ಬೆಂಗಳೂರಿನಲ್ಲಿ ಗ್ಯಾಂಗ್ ರೇಪ್ ಆರೋಪ: ನನಗೇನಾಗಿದೆ ತನಿಖೆ ನಡೆಸಿ ಎಂದು ದೂರು ನೀಡಿದ ಟೆಕ್ಕಿ

ಕೋರಮಂಗಲದಲ್ಲಿರುವ ಪಬ್​ಗೆ ಹೋಗಿದ್ದ ಟೆಕ್ಕಿ ಆಡುಗೋಡಿಯ ದೇವೇಗೌಡ ಲೇಔಟ್ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಎಚ್ಚರವಾದ ನಂತರ ನನಗೇನಾಗಿದೆ ತನಿಖೆ ನಡೆಸಿ ಎಂದು ಠಾಣೆಗೆ ದೂರು ನೀಡಿರುವ ಯುವತಿ, ತನ್ನ ಮೇಲೆ ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯ ನಡೆದಿರುವ ಶಂಕೆ ವ್ಯಕ್ತಪಡಿಸಿದ್ದಾಳೆ.

ಬೆಂಗಳೂರಿನಲ್ಲಿ ಗ್ಯಾಂಗ್ ರೇಪ್ ಆರೋಪ: ನನಗೇನಾಗಿದೆ ತನಿಖೆ ನಡೆಸಿ ಎಂದು ದೂರು ನೀಡಿದ ಟೆಕ್ಕಿ
ಪ್ರಾತಿನಿಧಿಕ ಚಿತ್ರImage Credit source: Shutterstock
Follow us
ರಾಚಪ್ಪಾಜಿ ನಾಯ್ಕ್
| Updated By: Rakesh Nayak Manchi

Updated on: Dec 14, 2023 | 10:30 PM

ಬೆಂಗಳೂರು, ಡಿ.14: ಪಬ್​ಗೆ ಹೋಗಿದ್ದ ಖಾಸಗಿ ಕಂಪನಿ ಟೆಕ್ಕಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಶಂಕೆ ಇದ್ದು, ತನಿಖೆ ನಡೆಸಿ ಎಂದು ನಗರದ (Bengaluru) ಕೋರಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ನನಗೇನಾಗಿದೆ ತನಿಖೆ ನಡೆಸಿ, ನನ್ನ ಮೇಲೆ ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯ ನಡೆದಿರುವ ಶಂಕೆ ಇದೆ ಎಂದು ಆರೋಪಿಸಿದ್ದಾಳೆ.

ಡಿಸೆಂಬರ್ 12ರ ರಾತ್ರಿ ಯುವತಿ ಕೋರಮಂಗಲದ ಪಬ್​ಗೆ ತೆರಳಿದ್ದಳು. ಬಳಿಕ ಮನೆಗೆ ತೆರಳಿರಲಿಲ್ಲ, ತಾನು ಎಲ್ಲಿದ್ದೇನೆ ಅನ್ನೋದು ಕೂಡ ಯುವತಿ ಗೊತ್ತಿರಲಿಲ್ಲ. ಪ್ರಜ್ಞೆ ಬಂದಾಗ ಯುವತಿ ಆಡುಗೋಡಿಯ ದೇವೇಗೌಡ ಲೇಔಟ್ ಬಳಿ ಇದ್ದಳು. ಇಲ್ಲೇ ಮನೆಯೊಂದರ ಬಾಗಿಲು ಬಡಿದಿದ್ದ ಯುವತಿ, ನಂತರ 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಳು.

ಇದನ್ನೂ ಓದಿ: ಭೋಪಾಲ್: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆ ಮೇಲೆ 3 ಬಾರಿ ಅತ್ಯಾಚಾರ

ಸ್ಥಳಕ್ಕೆ ಆಗಮಿಸಿದ ಆಡುಗೋಡಿ ಠಾಣಾ ಪೊಲೀಸರು ಯುವತಿಯನ್ನು ರಕ್ಷಿಸಿದ್ದರು. ಇಲ್ಲಿಂದ ಕೋರಮಂಗಲ ಠಾಣೆಗೆ ಕರೆದುಕೊಂಡು ಹೋಗಲಾಯಿತು. ಪ್ರಜ್ಞಾಹೀನಳಾಗಿದ್ದ ವೇಳೆ ನನ್ನ ಮೇಲೆ ಅತ್ಯಾಚಾರ ನಡೆದಿರುವ ಶಂಕೆಯಿದೆ. ನಾನೆಲ್ಲಿದ್ದೆ ಅನ್ನೋದರ ಬಗ್ಗೆ ತನಿಖೆ ಮಾಡಿ ಎಂದು ಪೊಲೀಸರಿಗೆ ದೂರು ಯುವತಿ ದೂರು ನೀಡಿದ್ದಾಳೆ. ಯುವತಿ ಹೇಳಿಕೆ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ