ಆಂಧ್ರಪ್ರದೇಶ: ಪತ್ನಿ, ಇಬ್ಬರು ಮಕ್ಕಳನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪೊಲೀಸ್ ಹೆಡ್ ಕಾನ್​ಸ್ಟೆಬಲ್

ಆಂಧ್ರಪ್ರದೇಶದ ಪೊಲೀಸ್​ ಹೆಡ್​ ಕಾನ್​ಸ್ಟೆಬಲ್ ಒಬ್ಬರು ​ಪತ್ನಿ, ಇಬ್ಬರು ಮಕ್ಕಳನ್ನು ಗುಂಡಿಕ್ಕಿ ಕೊಂದು ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ವೈಯಕ್ತಿಕ ಕಾರಣಗಳಿಂದಾಗಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 1993ನೇ ಬ್ಯಾಚ್​ನ ಪೊಲೀಸ್​ ಅಧಿಕಾರಿ ಮನೆಯಿಂದ ಡೆತ್​ ನೋಟ್​ ವಶಪಡಿಸಿಕೊಳ್ಳಲಾಗಿದೆ.

ಆಂಧ್ರಪ್ರದೇಶ: ಪತ್ನಿ, ಇಬ್ಬರು ಮಕ್ಕಳನ್ನು ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪೊಲೀಸ್ ಹೆಡ್ ಕಾನ್​ಸ್ಟೆಬಲ್
ಸಾಂದರ್ಭಿಕ ಚಿತ್ರ
Image Credit source: India Today

Updated on: Oct 05, 2023 | 3:40 PM

ಆಂಧ್ರಪ್ರದೇಶದ ಪೊಲೀಸ್​ ಹೆಡ್​ ಕಾನ್​ಸ್ಟೆಬಲ್ ಒಬ್ಬರು ​ಪತ್ನಿ, ಇಬ್ಬರು ಮಕ್ಕಳನ್ನು ಗುಂಡಿಕ್ಕಿ ಕೊಂದು ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರ ವೈಯಕ್ತಿಕ ಕಾರಣಗಳಿಂದಾಗಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 1993ನೇ ಬ್ಯಾಚ್​ನ ಪೊಲೀಸ್​ ಅಧಿಕಾರಿ ಮನೆಯಿಂದ ಡೆತ್​ ನೋಟ್​ ವಶಪಡಿಸಿಕೊಳ್ಳಲಾಗಿದೆ.

ಪೊಲೀಸ್ ಅಧಿಕಾರಿಯ ಹೆಸರು ವೆಂಕಟೇಶ್ವರಲು ಕಡಪಾ ಪೊಲೀಸ್​ ಠಾಣೆಯಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿದ್ದರು. ರಾತ್ರಿ 11 ಗಂಟೆ ಸುಮಾರಿಗೆ ಕೆಸಲದಿಂದ ಮನೆಗೆ ವಾಪಸಾದ ವೆಂಕಟೇಶ್ವರಲು ಪಿಸ್ತೂಲ್ ಹಾಗೂ ಗುಂಡುಗಳನ್ನು ಮನೆಗೆ ಒಯ್ದಿದ್ದಾರೆ.

ಅವರ ಹಿರಿಯ ಮಗಳಿಗೆ 20 ವರ್ಷ ಅವರು ಮೊದಲ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದು, ಕಿರಿಯವಳು 10ನೇ ತರಗತಿ ಓದುತ್ತಿದ್ದಳು. ಅವರ ಪತ್ನಿಗೆ 45 ವರ್ಷ ವಯಸ್ಸಾಗಿತ್ತು.

ಮೂಲಗಳ ಪ್ರಕಾರ, ಹೆಡ್ ಕಾನ್‌ಸ್ಟೆಬಲ್ ಷೇರು ಮಾರುಕಟ್ಟೆ ವಹಿವಾಟಿನಲ್ಲಿ ಹಣವನ್ನು ಕಳೆದುಕೊಂಡಿದ್ದರು ಮತ್ತು ಕೆಲವು ಕೌಟುಂಬಿಕ ಸಮಸ್ಯೆಗಳೊಂದಿಗೆ ಹೋರಾಡುತ್ತಿದ್ದರು ಎಂದು ಹೇಳಲಾಗಿದೆ.

ವೆಂಕಟೇಶ್ವರಲು ಮನೆಗೆ ಕಡಪಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಕೌಶಲ್ ಭೇಟಿ ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ