೆ, 5 ಲಕ್ಷ ರೂಪಾಯಿ ಮೌಲ್ಯದ ಯಂತ್ರ ಕೊಟ್ಟು ಅಶ್ವತ್ಥ್ ಹೆಗ್ಡೆ ಮೋಸ ಮಾಡಿದ್ದಾರೆ. ತಯಾರಿಕಾ‌ ಜ್ಞಾನವೇ ಇಲ್ಲದ ಕಾರ್ಮಿಕರನ್ನು ನೀಡಿದ್ದಾರೆ. ಆರ್ಗ್ಯಾನಿಕ್ ಬ್ಯಾಗ್ ತಯಾರಿಕೆಗೆ ಕಚ್ಚಾ ವಸ್ತು ಸಹ ನೀಡಲಿಲ್ಲ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಕೌಟುಂಬಿಕ ಕಲಹ, ಚಾಕುವಿನಿಂದ ಇರಿದು ಸೋದರ ಮಾವನನ್ನೇ ಕೊಲೆಗೈದ ಅಳಿಯ

ಈ ವಿಚಾರವಾಗಿ ಪ್ರಶ್ನೆ ಮಾಡಿದಾಗ ಹೊಸ ಯಂತ್ರ ಕೊಡಿಸುವುದಾಗಿ ಹೇಳಿದ್ದರು. ನಂತರ ಯಂತ್ರ ಕೊಡದೇ, ಹಣವನ್ನೂ ವಾಪಸ್ ಕೊಡದೆ ವಂಚನೆ ಎಸಗಿದ್ದಾರೆ ಎಂದು ನಿಲೀಮಾ ದೂರು ನೀಡಿದ್ದರು.

ಸದ್ಯ ಅಶ್ವತ್ಥ್ ಹೆಗ್ಡೆ ವಿರುದ್ಧ ಐಪಿಸಿ ಸೆಕ್ಷನ್ 406, 420ರಡಿ ಪ್ರಕರಣ ದಾಖಲಿಸಲಾಗಿದೆ. ಚೀಲದ ಹೆಸರಲ್ಲಿ ಕೋಟಿಗಟ್ಟಲೇ ಫಂಡ್ ಕಲೆಕ್ಷನ್ ಆರೋಪ ಹಿನ್ನೆಲೆಯಲ್ಲಿ ನಾಗ್ಪುರ, ಛತ್ತೀಸ್​ಗಢ, ಹೈದರಾಬಾದ್​ನಲ್ಲೂ ಅಶ್ವತ್ಥ್ ವಿರುದ್ಧ ಕೇಸ್​​ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
Loading...
Unable to load recommendations.
Follow Us