ಹಾವೇರಿಯಲ್ಲಿ ಎರಡೂವರೆ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಕಾಮುಕ ಅರೆಸ್ಟ್
ಅತ್ಯಾಚಾರಕ್ಕೆ ಒಳಗಾದ ಪುಟ್ಟ ಬಾಲಕಿ ತೀವ್ರ ಅಸ್ವಸ್ಥಳಾಗಿದ್ದು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹಾವೇರಿ: ಎರಡೂವರೆ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ವಿಕೃತ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಚನ್ನಪ್ಪ ಎಮ್ಮೇರ (42) ಬಂಧಿತ.
ರಾಣೆಬೆನ್ನೂರಿನಲ್ಲಿ ಘಟನೆ ನಡೆದಿದ್ದು, ಅತ್ಯಾಚಾರಕ್ಕೆ ಒಳಗಾದ ಪುಟ್ಟ ಬಾಲಕಿ ತೀವ್ರ ಅಸ್ವಸ್ಥಳಾಗಿದ್ದಾಳೆ. ಆಕೆಯನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚನ್ನಪ್ಪನನ್ನು ವಶಕ್ಕೆ ಪಡೆದ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.